ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಸತ್ಯಾಗ್ರಹ, ಅಹಿಂಸಾ ತತ್ವಗಳು, ಅಸ್ಪೃಶ್ಯತೆ, ಗ್ರಾಮ ಸ್ವರಾಜ್ ಹಾಗೂ ಅರ್ಥ ವ್ಯವಸ್ಥೆಯ ತತ್ವಗಳು ನಮ್ಮ ದೇಶಕ್ಕೆ ಮಾತ್ರವಲ್ಲದೆ ಇಡೀ ಜಗತ್ತಿಗೆ ಮಾದರಿಯಾಗಿವೆ ಎಂದು ಜಿಲ್ಲಾಧಿಕಾರಿ ಡಾ.ಆನಂದ.ಕೆ ಹೇಳಿದರು.
ಕನ್ನಡಪ್ರಭ ವಾರ್ತೆ ವಿಜಯಪುರ
ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಸತ್ಯಾಗ್ರಹ, ಅಹಿಂಸಾ ತತ್ವಗಳು, ಅಸ್ಪೃಶ್ಯತೆ, ಗ್ರಾಮ ಸ್ವರಾಜ್ ಹಾಗೂ ಅರ್ಥ ವ್ಯವಸ್ಥೆಯ ತತ್ವಗಳು ನಮ್ಮ ದೇಶಕ್ಕೆ ಮಾತ್ರವಲ್ಲದೆ ಇಡೀ ಜಗತ್ತಿಗೆ ಮಾದರಿಯಾಗಿವೆ ಎಂದು ಜಿಲ್ಲಾಧಿಕಾರಿ ಡಾ.ಆನಂದ.ಕೆ ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ನಗರದ ಗಾಂಧಿ ಭವನದಲ್ಲಿ ಆಯೋಜಿಸಲಾದ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀಜಿ ಅವರ ಜಯಂತಿ ಕಾರ್ಯಕ್ರಮದಲ್ಲಿ ಚರಕದ ನೂಲು ನೇಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀಜಿಯವರ ಜೀವನಾದರ್ಶಗಳು ಪ್ರತಿಯೊಬ್ಬರ ಬದುಕಿಗೆ ಸ್ಫೂರ್ತಿದಾಯಕವಾಗಿದ್ದು, ಅವರಿಬ್ಬರ ಜೀವನಾದರ್ಶ ಹಾಗೂ ಮಾನವೀಯ ಮೌಲ್ಯಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು. ಸಾಹಿತಿ ಮಾಧವ ಗುಡಿ ವಿಶೇಷ ಉಪನ್ಯಾಸ ನೀಡಿದರು.
ಕಾರ್ಯಕ್ರಮಕ್ಕೂ ಮೊದಲು, ನಗರದ ಸೈನಿಕ ಶಾಲೆ ಹತ್ತಿರದ ಲಾಲ್‌ಬಹಾದ್ದೂರ ಶಾಸ್ತ್ರಿಯವರ ಪುತ್ಥಳಿಗೆ ಹಾಗೂ ನಗರದ ಹೃದಯಭಾಗದ ಗಾಂಧಿವೃತ್ತದ ಗಾಂಧಿ ಪ್ರತಿಮೆಗೆ ಸಂಸದ ರಮೇಶ ಜಿಗಜಿಣಗಿ, ಮೇಯರ್ ಮಡಿವಾಳಪ್ಪ ಕರಡಿ, ಜಿಲ್ಲಾಧಿಕಾರಿ ಡಾ.ಆನಂದ.ಕೆ, ಜಿಪಂ ಕಾರ್ಯ ನಿರ್ವಹಣಾಧಿಕಾರಿ ಆನಂದ ಪ್ರಕಾಶ ಮೀನಾ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಮಾಲಾರ್ಪಣೆ ಮಾಡಿ ಗೌರವಿಸಿದರು.ಕಾರ್ಯಕ್ರಮದಲ್ಲಿ ವಿಡಿಎ ಅಧ್ಯಕ್ಷ ಡಾ.ಗಂಗಾಧರ ಸಂಬಣ್ಣಿ, ಪಾಲಿಕೆ ಸದಸ್ಯರಾದ ರಾಜಶೇಖರ ಮಗಿಮಠ, ಆರತಿ ಶಹಾಪೂರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ ಪ್ರಕಾಶ ಮೀನಾ, ವಿಜಯಪುರ ಉಪವಿಭಾಗಾಧಿಕಾರಿ ಜುಫಿಶಾನ್ ಹಕ್, ವಿಡಿಎ ಆಯುಕ್ತ ರಾಜಶೇಖರ ಡಂಬಳ, ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಹೇಶ ಪೋತದಾರ, ವಾರ್ತಾಧಿಕಾರಿ ಅಮರೇಶ ದೊಡಮನಿ, ತಹಸೀಲ್ದಾರ ಪ್ರಶಾಂತ ಚನಗೊಂಡ, ವಿವಿಧ ಇಲಾಖೆ ಅಧಿಕಾರಿಗಳಾದ ರಾಜಶೇಖರ ದೈವಾಡಿ, ಸಂತೋಷ ಭೋವಿ, ಅಧಿಕಾರಿ ನಾರಾಯಣ ಕಾಂಬ್ಳೆ, ಸುರೇಶ ಘೋಣಸಗಿ, ಅಭಿಷೇಕ ಚಕ್ರವರ್ತಿ ಉಪಸ್ಥಿತರಿದ್ದರು.