ಅ.2ರಂದು ಗಾಂಧೀಜಿ, ಶಾಸ್ತ್ರೀಜಿ ಜಯಂತಿ: ಬಹುಮಾನ ವಿತರಣೆ

| Published : Sep 30 2025, 12:00 AM IST

ಸಾರಾಂಶ

ಜಿಲ್ಲಾಡಳಿತದಿಂದ ರಾಷ್ಟ್ರಪಿತ ಮಹಾತ್ಮ ಗಾಂಧಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮ ಅ.2ರ ಬೆಳಗ್ಗೆ 10 ಗಂಟೆಗೆ ನಗರದ ಶ್ರೀರಾಮ ನಗರದಲ್ಲಿರುವ ಗಾಂಧೀ ಭವನದಲ್ಲಿ ಏರ್ಪಡಿಸಲಾಗಿದೆ. ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆ ವಹಿಸುವರು. ಸಂಸದರು, ವಿಧಾನಸಭಾ ಸದಸ್ಯರು ಮತ್ತು ವಿಧಾನ ಪರಿಷತ್ತು ಸದಸ್ಯರು, ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

- ಜಿಲ್ಲಾಡಳಿತದಿಂದ ಶ್ರೀರಾಮ ನಗರ ಗಾಂಧೀ ಭವನದಲ್ಲಿ ಕಾರ್ಯಕ್ರಮ ಆಯೋಜನೆ: ಡಿಸಿ

- - -

ಕನ್ನಡಪ್ರಭ ವಾರ್ತೆ ದಾವಣಗೆರೆ

ಜಿಲ್ಲಾಡಳಿತದಿಂದ ರಾಷ್ಟ್ರಪಿತ ಮಹಾತ್ಮ ಗಾಂಧಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮ ಅ.2ರ ಬೆಳಗ್ಗೆ 10 ಗಂಟೆಗೆ ನಗರದ ಶ್ರೀರಾಮ ನಗರದಲ್ಲಿರುವ ಗಾಂಧೀ ಭವನದಲ್ಲಿ ಏರ್ಪಡಿಸಲಾಗಿದೆ. ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆ ವಹಿಸುವರು. ಸಂಸದರು, ವಿಧಾನಸಭಾ ಸದಸ್ಯರು ಮತ್ತು ವಿಧಾನ ಪರಿಷತ್ತು ಸದಸ್ಯರು, ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

ಗಾಂಧೀಜಿ, ಶಾಸ್ತ್ರೀಜಿ ಭಾವಚಿತ್ರಗಳಿಗೆ ಗಣ್ಯರು ಪುಷ್ಪಾರ್ಚನೆ ನೆರವೇರಿಸಲಿರುವರು. ಅನಂತರ ಶಿಕ್ಷಕರಿಂದ ಸಾಮೂಹಿಕ ಭಜನೆ ಕಾರ್ಯಕ್ರಮ ನಡೆಯಲಿದೆ. ಜಿಲ್ಲೆಯ ಸಮಸ್ತ ಜನಪ್ರತಿನಿಧಿಗಳು, ಗಣ್ಯರು, ಸಂಘ ಸಂಸ್ಥೆಗಳು, ಸಮಸ್ತ ನಾಗರೀಕರು, ಜಿಲ್ಲಾ ಮತ್ತು ತಾಲೂಕುಮಟ್ಟದ ಅಧಿಕಾರಿಗಳು/ ನೌಕರರು ಭಾಗವಹಿಸುವಂತೆ ಜಿಲ್ಲಾಧಿಕಾರಿ ಕೋರಿದ್ದಾರೆ.

