ಕರ್ನಾಟಕ ಗಮಕಕಲಾ ಪರಿಷತ್ತಿನ ರಾಜ್ಯ ಉಪಾಧ್ಯಕ್ಷರಾಗಿ ಹಾಸನ ಜಿಲ್ಲಾ ಘಟಕದ ಅಧ್ಯಕ್ಷ, ಕಲಾಶ್ರೀ ಗಣೇಶ್ ಉಡುಪ ಅವರು ಮುಂದಿನ ಮೂರು ವರ್ಷಗಳ ಅವಧಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕರ್ನಾಟಕ ಗಮಕಕಲಾ ಪರಿಷತ್ತು, ಬೆಂಗಳೂರು ಇದರ ಪದಾಧಿಕಾರಿಗಳ ಆಯ್ಕೆ ಸಂಬಂಧ ಇತ್ತೀಚೆಗೆ ಬೆಂಗಳೂರಿನ ಗಿರಿನಗರದಲ್ಲಿ ನಡೆದ ಸರ್ವ ಸದಸ್ಯರ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಸಭೆಯಲ್ಲಿ ತುಮಕೂರಿನ ಹಿರಿಯರಾದ ಅನಂತರಾಮಯ್ಯ ಅವರನ್ನು ಮುಂದಿನ ಮೂರು ವರ್ಷಗಳ ಅವಧಿಗೆ ಪರಿಷತ್ತಿನ ರಾಜ್ಯಾಧ್ಯಕ್ಷರನ್ನಾಗಿ ಸರ್ವಾನುಮತದಿಂದ ಅವಿರೋಧವಾಗಿ ಆಯ್ಕೆ ಮಾಡಲಾಯಿತು.

ಹಾಸನ: ಕರ್ನಾಟಕ ಗಮಕಕಲಾ ಪರಿಷತ್ತಿನ ರಾಜ್ಯ ಉಪಾಧ್ಯಕ್ಷರಾಗಿ ಹಾಸನ ಜಿಲ್ಲಾ ಘಟಕದ ಅಧ್ಯಕ್ಷ, ಕಲಾಶ್ರೀ ಗಣೇಶ್ ಉಡುಪ ಅವರು ಮುಂದಿನ ಮೂರು ವರ್ಷಗಳ ಅವಧಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕರ್ನಾಟಕ ಗಮಕಕಲಾ ಪರಿಷತ್ತು, ಬೆಂಗಳೂರು ಇದರ ಪದಾಧಿಕಾರಿಗಳ ಆಯ್ಕೆ ಸಂಬಂಧ ಇತ್ತೀಚೆಗೆ ಬೆಂಗಳೂರಿನ ಗಿರಿನಗರದಲ್ಲಿ ನಡೆದ ಸರ್ವ ಸದಸ್ಯರ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಸಭೆಯಲ್ಲಿ ತುಮಕೂರಿನ ಹಿರಿಯರಾದ ಅನಂತರಾಮಯ್ಯ ಅವರನ್ನು ಮುಂದಿನ ಮೂರು ವರ್ಷಗಳ ಅವಧಿಗೆ ಪರಿಷತ್ತಿನ ರಾಜ್ಯಾಧ್ಯಕ್ಷರನ್ನಾಗಿ ಸರ್ವಾನುಮತದಿಂದ ಅವಿರೋಧವಾಗಿ ಆಯ್ಕೆ ಮಾಡಲಾಯಿತು. ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಅನಂತರಾಮಯ್ಯ ಅವರು ಹಾಸನ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿರುವ ಕಲಾಶ್ರೀ ಗಣೇಶ್ ಉಡುಪ ಅವರ ಕಲಾಸೇವೆ, ಸಂಘಟನಾ ಚಟುವಟಿಕೆ ಹಾಗೂ ಗಮಕ ಕಲೆಯ ಬೆಳವಣಿಗೆಗೆ ನೀಡುತ್ತಿರುವ ಕೊಡುಗೆಯನ್ನು ಪರಿಗಣಿಸಿ, ಅವರನ್ನು ರಾಜ್ಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ. ಗಮಕ ಕಲೆಯ ಉಳಿವು, ಬೆಳವಣಿಗೆ ಹಾಗೂ ಮುಂದಿನ ಪೀಳಿಗೆಗೆ ಈ ಸಾಂಸ್ಕೃತಿಕ ಪರಂಪರೆಯನ್ನು ಪರಿಚಯಿಸುವ ನಿಟ್ಟಿನಲ್ಲಿ ಪರಿಷತ್ತು ಹಲವು ಕಾರ್ಯಚಟುವಟಿಕೆಗಳನ್ನು ಹಮ್ಮಿಕೊಳ್ಳುತ್ತಿದೆ. ಈ ಸಂದರ್ಭದಲ್ಲಿ ಗಣೇಶ್ ಉಡುಪ ಅವರಿಗೆ ರಾಜ್ಯಮಟ್ಟದ ಜವಾಬ್ದಾರಿ ಲಭಿಸಿರುವುದು ಹಾಸನ ಜಿಲ್ಲೆಯ ಕಲಾವಿದರು ಹಾಗೂ ಗಮಕಾಸಕ್ತರಲ್ಲಿ ಸಂತಸ ಮೂಡಿಸಿದೆ.ಅವರ ಆಯ್ಕೆಗೆ ಜಿಲ್ಲೆಯ ಕಲಾವಿದರು, ಸಾಹಿತ್ಯಾಸಕ್ತರು ಹಾಗೂ ಗಮಕ ಕಲಾ ಪರಿಷತ್ತಿನ ಪದಾಧಿಕಾರಿಗಳು ಅಭಿನಂದನೆ ಸಲ್ಲಿಸಿದ್ದಾರೆ.