ಇಬ್ರಾಹಿಂಪುರದಲ್ಲಿ ಗಾಂಧೀಜಿ ಪುತ್ಥಳಿ ಅನಾವರಣ

| Published : Jan 31 2025, 12:46 AM IST

ಸಾರಾಂಶ

ಶಿಗ್ಗಾಂವಿ ತಾಲೂಕಿನ ಇಬ್ರಾಹಿಂಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯಲ್ಲಿ ಗ್ರಾಮಸ್ಥರ ಹಾಗೂ ದಾನಿಗಳ ಸಹಾಯದಿಂದ ನಿರ್ಮಾಣವಾದ ವಿವಿಧ ಕಾಮಗಾರಿಗಳ ಉದ್ಘಾಟನೆ, ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಪುತ್ಥಳಿ ಅನಾವರಣ ಹಾಗೂ ಗುರುವಂದನಾ ಕಾರ್ಯಕ್ರಮಗಳು ಸರ್ಕಾರಿ ಶಾಲಾ ಆವರಣದಲ್ಲಿ ಫೆ. ೩೧ರಂದು ಬೆಳಗ್ಗೆ ೧೦ ಗಂಟೆಗೆ ಆರಂಭಗೊಳ್ಳಲಿವೆ.

ಶಿಗ್ಗಾಂವಿ: ತಾಲೂಕಿನ ಇಬ್ರಾಹಿಂಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯಲ್ಲಿ ಗ್ರಾಮಸ್ಥರ ಹಾಗೂ ದಾನಿಗಳ ಸಹಾಯದಿಂದ ನಿರ್ಮಾಣವಾದ ವಿವಿಧ ಕಾಮಗಾರಿಗಳ ಉದ್ಘಾಟನೆ, ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಪುತ್ಥಳಿ ಅನಾವರಣ ಹಾಗೂ ಗುರುವಂದನಾ ಕಾರ್ಯಕ್ರಮಗಳು ಸರ್ಕಾರಿ ಶಾಲಾ ಆವರಣದಲ್ಲಿ ಫೆ. ೩೧ರಂದು ಬೆಳಗ್ಗೆ ೧೦ ಗಂಟೆಗೆ ಆರಂಭಗೊಳ್ಳಲಿವೆ.

“ಸರ್ಕಾರಿ ಶಾಲೆ ಹೀಗೂ ಇರುತ್ತಾ” ಎನ್ನುವ ಶೀರ್ಷಿಕೆಯಡಿ ಕಾರ್ಯಕ್ರಮ ನಡೆಯಲಿದ್ದು, ಸದಾಶಿವಪೇಟೆ ಶರಣ ಬಸವೇಶ್ವರಮಠದ ಶಿವದೇವಶರಣರ ಸಾನ್ನಿಧ್ಯ ವಹಿಸುವರು. ಶಾಲಾ ಸುಧಾರಣಾ ಸಮಿತಿ ಅಧ್ಯಕ್ಷ ಸಹದೇವಪ್ಪ ಸಂ. ಗುಳೇದಕೇರಿ ಅಧ್ಯಕ್ಷತೆ ವಹಿಸುವರು. ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಸಂಸದ ಪ್ರಹ್ಲಾದ ಜೋಶಿ, ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಉದ್ಘಾಟಿಸುವರು.

ಶಿಗ್ಗಾಂವಿ-ಸವಣೂರು ಶಾಸಕ ಯಾಸೀರ್‌ ಅಹ್ಮದ್‌ಖಾನ್‌ ಪಠಾಣ ಮಹಾತ್ಮಾ ಗಾಂಧೀಜಿ ಪುತ್ಥಳಿ ಅನಾವರಣಗೊಳಿಸುವರು. ಸಿಸಿ ಕ್ಯಾಮೆರಾ ಉದ್ಘಾಟನೆಯನ್ನು ಹೆಸ್ಕಾಂ ಅಧ್ಯಕ್ಷ ಅಜಂಪೀರ್ ಎಸ್. ಖಾದ್ರಿ, ಸೋಮಣ್ಣ ಬೇವಿನಮರದ ನೆರವೇರಿಸುವರು.

ಬೆಂಗಳೂರು ಬೆಸ್ಕಾಂ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಉಪಸ್ಥಿತರಿರುವರು. ಧಾರವಾಡ ಆಯುಕ್ತರ ಕಾರ್ಯಾಲಯ ಕಮಿಷನರ್ ಜಯಶ್ರೀ ಶಿಂತ್ರಿ ಶೈಕ್ಷಣಿಕ ಚಟುವಟಿಕೆಗಳ ಮಾಹಿತಿ ಪ್ರಾಜೆಕ್ಟರ್‌ ಉದ್ಘಾಟಿಸುವರು.

ಸಿಪ್ಲೆಸ್ ನಿರ್ದೇಶಕ ಡಾ. ಬಿ.ಕೆ.ಎಸ್. ವರ್ಧನ್, ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ. ಜಗದೀಶ, ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿ ರಮೇಶ ಕೋನರೆಡ್ಡಿ ವಿಜ್ಞಾನ ವಸ್ತು ಪ್ರದರ್ಶನ ಉದ್ಘಾಟಿಸುವರು.

ಹಾವೇರಿ ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಶುಕುಮಾರ ಶಾಲಾ ಕಾಂಪೌಂಡ್ ಹಾಗೂ ದ್ವಾರಬಾಗಿಲು ಉದ್ಘಾಟಿಸುವರು.

ಜಿಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಅಕ್ಷಯ ಶ್ರೀಧರ, ನಿರ್ಮಿತಿ ಕೇಂದ್ರದ ಯೋಜನಾಧಿಕಾರಿ ತಿಮ್ಮೇಶ ಕುಮಾರ ಶಾಲಾ ಮೈದಾನ ಉದ್ಘಾಟಿಸುವರು. ಭೂದಾನಿಗಳ ಫಲಕ ಅನಾವರಣ ಡಿಡಿಪಿಐ ಸುರೇಶ ಹುಗ್ಗಿ ಹಾಗೂ ಗಿರೀಶ ಪದಕಿ ನಡೆಸಿಕೊಡುವರು.

ಹಾವೇರಿ ಪಂಚಾಯತ್‌ರಾಜ್‌ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರ ದಿಲ್‌ಶಾದ್ ಬೇಗಂ ಮೂಗನೂರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಬಿ. ಅಂಬಿಗೇರ ಶಾಲಾ ಹೈಟೆಕ್ ಶೌಚಾಲಯ ಉದ್ಘಾಟಿಸುವರು.

ಕಾರ್ಯಕ್ರಮದಲ್ಲಿ ಗ್ರಾಮೀಣ ಪ್ರತಿಭೆಗಳಿಗೆ, ವಿಶೇಷ ಅತಿಥಿಗಳನ್ನು ಸನ್ಮಾನಿಸಲಾಗುವುದು. ಸಾಯಂಕಾಲ ೬ ಗಂಟೆಗೆ ಜಿ. ಕನ್ನಡ ಸರಿಗಮಪ ಖ್ಯಾತಿಯ ರುಬಿನಾ ನದಾಫ ಹಾಗೂ ಶಾಲಾ ಮಕ್ಕಳಿಂದ ಸಂಗೀತ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುವವು ಎಂದು ಶಾಲಾ ಆಡಳಿತ ಮಂಡಳಿ ಪ್ರಕಟಣೆ ತಿಳಿಸಿದೆ.