ಸಾರಾಂಶ
ಅಭ್ಯುದಯ ಭಾರತಿ ಸೇವಾ ಟ್ರಸ್ಟ್ ಗಣೇಶಪುರ ಹಾಗೂ ಹಿಂದು ಧಾರ್ಮಿಕ ಸೇವಾ ಸಮಿತಿ ಕಾಟಿಪಳ್ಳ ಕ್ಷೇತ್ರ ವತಿಯಿಂದ ಗಣೇಶಪುರ ಮೈದಾನದಲ್ಲಿ ಸಾರ್ವಜನಿಕ ಶ್ರೀ ಕೃಷ್ಣಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮ ನೆರವೇರಿತು.
ಮೂಲ್ಕಿ: ಹಿಂದೂ ಸಮಾಜ ಸಂಘಟನೆಗಳನ್ನು ಬಲಗೊಳಿಸುವುದರ ಜೊತೆಗೆ ಹಿಂದೂ ಧರ್ಮದ ಸಂಸ್ಕೃತಿ ಆಚರಣೆಗಳನ್ನು ಗೌರವಿಸುವ ಮೂಲಕ ಸಮಾಜದ ಒಗ್ಗಟ್ಟಿಗೆ ಪ್ರಯತ್ನಿಸಬೇಕೆಂದು ಮಂಗಳೂರು ಉತ್ತರ ಶಾಸಕ ಡಾ.ಭರತ್ ವೈ. ಶೆಟ್ಟಿ ಹೇಳಿದರು.ಅಭ್ಯುದಯ ಭಾರತಿ ಸೇವಾ ಟ್ರಸ್ಟ್ ಗಣೇಶಪುರ ಹಾಗೂ ಹಿಂದು ಧಾರ್ಮಿಕ ಸೇವಾ ಸಮಿತಿ ಕಾಟಿಪಳ್ಳ ಕ್ಷೇತ್ರ ವತಿಯಿಂದ ಗಣೇಶಪುರ ಮೈದಾನದಲ್ಲಿ ನಡೆದ ಸಾರ್ವಜನಿಕ ಶ್ರೀ ಕೃಷ್ಣಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭೀಮಲಕ್ಷ್ಮೀ ಚಿಟ್ ಫಂಡ್ ಪ್ರೈವೇಟ್ ಲಿಮಿಟೆಡ್ ಆಡಳಿತ ನಿರ್ದೇಶಕ ಜೀತೆಂದ್ರ ಶೆಟ್ಟಿ ತಲಪಾಡಿಗುತ್ತು ವಹಿಸಿದ್ದರು. ವಿಶ್ವಹಿಂದು ಪರಿಷತ್ ದಕ್ಷಿಣ ಪ್ರಾಂತ ಸಂಪರ್ಕ ಪ್ರಮುಖ್ ಪ್ರೇಮನಾಥ್ ಶೆಟ್ಟಿ ಮಾತನಾಡಿದರು.ಈ ಸಂದರ್ಭ ಆರ್ಥಿಕವಾಗಿ ಹಿಂದುಳಿದ ಬಡ ಕುಟುಂಬಗಳಿಗೆ ಆರೋಗ್ಯ ನಿಧಿ ಮತ್ತು ವಿದ್ಯಾರ್ಥಿವೇತನ ನೀಡಲಾಯಿತು. ಗುತ್ತಿನಾರ್ ಜಯರಾಮ ಶೆಟ್ಟಿ ಕುಡುಂಬೂರುಗುತ್ತು, ಸೂರಿಂಜೆ ಪೊನ್ನಗಿರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಅಶೋಕ್ ಪೈವ ಹೆಗಡೆ, ಕುತ್ತೆತ್ತೂರು ಸೂರಿಂಜೆ ಬ್ರಹ್ಮಸ್ಥಾನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಎಂಆರ್‌ಪಿಎಲ್ ಕಂಟ್ರಾಕ್ಟರ್ ಯೂನಿಯನ್ ಮಂಗಳೂರು ಅಧ್ಯಕ್ಷ ಸಂತೋಷ್ ಪೂಂಜ, ಪೃಥ್ವಿ ಕನ್‌ಸ್ಟ್ರಕ್ಷನ್ ಮಾಲಕ ಪೃಥ್ವಿರಾಜ್ ಶೆಟ್ಟಿ, ಸುರತ್ಕಲ್ ಲಯನ್ಸ್ ಕ್ಲಬ್ ಅಧ್ಯಕ್ಷೆ ಶಶಿಕಲಾ ಶೆಟ್ಟಿ, ಉದ್ಯಮಿ ವಿಜಯ ಕಾವೂರು, ಅಭ್ಯುದಯ ಭಾರತಿ ಸೇವಾ ಟ್ರಸ್ಟ್ ಅಧ್ಯಕ್ಷ ಜಯಕುಮಾರ್, ಹಿಂದು ಧಾರ್ಮಿಕ ಸೇವಾ ಸಮಿತಿ ಪ್ರಧಾನ ಕಾರ್ಯದರ್ಶಿ ಬಾಲಕೃಷ್ಣ ಸುವರ್ಣ, ಕೋಶಾಧಿಕಾರಿ ಭಾಸ್ಕರ್ ಮತ್ತಿತರರು ಉಪಸ್ಥಿತರಿದ್ದರು.ಜಯಪ್ರಕಾಶ್ ಸೂರಿಂಜೆ ಸ್ವಾಗತಿಸಿದರು. ರಾಕೇಶ್ ಕೃಷ್ಣಾಪುರ ಕಾರ್ಯಕ್ರಮ ನಿರೂಪಿಸಿದರು. ಹಿಂದು ಧಾರ್ಮಿಕ ಸೇವಾ ಸಮಿತಿ ಅಧ್ಯಕ್ಷ ಹರೀಶ್ ಮುಡಾಯಿಕೊಡಿ ವಂದಿಸಿದರು.