ಮೂಡುಬಿದಿರೆಯಲ್ಲಿ ಕಾಂಗ್ರೆಸ್‌ನಿಂದ ಗಾಂಧಿ ನಡಿಗೆ

| Published : Oct 03 2024, 01:21 AM IST

ಸಾರಾಂಶ

ಕಾಂಗ್ರೆಸ್ ಸಮಾವೇಶಕ್ಕೆ ೧೦೦ ವರ್ಷ ಸಂದ ನೆನಪಿಗಾಗಿ ಕರ್ನಾಟಕ ಸರ್ಕಾರವು ಗಾಂಧಿ ನಡಿಗೆ ಹಮ್ಮಿಕೊಂಡ ಅಂಗವಾಗಿ ಮೂಡುಬಿದಿರೆಯಲ್ಲಿ ಗಾಂಧಿ ನಡಿಗೆ ನಡೆಯಿತು.

ಕನ್ನಡಪ್ರಭ ವಾರ್ತೆ ಮೂಡುಬಿದಿರೆ

ಗಾಂಧಿ ಜಯಂತಿ ಪ್ರಯುಕ್ತ ಕಾಂಗ್ರೆಸ್ ಪಕ್ಷದ ವತಿಯಿಂದ ಮೂಡುಬಿದಿರೆಯ ಸ್ವರಾಜ್ಯ ಮೈದಾನದಿಂದ ಸಮಾಜ ಮಂದಿರದ ವರೆಗೆ ಗಾಂಧಿ ನಡಿಗೆ ಕಾರ್ಯಕ್ರಮ ನಡೆಯಿತು.

ನಂತರ ಸಮಾಜ ಮಂದಿರದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಮಾತನಾಡಿ, ಮಹಾತ್ಮಗಾಂಧಿ ಅವರು ಬ್ಯಾರಿಸ್ಟರ್ ಆಗಿ ಇಂಗ್ಲೆಂಡ್‌ನಲ್ಲಿ ಪದವಿಯನ್ನು ಪಡೆದವರು. ಪ್ರಪಂಚದ ಇತಿಹಾಸವನ್ನು ತಿಳಿದಿದ್ದರಿಂದ ಅವರಿಗೆ ಸಾಮಾನ್ಯರ, ಬಡ ಜನರ ಬಗ್ಗೆ ಅರಿತು ಅವರ ಅಭಿವೃದ್ಧಿಗಾಗಿ ಶ್ರಮಪಟ್ಟವರು ಅವರು ಎಲ್ಲರಿಗೂ ಪ್ರೇರಣಾಶಕ್ತಿಯಾಗಿದ್ದಾರೆ. ಸ್ವಾಭಿಮಾನದ ಬದುಕನ್ನು ಕಟ್ಟಿಕೊಟ್ಟವರು ಮತ್ತು ಸ್ವಾತಂತ್ರವಾಗಿ ಬದುಕಲು ನಮಗೆಲ್ಲರಿಗೂ ಶಕ್ತಿಯಾಗಿರುವ ಗಾಂಧೀಜಿ ಅಹಿಂಸೆಯ ಮೂಲಕ ಸ್ವಾತಂತ್ರ್ಯ ಪಡೆಯಲು ಕಾರಣೀಕರ್ತರಾದವರು ಎಂದರು.

ಕಾಂಗ್ರೆಸ್ ಸಮಾವೇಶಕ್ಕೆ ೧೦೦ ವರ್ಷ ಸಂದ ನೆನಪಿಗಾಗಿ ಕರ್ನಾಟಕ ಸರ್ಕಾರವು ಗಾಂಧಿ ನಡಿಗೆ ಹಮ್ಮಿಕೊಂಡ ಹಿನ್ನೆಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ಕೆಪಿಸಿಸಿ ಸದಸ್ಯ ವಸಂತ ಬರ್ನಾಡ್, ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಲೇರಿಯನ್ ಸಿಕ್ವೇರಾ, ಮೂಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್, ಮೂಡುಬಿದಿರೆ ಯುವ ಕಾಂಗ್ರೆಸ್ ಅಧ್ಯಕ್ಷ ಜಯಕುಮಾರ್ ಶೆಟ್ಟಿ‌ ಮತ್ತು ಮೂಲ್ಕಿ ಯುವ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಪೂಜಾರಿ, ಬ್ಲಾಕ್ ಕಾಂಗ್ರೆಸ್ ನಗರಾಧ್ಯಕ್ಷ ಪುರಂದರ ದೇವಾಡಿಗ, ಪುರಸಭಾ ಸದಸ್ಯರು, ಕೆಪಿಸಿಸಿ ವಕ್ತಾರ ಪದ್ಮಪ್ರಸಾದ್ ಜೈನ್ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಂಡಿದ್ದರು.