ಐತಿಹಾಸಿಕ ಗೌರಿ-ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಸಂಭವಿಸಿದ್ದ ವಿದ್ಯುತ್ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಹುಬ್ಬಳ್ಳಿ ಮೂಲದ ಬಸವರಾಜ (22) ಮೃತಪಟ್ಟ ಯುವಕ. ವಿಸರ್ಜನಾ ಮೆರವಣಿಗೆ ವೇಳೆ ಡಿಜೆ ಲೈಟ್ ಮೇಲೆ ನಿಂತುಕೊಂಡು ತೆರಳುತ್ತಿದ್ದ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶಿಸಿ ಸುಮಾರು ಶೇ.40ರಷ್ಟು ಸುಟ್ಟ ಗಾಯಗಳಾಗಿದ್ದವು.

ವಿರಾಜಪೇಟೆ : ಐತಿಹಾಸಿಕ ಗೌರಿ-ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಸಂಭವಿಸಿದ್ದ ವಿದ್ಯುತ್ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಹುಬ್ಬಳ್ಳಿ ಮೂಲದ ಬಸವರಾಜ (22) ಮೃತಪಟ್ಟ ಯುವಕ. ವಿಸರ್ಜನಾ ಮೆರವಣಿಗೆ ವೇಳೆ ಡಿಜೆ ಲೈಟ್ ಮೇಲೆ ನಿಂತುಕೊಂಡು ತೆರಳುತ್ತಿದ್ದ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶಿಸಿ ಸುಮಾರು ಶೇ.40ರಷ್ಟು ಸುಟ್ಟ ಗಾಯಗಳಾಗಿದ್ದವು.

ತಕ್ಷಣ ಅವರನ್ನು ವಿರಾಜಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್. ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ನಂತರ ಅಪೋಲೋ ಆಸ್ಪತ್ರೆ ಹಾಗೂ ಡಿ.ಆರ್.ಎಂ. ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಮುಂದುವರಿಸಲಾಗುತ್ತಿತ್ತು. ಆದರೆ ಸೋಮವಾರ ಮುಂಜಾನೆ ಸುಮಾರು 4 ಗಂಟೆ ವೇಳೆಗೆ ಚಿಕಿತ್ಸೆ ಫಲಕಾರಿಯಾಗದೆ ಬಸವರಾಜ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.ವಿರಾಜಪೇಟೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.