ಗಣೇಶೋತ್ಸವ ರಾಷ್ಟ್ರೀಯ ಭಾವೈಕ್ಯತೆಯ ಪ್ರತಿಬಿಂಬ: ಸ್ಪೀಕರ್‌

| Published : Sep 11 2024, 01:11 AM IST

ಸಾರಾಂಶ

ಯು. ಟಿ. ಖಾದರ್ ಅವರನ್ನು ಗಣೇಶೋತ್ಸವ ಸಮಿತಿ ವತಿಯಿಂದ ಸನ್ಮಾನಿಸಲಾಯಿತು.

ಕನ್ನಡಪ್ರಭ ವಾರ್ತೆ ಮಂಗಳೂರು

ಸಾಮಾಜಿಕ ಸಾಮರಸ್ಯ ಮತ್ತು ರಾಷ್ಟ್ರೀಯ ಸಮಗ್ರತೆಯ ಸಂದೇಶವನ್ನು ಸಾರುವ ಗಣೇಶೋತ್ಸವ ಸಾರ್ವಜನಿಕರಲ್ಲಿ ರಾಷ್ಟ್ರೀಯ ಭಾವೈಕ್ಯತೆಯನ್ನು ಪ್ರತಿಬಿಂಬಿಸುತ್ತಿದೆ ಎಂದು ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್ ಹೇಳಿದ್ದಾರೆ.ಅವರು ಸೂಟರ್‌ಪೇಟೆ ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ ಸೂಟರ್‌ಪೇಟೆ ಶ್ರೀ ಕೋರ್ದಬ್ಬು ದೈವಸ್ಥಾನದ ಬಬ್ಬುಸ್ವಾಮಿ ರಂಗಮಂದಿರದಲ್ಲಿ ಶನಿವಾರ ನಡೆದ 6ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಯು. ಟಿ. ಖಾದರ್ ಅವರನ್ನು ಗಣೇಶೋತ್ಸವ ಸಮಿತಿ ವತಿಯಿಂದ ಸನ್ಮಾನಿಸಲಾಯಿತು.

ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಮಾತನಾಡಿ , ಸಾಮಾಜಿಕ ಬದ್ಧತೆಯನ್ನು ತೋರಿಸುವ ಗಣೇಶೋತ್ಸವ ಐಕ್ಯತೆಯ ಭಾವನೆಯನ್ನು ಬೆಳೆಸುವ ಮೂಲಕ ಧರ್ಮದಲ್ಲಿ ವೈಶಲ್ಯ ಭಾವನೆಯು ವೃದ್ದಿಯಾಗುತ್ತದೆ ಎಂದರು.

ದ.ಕ. ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಕಚ್ಚೂರು ಶ್ರೀ ಮಾಲ್ತಿದೇವಿ ದೇವಸ್ಥಾನ ಮತ್ತು ಬಬ್ಬುಸ್ವಾಮಿ ಮೂಲಕ್ಷೇತ್ರದ ಅಧ್ಯಕ್ಷ ಶಿವಪ್ಪ ನಂತೂರು, ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್, ನೆಹರೂ ಯುವ ಕೇಂದ್ರದ ಮಾಜಿ ಸಮನ್ವಯಾಧಿಕಾರಿ ಎಸ್. ರಘುವೀರ್, ಕಂಕನಾಡಿ ಕೋರ್ದಬ್ಬು ದೈವಸ್ಥಾನದ ಗುರಿಕಾರ ಎಸ್. ವಿ. ಶಿವಪ್ರಸಾದ್, ಸೂಟರ್‌ಪೇಟೆ ಕೋರ್ದಬ್ಬು ದೈವಸ್ಥಾನದ ಅರ್ಚಕ ಎಸ್. ಗಣೇಶ್, ಖಜಾಂಚಿ ಎಸ್. ನವೀನ್, ಗಣೇಶೋತ್ಸವ ಸಮಿತಿ ಅಧ್ಯಕ್ಷ ಸತೀಶ್ ಭಾಗವಹಿಸಿದರು.