ಸಾರಾಂಶ
ಶಾಸಕ ಬಸನಗೌಡ ಪಾಟೀಲ ಯತ್ನಾಳ ಭಾಷಣ ಮತ್ತು ಗಣೇಶ ವಿಸರ್ಜನೆ ಹಿನ್ನೆಲೆಯಲ್ಲಿ ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಈಗಾಗಲೇ ನಗರದಲ್ಲಿ ಜಿಲ್ಲಾ ಪೊಲೀಸ್ ಪಡೆ ಸೇರಿದಂತೆ ಬಳ್ಳಾರಿ, ವಿಜಯನಗರ, ರಾಯಚೂರು ಜಿಲ್ಲೆಗಳಿಂದ ಅಧಿಕಾರಿಗಳು ಸೇರಿದಂತೆ 1200ಕ್ಕೂ ಪೊಲೀಸರನ್ನು ನಿಯೋಜಿಸಲಾಗಿದೆ.
ಗಂಗಾವತಿ:
ನಗರದಲ್ಲಿ ವಿಜಯವೃಂದ ಯುವಕ ಸಂಘದಿಂದ ಸೆ. 16ರಂದು ಗಣೇಶ ವಿಸರ್ಜನೆ ಮತ್ತು ಶೋಭಾಯಾತ್ರೆ ನಡೆಯಲಿದ್ದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಭಾಗವಹಿಸಿ ಮಧ್ಯಾಹ್ನ 3 ಗಂಟೆಗೆ ಡಾ. ಬಾಬಾ ಜಗಜೀವನ್ ರಾಮ್ ವೃತ್ತದಲ್ಲಿ ದಿಕ್ಸೂಚಿ ಭಾಷಣ ಮಾಡಲಿದ್ದಾರೆ.ಬಿಗಿ ಭದ್ರತೆ:
ಬಸನಗೌಡ ಪಾಟೀಲ ಯತ್ನಾಳ ಭಾಷಣ ಮತ್ತು ಗಣೇಶ ವಿಸರ್ಜನೆ ಹಿನ್ನೆಲೆಯಲ್ಲಿ ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಈಗಾಗಲೇ ನಗರದಲ್ಲಿ ಜಿಲ್ಲಾ ಪೊಲೀಸ್ ಪಡೆ ಸೇರಿದಂತೆ ಬಳ್ಳಾರಿ, ವಿಜಯನಗರ, ರಾಯಚೂರು ಜಿಲ್ಲೆಗಳಿಂದ ಅಧಿಕಾರಿಗಳು ಸೇರಿದಂತೆ 1200ಕ್ಕೂ ಪೊಲೀಸರನ್ನು ನಿಯೋಜಿಸಲಾಗಿದೆ. 5 ಕೆಎಸ್‌ಆರ್‌ಪಿ ತುಕಡಿ, 8 ಜಿಲ್ಲಾ ಮೀಸಲು ಪಡೆ ತಂಡ ಆಗಮಿಸಿದೆ. ಭಾಷಣ ನಡೆಯುವ ಸನಿಹದಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲಾಗಿದ್ದು, ವಿವಿಧ ವೃತ್ತ ಮತ್ತು ಸೂಕ್ಷ್ಮ ಪ್ರದೇಶಗಲ್ಲಿ ಒಟ್ಟು 150 ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ. ವಿಜಯನಗರ ಹಾಗೂ ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಕ್ಕಾಂ ಹೂಡಿದ್ದಾರೆ.ಪಥ ಸಂಚಲನ:
ಗಣೇಶ ವಿಸರ್ಜನೆ ಹಿನ್ನೆಲೆಯಲ್ಲಿ ಸೋಮವಾರ ಪೊಲೀಸ್ ಇಲಾಖೆಯಿಂದ ಪಥಸಂಚಲನ ನಡೆಯಿತು.