ಸಾರಾಂಶ
ಕನ್ನಡಪ್ರಭ ವಾರ್ತೆ ವಿಜಯಪುರ ಜಿಲ್ಲಾ ಕಾಂಗ್ರೆಸ್‌ನಿಂದ ನಗರದಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕೆಪಿಸಿಸಿ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಲೋಣಿ ಅಧ್ಯಕ್ಷತೆಯಲ್ಲಿ ಮಹಾತ್ಮಾಗಾಂಧಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರೀ ಅವರ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಯಿತು. ಈ ವೇಳೆ ಅವರ ಭಾವಚಿತ್ರಕ್ಕೆ ಪುಷ್ಪನಮನ ಮಾಡಿ ಗೌರವ ಸಲ್ಲಿಸಲಾಯಿತು.
ಕನ್ನಡಪ್ರಭ ವಾರ್ತೆ ವಿಜಯಪುರ
ಜಿಲ್ಲಾ ಕಾಂಗ್ರೆಸ್‌ನಿಂದ ನಗರದಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕೆಪಿಸಿಸಿ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಲೋಣಿ ಅಧ್ಯಕ್ಷತೆಯಲ್ಲಿ ಮಹಾತ್ಮಾಗಾಂಧಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರೀ ಅವರ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಯಿತು. ಈ ವೇಳೆ ಅವರ ಭಾವಚಿತ್ರಕ್ಕೆ ಪುಷ್ಪನಮನ ಮಾಡಿ ಗೌರವ ಸಲ್ಲಿಸಲಾಯಿತು.ಬೆಳಿಗ್ಗೆ 8 ಗಂಟೆಗೆ ನಗರದ ಜಿಲ್ಲಾ ಪಂಚಾಯತಿ ಗೇಟ್‌ನಿಂದ, ವಜ್ರಹನುಮಾನ ರೈಲ್ವೆ ಗೇಟ್ ಮಾರ್ಗವಾಗಿ ನಾಗಠಾಣ ಬ್ಲಾಕ್ ಅಧ್ಯಕ್ಷರ ನೇತೃತ್ವದಲ್ಲಿ ಜಿಲ್ಲಾ ಕಾಂಗ್ರೆಸ್ ಕಚೇರಿವರೆಗೆ ಪಾದಯಾತ್ರೆಯ ಮೂಲಕ ಗಾಂಧಿ ಭಾರತ ಯಾತ್ರೆಯನ್ನು ನಡೆಸಲಾಯಿತು. ಸಭೆಯಲ್ಲಿ ಕಾಂಗ್ರೆಸ್ ಮುಖಂಡ ಅಬ್ದುಲ್ ಹಮೀದ್ ಮುಶ್ರೀಫ್, ಮಹಿಳಾ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷೆ ವಿದ್ಯಾರಾಣಿ ತುಂಗಳ, ಕಾಂತಾ ನಾಯಕ, ಅಬ್ದುಲ ರಜಾಕ್ ಹೊರ್ತಿ, ಮಹಾನಗರ ಪಾಲಿಕೆ ಮಹಾಪೌರ ಮೆಹೆಜಬೀನ್ ಹೊರ್ತಿ, ಉಪಮಹಾಪೌರ ದಿನೇಶ ಹಳ್ಳಿ, ಬಿಡಿಎ ಅಧ್ಯಕ್ಷ ಕನ್ನಾನ್ ಮುಶ್ರೀಫ್, ಸುಭಾಷ ಕಾಲೇಬಾಗ, ಗಂಗಾಧರ ಸಂಬಣ್ಣಿ, ವಸಂತ ಹೊನಮೋಡೆ, ಜಮೀರ ಅಹಮ್ಮದ್ ಭಕ್ಷಿ, ವೈಜನಾಥ ಕರ್ಪೂರಮಠ, ಸ್ನೇಹಲತಾ ಶೆಟ್ಟಿ, ಹಮೀದಾ ಪಟೇಲ್, ಹರೀಶ ಕವಲಗಿ, ಸಲೀಮ್ ಫಿರ್ಜಾದೆ, ಶಾಹಜಾನ ಮುಲ್ಲಾ, ಶಬ್ಬೀರ ಜಾಗಿರದಾರ ಸೇರಿದಂತೆ ಮಹಾತ್ಮಾಗಾಂಧಿಜೀ ಅಭಿಮಾನಿಗಳು, ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು, ಪದಾಧಿಕಾರಿಗಳು ಉಪಸ್ಥಿತರಿದ್ದರು.ಈ ವೇಳೆ ಕೆಪಿಸಿಸಿ ಕಚೇರಿಯಲ್ಲಿ ನಡೆದ ಗಾಂಧಿ ಜಯಂತಿ ಕಾರ್ಯಕ್ರಮದ ನೇರ ಪ್ರಸಾರವನ್ನು ಎಲ್‌ಸಿಡಿ ಪರದೆಯ ಮುಖಾಂತರ ಕಾರ್ಯಕರ್ತರು ವೀಕ್ಷಿಸಲು ವ್ಯವಸ್ಥೆ ಮಾಡಲಾಗಿತ್ತು.