ದೇಶಕ್ಕೆ ಗಾಂಧೀಜಿ, ಶಾಸ್ತ್ರಿಜಿ ಕೊಡುಗೆ ಅಪಾರ

| Published : Oct 03 2024, 01:22 AM IST

ಸಾರಾಂಶ

ಸತ್ಯ, ಅಹಿಂಸೆ, ಪ್ರಾಮಾಣಿಕತೆಯಿಂದ ಭಾರತಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮ ಗಾಂಧಿ ಅವರ ತತ್ವ-ಆದರ್ಶಗಳು ಭಾರತೀಯರಾದ ನಮಗೆ ಪ್ರೇರಣೆಯಾಗಿವೆ. ಅವರ ಮಾರ್ಗದರ್ಶನದಲ್ಲಿ ಮುನ್ನಡೆದಾಗ ಉತ್ತಮ ಸಮಾಜ ನಮ್ಮದಾಗುವುದು ಎಂದು ತಹಸೀಲ್ದಾರ್ ರುಕ್ಮಿಣಿಬಾಯಿ ಹೇಳಿದ್ದಾರೆ.

- ಚನ್ನಗಿರಿ ತಾಲೂಕು ಕಚೇರಿ ಕಾರ್ಯಕ್ರಮದಲ್ಲಿ ತಹಸೀಲ್ದಾರ್‌ ರುಕ್ಮಿಣಿ ಬಾಯಿ

- - - ಕನ್ನಡಪ್ರಭ ವಾರ್ತೆ ಚನ್ನಗಿರಿ

ಸತ್ಯ, ಅಹಿಂಸೆ, ಪ್ರಾಮಾಣಿಕತೆಯಿಂದ ಭಾರತಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮ ಗಾಂಧಿ ಅವರ ತತ್ವ-ಆದರ್ಶಗಳು ಭಾರತೀಯರಾದ ನಮಗೆ ಪ್ರೇರಣೆಯಾಗಿವೆ. ಅವರ ಮಾರ್ಗದರ್ಶನದಲ್ಲಿ ಮುನ್ನಡೆದಾಗ ಉತ್ತಮ ಸಮಾಜ ನಮ್ಮದಾಗುವುದು ಎಂದು ತಹಸೀಲ್ದಾರ್ ರುಕ್ಮಿಣಿಬಾಯಿ ಹೇಳಿದರು.

ಬುಧವಾರ ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಏರ್ಪಡಿಸಿದ್ದ ಗಾಂಧಿ ಜಯಂತಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಸತ್ಯವೇ ದೇವರು, ಸತ್ಯಶೋಧನೆಗಾಗಿ ಜೀವನವನ್ನೇ ಮುಡುಪಾಗಿಟ್ಟ ಮಹಾನೀಯರಾಗಿದ್ದಾರೆ. ಅಸತ್ಯದ ಮೇಲೆ ಸತ್ಯ ಜಯ ಗಳಿಸುತ್ತದೆ ಎಂದು ದೃಢವಾಗಿ ನಂಬಿದ್ದ ಗಾಂಧೀಜಿಯವರ ಜೀವನ ತೆರೆದ ಪುಸ್ತಕದಂತೆ ಇತ್ತು ಎಂದರು.

ದೇಶ ಕಂಡ ಅಪ್ರತಿಮ ಆಡಳಿತಗಾರ ಪ್ರಧಾನಮಂತ್ರಿಯಾಗಿ ಸೇವೆ ಸಲ್ಲಿಸಿದ ಸ್ವಾತಂತ್ರ್ಯ ಹೋರಾಟಗಾರ ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಸರಳ ಸಜ್ಜನಿಕೆ ರಾಜಕಾರಣಿಯಾಗಿದ್ದರು. ಅವರ ಆಡಳಿತದಲ್ಲಿ ಬಡವರು ಮತ್ತು ಮಧ್ಯಮ ವರ್ಗದ ಶ್ರೇಯೋಭಿವೃದ್ಧಿಗೆ ಹಲವಾರು ಯೋಜನೆಗಳನ್ನು ಜಾರಿಯಾಗಿದ್ದವು ಎಂದರು.

ತಾಲೂಕು ಆರೋಗ್ಯಾಧಿಕಾರಿ ಡಾ.ಶಿವಕುಮಾರ್, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರವೀಂದ್ರಕುಮಾರ್ ಅಥರ್ಗ, ಸಮಾಜ ಕಲ್ಯಾಣಾಧಿಕಾರಿ ಮಲ್ಲಿಕಾರ್ಜುನ್, ತೋಟಗಾರಿಕಾ ಇಲಾಖೆ ಸಹಾಯಕ ನಿರ್ದೇಶಕ ಶ್ರೀಕಾಂತ್, ತಾಲೂಕು ಅಧಿಕಾರಿಗಳು, ಕಚೇರಿ ಸಿಬ್ಬಂದಿ ಹಾಜರಿದ್ದರು.

- - - -2ಕೆಸಿಎನ್‌ಜಿ1:

ಚನ್ನಗಿರಿಯಲ್ಲಿ ಗಾಂಧೀಜಿ- ಶಾಸ್ತ್ರಿಜಿ ಜಯಂತಿ ಕಾರ್ಯಕ್ರಮವನ್ನು ತಹಶೀಲ್ದಾರ್ ರುಕ್ಮಿಣಿ ಬಾಯಿ ಉದ್ಘಾಟಿಸಿದರು.