ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ: ಏಳು ತಾಸಿನಲ್ಲಿ ಆರೋಪಿಗಳ ಬಂಧನ

| Published : Nov 18 2025, 03:30 AM IST

ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ: ಏಳು ತಾಸಿನಲ್ಲಿ ಆರೋಪಿಗಳ ಬಂಧನ
Share this Article
  • FB
  • TW
  • Linkdin
  • Email

ಸಾರಾಂಶ

ಮಹಿಳೆಗೆ ಮದ್ಯ ಕುಡಿಸಿ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳು ಹಾಗೂ ಅತ್ಯಾಚಾರಕ್ಕೆ ಸಹಕರಿಸಿದ ಒಬ್ಬ ಸೇರಿ ಐದು ಜನರನ್ನು ಪೊಲೀಸರು ಬಂಧಿಸಿದ್ದಾರೆ.

ಯಲಬುರ್ಗಾ: ಮಹಿಳೆಗೆ ಮದ್ಯ ಕುಡಿಸಿ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳು ಹಾಗೂ ಅತ್ಯಾಚಾರಕ್ಕೆ ಸಹಕರಿಸಿದ ಒಬ್ಬ ಸೇರಿ ಐದು ಜನರನ್ನು ಪೊಲೀಸರು ಬಂಧಿಸಿದ್ದಾರೆ.

ಘಟನೆ ನಡೆದ ಕೇವಲ 7 ಗಂಟೆಯಲ್ಲಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ತಾಲೂಕಿನ ಹನುಮಾಪುರದ ಮೂವರು, ರೋಣ ತಾಲೂಕಿನ ಇಬ್ಬರನ್ನು ಬಂಧಿಸಲಾಗಿದೆ. ಬಂಧಿತರಿಂದ ಎರಡು ಬೈಕ್ ಜಪ್ತಿ ಮಾಡಲಾಗಿದೆ.

ತಾಲೂಕಿನ ದಮ್ಮೂರು ಬಳಿ ನ. 16ರಂದು ರಾತ್ರಿ ವೇಳೆ ಹೊಸಪೇಟೆ ಮೂಲದ 39 ವರ್ಷದ ಮಹಿಳೆ ಮೇಲೆ ಐವರು ಯುವಕರಿಂದ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಅಸ್ವಸ್ಥಗೊಂಡ ಮಹಿಳೆಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಪರಿಚಯದವರಿಂದ ಹಣ ಪಡೆಯಲು ಹೊಸಪೇಟೆಯಿಂದ ಕುಷ್ಟಗಿಗೆ ಬಂದಿದ್ದ ಮಹಿಳೆಯನ್ನು ಬೈಕ್ ಮೇಲೆ ಕರೆದೊಯ್ದು ಮದ್ಯ ಕುಡಿಸಿ ಅತ್ಯಾಚಾರ ಮಾಡಿದ್ದಾರೆ ಎಂದು ಸಂತ್ರಸ್ತೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಈ ಕುರಿತು ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ಕೇವಲ ೭ ತಾಸಿನಲ್ಲಿ ಆರೋಪಿಗಳನ್ನು ಬಂಧಿಸಿದ್ದಾರೆ.

ಎಸ್ಪಿ ಸುದ್ದಿಗೋಷ್ಠಿ

ಕೊಪ್ಪಳದಲ್ಲಿ ಸುದ್ದಿಗೋಷ್ಠಿ ನಡೆಸಿದ ಎಸ್ಪಿ ಡಾ. ರಾಮ ಎಲ್. ಅರಸಿದ್ದಿ, ಗದಗ ಜಿಲ್ಲೆಯ ಅಸೂಟಿ ಗ್ರಾಮದ ಲಕ್ಷ್ಮಣ ಹಾಗೂ ಬಸವರಾಜ, ಯಲಬುರ್ಗಾ ತಾಲೂಕಿನ ಹನುಮಾಪುರ ಗ್ರಾಮದ ಭೀಮಪ್ಪ ಹಾಗೂ ಶಶಿಕುಮಾರ ಬಂಧಿತ ಆರೋಪಿಗಳು. ಮತ್ತು ಬರುವ ಪಾನಿಯ ಕುಡಿಸಿ, ರೇಪ್ ಮಾಡಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ. ಸಂತ್ರಸ್ತ ಮಹಿಳೆಯನ್ನು ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗಿದ್ದು, ಗುಣಮುಖವಾಗಿದ್ದಾಳೆ ಎಂದು ಮಾಹಿತಿ ನೀಡಿದರು.