ಮದ್ಯ ಮುಕ್ತ ಮಾಡಲು ಆಂದೋಲನ ಪ್ರಾರಂಭಿಸಿದ್ದ ಗಾಂಧೀಜಿ

| Published : Oct 16 2023, 01:45 AM IST

ಮದ್ಯ ಮುಕ್ತ ಮಾಡಲು ಆಂದೋಲನ ಪ್ರಾರಂಭಿಸಿದ್ದ ಗಾಂಧೀಜಿ
Share this Article
  • FB
  • TW
  • Linkdin
  • Email

ಸಾರಾಂಶ

ಹೊಸಕೋಟೆ: ಬ್ರಿಟೀಷರ ದಾಸ್ಯದಿಂದ ದೇಶವನ್ನು ರಕ್ಷಿಸಿದ ಕೀರ್ತಿ ಜೊತೆಗೆ ಪ್ರತಿಯೊಂದು ಕುಟುಂಬದ ಉತ್ತಮ ಬದುಕಿಗಾಗಿ ಮದ್ಯಪಾನ ಮುಕ್ತ ಮಾಡಲು ಆಂದೋಲನ ಮಾಡಿದ ಕೀರ್ತಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರಿಗೆ ಸಲ್ಲುತ್ತದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ನಿರ್ದೇಶಕ ಉಮರಬ್ಬ ತಿಳಿಸಿದರು.
ಹೊಸಕೋಟೆ: ಬ್ರಿಟೀಷರ ದಾಸ್ಯದಿಂದ ದೇಶವನ್ನು ರಕ್ಷಿಸಿದ ಕೀರ್ತಿ ಜೊತೆಗೆ ಪ್ರತಿಯೊಂದು ಕುಟುಂಬದ ಉತ್ತಮ ಬದುಕಿಗಾಗಿ ಮದ್ಯಪಾನ ಮುಕ್ತ ಮಾಡಲು ಆಂದೋಲನ ಮಾಡಿದ ಕೀರ್ತಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರಿಗೆ ಸಲ್ಲುತ್ತದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ನಿರ್ದೇಶಕ ಉಮರಬ್ಬ ತಿಳಿಸಿದರು. ನಗರದ ಅಂಬೇಡ್ಕರ್ ಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್, ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಸಹಯೋಗದಲ್ಲಿ 155ನೆ ಗಾಂಧಿ ಸ್ಮೃತಿ ಮತ್ತು ದುಶ್ಚಟಗಳ ವಿರುದ್ದ ಜಾಗೃತಿ ಕಾರ್ಯಕ್ರಮ ಹಾಗೂ ನವಜೀವನ ಸಮಿತಿ ಸದಸ್ಯರಿಗೆ ಅಂಭಿನಂದನೆ ಸಮಾರಂಭದಲ್ಲಿ ಮಾತನಾಡಿದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ರೂವಾರಿ ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ಸಮಾಜಮುಖಿ ಕಾರ್ಯಗಳು ನಡೆಯುತ್ತಿವೆ. ಆರೋಗ್ಯ, ಶಿಕ್ಷಣ, ಕೃಷಿ, ಮಹಿಳಾ ಸಬಲೀಕರಣ ದೃಷ್ಟಿಯಿಂದ ಹಲವಾರು ರೀತಿಯಲ್ಲಿ ಶ್ರಮಿಸುತ್ತಿದೆ. ಪ್ರಮುಖವಾಗಿ ಗಾಂಧೀ ಕಂಡ ರಾಮ ರಾಜ್ಯದ ಪರಿಕಲ್ಪನೆ ಸಾಕಾರಗೊಳಿಸುವ ದೃಷ್ಟಿಯಿಂದ ಮದ್ಯ ವರ್ಜನ ಶಿಬಿರ ಆಯೋಜಿಸಿ ಸಹಸ್ರಾರು ಕುಟುಂಬಗಳಿಗೆ ಬೆಳಕು ಚೆಲ್ಲುವ ಕೆಲಸ ಮಾಡಿದ್ದಾರೆ. ಹೊಸಕೋಟೆ ತಾಲೂಕಿನಲ್ಲಿ 5 ಮದ್ಯವರ್ಜನ ಶಿಬಿರಗಳ ಮೂಲಕ 250 ಜನ ಪರಿವರ್ತನೆ ಆಗಿ ಮದ್ಯ ಸೇವನೆ ಮುಕ್ತರಾಗಿ ನೆಮ್ಮದಿಯ ಜೀವನ ಮಾಡುವಂತೆ ಮಾಡಿದ್ದಾರೆ ಎಂದು ಹೇಳಿದರು. ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಸದಸ್ಯ ವೆಂಕಟೇಶ್ ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ದಶಕಗಳಿಂದ ಹಳ್ಳಿ, ನಗರ, ರಾಜ್ಯ, ರಾಷ್ಟ್ರಮಟ್ಟದಲ್ಲಿ ಶಾಖೆಗಳನ್ನು ಪ್ರಾರಂಭಿಸಿ ಅನೇಕ ಅರ್ಥಪೂರ್ಣ ಕಾರ್ಯಕ್ರಮಗಳ ಮೂಲಕ ಸಮಾಜದ ಉನ್ನತಿಗೆ ಶ್ರಮಿಸುತ್ತಿದೆ ಎಂದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಾಲೂಕು ಯೋಜನಾಧಿಕಾರಿ ಭೋಜಾ, ಜಿಲ್ಲಾ ಜನ ಜಾಗೃತಿ ವೇದಿಕೆ ಅಧ್ಯಕ್ಷೆ ವೀಣಾ ರಮೇಶ್, ಸದಸ್ಯರಾದ ಕುರುಬರಹಳ್ಳಿ ವೆಂಕಟೇಶ್, ತರಬಹಳ್ಳಿ ಹರೀಶ್, ಪೊಲೀಸ್ ಕೃಷ್ಣಪ್ಪ, ದೊಡ್ಡ ನಲ್ಲಾಳ ಶಂಕರ್, ಮಮತಾ, ತಾಲೂಕು ಯೋಜನಾಧಿಕಾರಿ ಭೋಜ ಇತರ ಗಣ್ಯರು ಹಾಜರಿದ್ದರು. ಬಾಕ್ಸ್............ 650 ಕೋಟಿ ಸಾಲ ವಿತರಣೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹೊಸಕೋಟೆ ತಾಲೂಕಿನಲ್ಲಿ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿದ್ದು 3670 ಸಂಘಗಳಿಗೆ 650 ಕೋಟಿ ಸಾಲ ಸೌಲಭ್ಯ ವಿತರಿಸಲಾಗಿದೆ. 32 ದೇವಾಲಯಗಳ ಅಭಿವೃದ್ಧಿಗೆ 50 ಲಕ್ಷ, 38 ಡೇರಿಗಳ ಅಭಿವೃದ್ಧಿಗೆ 40 ಲಕ್ಷ ಅನುದಾನ ಒದಗಿಸಿದೆ. ಪ್ರಮುಖವಾಗಿ ಶಿಕ್ಷಣ ಕ್ಷೇತ್ರದ ಉತ್ತೇಜನಕ್ಕೆ ರಾಜ್ಯದಲ್ಲಿ 1200 ಶಿಕ್ಷಕರನ್ನು ನಿಯೋಜಿಸಿ ಸಂಘದ ವತಿಯಿಂದ ವೇತನ ನೀಡುವ ಕಾರ್ಯ ಮಾಡಲಾಗಿದೆ ಎಂದು ತಾಲೂಕು ಯೋಜನಾಧಿಕಾರಿ ಭೋಜಾ ತಿಳಿಸಿದರು. ಫೋಟೋ: 15 ಹೆಚ್‌ಎಸ್‌ಕೆ 1 ಹೊಸಕೋಟೆ ನಗರದ ಅಂಭೆಡ್ಕರ ಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನಡೆದ ಗಾಂಧಿ ಸ್ಮೃತಿ ಕಾರ್ಯಕ್ರಮವನ್ನು ಜಿಲ್ಲಾ ನಿರ್ದೇಶಕ ಉಮರಬ್ಬ, ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷೆ ವೀಣಾ ರಮೇಶ್ ಉದ್ಘಾಟಿಸಿದರು.