ಸಾರಾಂಶ
ಬೆಳಗಾವಿಯಲ್ಲಿ 1924ರಲ್ಲಿ ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ಜರುಗಿದ ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ಹಿನ್ನೆಲೆ ನಗರದ ಟಿಳಕವಾಡಿಯ ವೀರಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಹಾತ್ಮ ಗಾಂಧೀಜಿ ಪುತ್ಥಳಿ ಅನಾವರಣಗೊಳಿಸಿದರು.
ಬೆಳಗಾವಿ : ಬೆಳಗಾವಿಯಲ್ಲಿ 1924ರಲ್ಲಿ ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ಜರುಗಿದ ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ಹಿನ್ನೆಲೆ ನಗರದ ಟಿಳಕವಾಡಿಯ ವೀರಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಹಾತ್ಮ ಗಾಂಧೀಜಿ ಪುತ್ಥಳಿ ಅನಾವರಣಗೊಳಿಸಿದರು. ಇದೇ ಸಂದರ್ಭದಲ್ಲಿ ನವೀಕೃತ ಫೋಟೋ ಗ್ಯಾಲರಿಯನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಲೋಕಾರ್ಪಣೆಗೊಳಿಸಿದರು.
ಸಚಿವರಾದ ಎಚ್.ಕೆ. ಪಾಟೀಲ, ಎಂ.ಬಿ. ಪಾಟೀಲ, ಎಚ್.ಸಿ. ಮಹದೇವಪ್ಪ, ಲಕ್ಷ್ಮೀ ಹೆಬ್ಬಾಳಕರ್, ಶರಣಪ್ರಕಾಶ್ ದರ್ಶನಾಪುರ, ಕೆ.ಎಚ್. ಮುನಿಯಪ್ಪ, ಶಾಸಕ ಆಸಿಫ್ (ರಾಜು) ಸೇಠ್, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ಮಾಜಿ ಆರ್.ವಿ. ದೇಶಪಾಂಡೆ, ವಾರ್ತಾ ಇಲಾಖೆ ಕಾರ್ಯದರ್ಶಿ ಕಾವೇರಿ ಬಿ.ಬಿ., ಆಯುಕ್ತ ಹೇಮಂತ್ ನಿಂಬಾಳ್ಕರ್, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಒಂ ಸಿಇಒ ರಾಹುಲ್ ಶಿಂಧೆ, ವಾರ್ತಾ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ ಡೊಳ್ಳಿನ, ಉಪ ನಿರ್ದೆಶಕ ಗುರುನಾಥ ಕಡಬೂರ ಮತ್ತಿತರರು ಉಪಸ್ಥಿತರಿದ್ದರು.