ಗೆಲುವಿನ ಬಳಿಕ ಮಾತನಾಡಿದ ನೂತನ ಅಧ್ಯಕ್ಷ ಗಣೇಶ್ ಚಿಮ್ಮಬಾಲ್ಕರ್, ಮೂರು ವರ್ಷಗಳ ಅವಧಿಗೆ ನಡೆದ ಈ ಚುನಾವಣೆಯಲ್ಲಿ ಸಮಾಜದ ಬಾಂಧವರ ಬೆಂಬಲದಿಂದ ಗೆಲುವು ಸಾಧಿಸಿದ್ದೇನೆ. ಈ ಗೆಲುವು ನನ್ನೊಬ್ಬನ ಗೆಲುವಲ್ಲ. ಸಮಾಜದ ಎಲ್ಲ ಬಂಧುಗಳು ಹಾಗೂ ಹಿಂದಿನ ಆಡಳಿತ ಮಂಡಳಿಯ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿಗಳು ಮತ್ತು ಗೌರವಾಧ್ಯಕ್ಷರು ನೀಡಿದ ಸಹಕಾರವೇ ಇದಕ್ಕೆ ಪ್ರಮುಖ ಕಾರಣವಾಗಿದೆ. ಮಹಿಳಾ ಮಂಡಳಿಯವರು ಅತ್ಯಂತ ಅಚ್ಚುಕಟ್ಟಾಗಿ ಹಾಗೂ ಉತ್ತಮ ರೀತಿಯಲ್ಲಿ ಚುನಾವಣೆಯನ್ನು ನಡೆಸಿಕೊಟ್ಟಿದ್ದಾರೆ. ಮುಂದಿನ ದಿನಗಳಲ್ಲಿ ಸಮಾಜದ ಎಲ್ಲ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಎಲ್ಲರ ಸಹಕಾರದೊಂದಿಗೆ ಸಮಾಜದ ಏಳಿಗೆ ಹಾಗೂ ಅಭಿವೃದ್ಧಿಗಾಗಿ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದು ತಿಳಿಸಿದರು.
ಕನ್ನಡಪ್ರಭ ವಾರ್ತೆ ಬೇಲೂರು ಪಟ್ಟಣದ ಶ್ರೀ ಪಾಂಡುರಂಗ ರುಕ್ಮಿಣಿ ದೇವಾಲಯದಲ್ಲಿ ನಡೆದ ಭಾವಸಾರ ಕ್ಷತ್ರಿಯ ಸಮಾಜದ ಅಧ್ಯಕ್ಷರ ಚುನಾವಣೆಯಲ್ಲಿ ಗಣೇಶ್ ಚಿಮ್ಮಬಾಲ್ಕರ್ ಸಮಾಜದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.ತಾಲೂಕು ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಇಬ್ಬರು ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಕಾರ್ತಿಕ್ ರಾವ್ ಅವರು 123 ಮತಗಳನ್ನು ಪಡೆದರೆ, ಗಣೇಶ್ ಚಿಮ್ಮಬಾಲ್ಕರ್ ಅವರು 167 ಮತಗಳನ್ನು ಪಡೆದು ವಿಜಯಶಾಲಿಯಾದರು. ಸಮಾಜದ ಮಹಿಳಾ ಮಂಡಳಿ ಅಧ್ಯಕ್ಷೆ ಜ್ಯೋತಿ ಗಣೇಶ್ ಅವರ ಅಧ್ಯಕ್ಷತೆಯಲ್ಲಿ ಚುನಾವಣಾ ಪ್ರಕ್ರಿಯೆ ನಡೆಯಿತು. ಚುನಾವಣೆಯನ್ನು ಶಾಂತಿಯುತವಾಗಿ ಹಾಗೂ ಪಾರದರ್ಶಕವಾಗಿ ನಡೆಸುವ ಉದ್ದೇಶದಿಂದ ಸಮಾಜದ ಸದಸ್ಯರಾದ ರೇಖಾ ದೀಪಕ್, ರಾಜೇಶ್ವರಿ ಅಶೋಕ್, ಸೌಮ್ಯ ಅಶೋಕ್ ಹಾಗೂ ರೇಖಾ ಕುಮಾರ್ ಅವರನ್ನು ಚುನಾವಣಾ ಅಧಿಕಾರಿಗಳಾಗಿ ನೇಮಿಸಲಾಗಿತ್ತು. ಇವರ ನೇತೃತ್ವದಲ್ಲಿ ಚುನಾವಣೆ ಸುಸೂತ್ರವಾಗಿ ಜರುಗಿತು.ಗೆಲುವಿನ ಬಳಿಕ ಮಾತನಾಡಿದ ನೂತನ ಅಧ್ಯಕ್ಷ ಗಣೇಶ್ ಚಿಮ್ಮಬಾಲ್ಕರ್, ಮೂರು ವರ್ಷಗಳ ಅವಧಿಗೆ ನಡೆದ ಈ ಚುನಾವಣೆಯಲ್ಲಿ ಸಮಾಜದ ಬಾಂಧವರ ಬೆಂಬಲದಿಂದ ಗೆಲುವು ಸಾಧಿಸಿದ್ದೇನೆ. ಈ ಗೆಲುವು ನನ್ನೊಬ್ಬನ ಗೆಲುವಲ್ಲ. ಸಮಾಜದ ಎಲ್ಲ ಬಂಧುಗಳು ಹಾಗೂ ಹಿಂದಿನ ಆಡಳಿತ ಮಂಡಳಿಯ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿಗಳು ಮತ್ತು ಗೌರವಾಧ್ಯಕ್ಷರು ನೀಡಿದ ಸಹಕಾರವೇ ಇದಕ್ಕೆ ಪ್ರಮುಖ ಕಾರಣವಾಗಿದೆ. ಮಹಿಳಾ ಮಂಡಳಿಯವರು ಅತ್ಯಂತ ಅಚ್ಚುಕಟ್ಟಾಗಿ ಹಾಗೂ ಉತ್ತಮ ರೀತಿಯಲ್ಲಿ ಚುನಾವಣೆಯನ್ನು ನಡೆಸಿಕೊಟ್ಟಿದ್ದಾರೆ. ಮುಂದಿನ ದಿನಗಳಲ್ಲಿ ಸಮಾಜದ ಎಲ್ಲ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಎಲ್ಲರ ಸಹಕಾರದೊಂದಿಗೆ ಸಮಾಜದ ಏಳಿಗೆ ಹಾಗೂ ಅಭಿವೃದ್ಧಿಗಾಗಿ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಸಮಾಜದ ಮುಖಂಡರಾದ ಭಗವಂತರಾವ್, ಆನಂದ್, ಮಂಜುನಾಥ್ ಬೇಕರಿ,, ಗಣೇಶ್ ರಾವ್, ಗಣೇಶ್ ರಾಜೇಶ್, ಬಾಪು, ಮಂಜುನಾಥ್ ರಾವ್, ವಿನಯ್, ರೋಹಿತ್ ಅಶೋಕ್ ಸೇರಿದಂತೆ ಇತರರು ಇದ್ದರು.