ಸಾರಾಂಶ
ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಠಾರದಲ್ಲಿ ನಡೆಸಲ್ಪಡುವ ೫೮ನೇ ವರ್ಷದ ಗಣೇಶೋತ್ಸವಕ್ಕೆ ಬುಧವಾರ ಬ್ರಹ್ಮಶ್ರೀ ಕುಂಟಾರು ಗುರು ತಂತ್ರಿಗಳು ಗಣೇಶನ ವಿಗ್ರಹ ಪ್ರತಿಷ್ಠೆ ಮಾಡುವ ಮೂಲಕ ಚಾಲನೆ ನೀಡಿದರು.
ಪುತ್ತೂರು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಠಾರದಲ್ಲಿ ನಡೆಸಲ್ಪಡುವ ೫೮ನೇ ವರ್ಷದ ಗಣೇಶೋತ್ಸವಕ್ಕೆ ಬುಧವಾರ ಬ್ರಹ್ಮಶ್ರೀ ಕುಂಟಾರು ಗುರು ತಂತ್ರಿಗಳು ಗಣೇಶನ ವಿಗ್ರಹ ಪ್ರತಿಷ್ಠೆ ಮಾಡುವ ಮೂಲಕ ಚಾಲನೆ ನೀಡಿದರು.
ಮಧ್ಯಾಹ್ನ ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಯವರು ಮಹಾಪೂಜೆ ನೆರವೇರಿಸಿದರು. ಬೆಳಗ್ಗೆ ಸಮಿತಿ ಪದಾಧಿಕಾರಿಗಳು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಬಳಿಕ ದೇವಳದ ಎದುರಿನ ಗದ್ದೆಯ ಬೃಹತ್ ಚಪ್ಪರದಲ್ಲಿ ವಿಗ್ರಹ ಪ್ರತಿಷ್ಠೆ ಕಾರ್ಯ ನಡೆಸಿದರು.ಭಗವಧ್ವಜಾರೋಹಣದ ಮೂಲಕ ವಿವಿಧ ಕಾರ್ಯಕ್ರಮಕ್ಕೆ ಚಾಲನೆ:ಗಣೇಶನ ವಿಗ್ರಹ ಪ್ರತಿಷ್ಠೆ ಬಳಿಕ ಸಭಾ ವೇದಿಕೆ ಬಳಿ ಭಗವಧ್ವಜಾರೋಹಣವನ್ನು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಸ್ವಯಂಸೇವಕ ಸೋಮನಾಥ ರಾವ್ ನೆರವೇರಿಸಿದರು.ಗಣೇಶೋತ್ಸ ಸಮಿತಿ ಗೌರವಾಧ್ಯಕ್ಷ ಡಾ. ಎಂ.ಕೆ. ಪ್ರಸಾದ್, ರವೀಂದ್ರ ಶೆಟ್ಟಿ ನುಳಿಯಾಲು, ಅಧ್ಯಕ್ಷ ಸುಜೀಂದ್ರ ಪ್ರಭು, ಕಾರ್ಯಾಧ್ಯಕ್ಷ ರಾಧಾಕೃಷ್ಣ ನಂದಿಲ, ಪ್ರಧಾನ ಕಾರ್ಯದರ್ಶಿ ಅಶೋಕ್ ಕುಂಬ್ಳೆ, ಉಪಾಧ್ಯಕ್ಷರಾದ ವಿಶ್ವನಾಥ ಗೌಡ ಬನ್ನೂರು, ಸುಧೀರ್ ಶೆಟ್ಟಿ, ಪ್ರವೀಣ್ ನಾಯ್ಕ್, ಜೊತೆ ಕಾರ್ಯದರ್ಶಿ ನೀಲಂತ್ ಬೊಳುವಾರು, ಕೋಶಾಧಿಕಾರಿ ಶ್ರೀನಿವಾಸ ಮೂಲ್ಯ, ಮಾಜಿ ಶಾಸಕ ಸಂಜೀವ ಮಠಂದೂರು, ಶಾರದಾ ಭಜನಾ ಮಂದಿರ ಅಧ್ಯಕ್ಷ ಉದ್ಯಮಿ ಸೀತಾರಾಮ ರೈ ಕೆದಂಬಾಡಿಗುತ್ತು, ಬಜರಂಗದಳದ ಪ್ರಮುಖರು ಸೇರಿದಂತೆ ಸಮಿತಿ ಸದಸ್ಯರು ಹಾಗೂ ಭಕ್ತರು ಉಪಸ್ಥಿತರಿದ್ದರು.