ಗಾಂಧೀಜಿ, ಶಾಸ್ತ್ರೀಜಿ ಜಯಂತಿ ಅಂಗವಾಗಿ ಪ್ರೌಢಶಾಲಾ ವಿಭಾಗ, ಪದವಿ ಪೂರ್ವ ಹಾಗೂ ಪದವಿ/ ಸ್ನಾತಕೋತ್ತರ ಪದವಿ ವಿಭಾಗದಲ್ಲಿ ಪ್ರತ್ಯೇಕವಾದ ಪ್ರಬಂಧ ಸ್ಪರ್ಧೆ ವಿಜೇತರಿಗೆ ಅ.2ರಂದು ಬೆಳಗ್ಗೆ ಗಾಂಧೀ ಭವನದಲ್ಲಿ ಬೆಳಗ್ಗೆ 10 ಗಂಟೆಗೆ ನಗದು ಬಹುಮಾನ, ಪ್ರಮಾಣ ಪತ್ರ ವಿತರಿಸಲಾಗುವುದು.

ವಿಜೇತರು:

ಪ್ರೌಢಶಾಲಾ ವಿಭಾಗದಲ್ಲಿ ಮೆಳ್ಳೆಕಟ್ಟೆ ಸರ್ಕಾರಿ ಪ್ರೌಢಶಾಲೆಯ ಬಿ.ಟಿ.ಚೇತನ ಪ್ರಥಮ ಸ್ಥಾನ, ಎಂ.ಐಶ್ವರ್ಯ ದ್ವಿತೀಯ ಸ್ಥಾನ, ನಯನ ತೃತೀಯ ಸ್ಥಾನ ಪಡೆದಿದ್ದಾರೆ. ಪದವಿ ಪೂರ್ವ ವಿಭಾಗದಲ್ಲಿ ದಾವಣಗೆರೆ ಸಿದ್ದಗಂಗಾ ಪದವಿಪೂರ್ವ ಕಾಲೇಜಿನ ಎಂ.ಮಾನ್ಯಶ್ರೀ ಪ್ರಥಮ ಸ್ಥಾನ, ಅಮೃತ ಪದವಿಪೂರ್ವ ಕಾಲೇಜಿನ ಎಚ್.ಸೌಖ್ಯ ದ್ವಿತೀಯ ಸ್ಥಾನ, ಮೋತಿವೀರಪ್ಪ ಸರ್ಕಾರಿ ಪಪೂ ಕಾಲೇಜಿನ ಆರ್.ತಸ್ಲೀಂ ತೃತೀಯ ಸ್ಥಾನ ಪಡೆದಿದ್ದಾರೆ.

ಪದವಿ/ಸ್ನಾತಕೋತ್ತರ ಪದವಿ ವಿಭಾಗದಲ್ಲಿ ಜಿಎಂಜಿಸಿ ಕಾಲೇಜಿನ ಟಿ.ಯಾಸ್ಮಿನ್ ಪ್ರಥಮ ಸ್ಥಾನ, ಡಿ.ಆರ್.ಎಂ. ಸೈನ್ಸ್ ಕಾಲೇಜಿನ ಎನ್.ಓಂಕಾರ್ ದ್ವಿತೀಯ ಸ್ಥಾನ, ಬಸವಪಟ್ಟಣದ ಜನತಾ ಸರ್ಕಾರಿ ಪ್ರಥಮ ದರ್ಜೆ ಪದವಿ ಕಾಲೇಜಿನ ಎಸ್.ಜೆ.ನವ್ಯ ತೃತೀಯ ಸ್ಥಾನ ಪಡೆದಿದ್ದಾರೆ. ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದ ವಿಜೇತರಿಗೆ ಕ್ರಮವಾಗಿ ₹3000, ₹2000 ಮತ್ತು ₹1000 ನಗದು ಬಹುಮಾನ ಮತ್ತು ಪ್ರಮಾಣ ಪತ್ರ ವಿತರಿಸಲಾಗುವುದು ಎಂದು ಡಿಸಿ ತಿಳಿಸಿದ್ದಾರೆ.

- - -

(ಸಾಂದರ್ಭಿಕ ಚಿತ್ರ)

ಗಾಂಧೀಜಿ, ಶಾಸ್ತ್ರೀಜಿ