ಸಾರಾಂಶ
ಗಂಗೊಳ್ಳಿಯ ಕೆನರಾ ಬ್ಯಾಂಕ್ ವತಿಯಿಂದ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ ಅಕ್ರಮ ಅಕೌಂಟ್‌ಗಳನ್ನು ತಡೆಗಟ್ಟುವ ಕುರಿತು ಮತ್ತು ಸೈಬರ್ ಸುರಕ್ಷತಾ ಕ್ರಮಗಳ ಬಗ್ಗೆ ಮಾಹಿತಿ ಕಾರ್ಯಕ್ರಮ ನಡೆಯಿತು.
ಕನ್ನಡಪ್ರಭ ವಾರ್ತೆ ಗಂಗೊಳ್ಳಿ
ಯಾವುದೇ ಸಂದರ್ಭದಲ್ಲೂ ಕೂಡ ಬ್ಯಾಂಕ್ ಖಾತೆಗೆ ಸಂಬಂಧಪಟ್ಟಂತಹ ತೀರಾ ವೈಯಕ್ತಿಕ ವಿವರಗಳನ್ನು ಅಪರಿಚಿತರೊಂದಿಗೆ ಹಂಚಿಕೊಳ್ಳಲು ಹೋಗಬಾರದು. ಈ ಬಗ್ಗೆ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳನ್ನು ನಾವು ಅರಿತುಕೊಂಡು ಎಲ್ಲರಿಗೂ ತಿಳಿಸುವ ಪ್ರಯತ್ನಗಳನ್ನು ಕೂಡ ಮಾಡಬೇಕು ಎಂದು ಗಂಗೊಳ್ಳಿಯ ಕೆನರಾ ಬ್ಯಾಂಕಿನ ಅಧಿಕಾರಿ ಸಾಗರ್ ಕೆ. ಶಿವದಾಸ್ ಹೇಳಿದರು.ಅವರು ಗಂಗೊಳ್ಳಿಯ ಕೆನರಾ ಬ್ಯಾಂಕ್ ವತಿಯಿಂದ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಕ್ರಮ ಅಕೌಂಟ್‌ಗಳನ್ನು ತಡೆಗಟ್ಟುವ ಕುರಿತು ಮತ್ತು ಸೈಬರ್ ಸುರಕ್ಷತಾ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.ಕೆನರಾ ಬ್ಯಾಂಕಿನ ಸೀನಿಯರ್ ಮ್ಯಾನೇಜರ್ ವಾಸು ದೇವಾಡಿಗ ಶುಭ ಹಾರೈಸಿದರು. ಸರಸ್ವತಿ ವಿದ್ಯಾಲಯದ ಪ್ರಾಂಶುಪಾಲೆ ಕವಿತಾ ಎಂ.ಸಿ. ಅಧ್ಯಕ್ಷತೆ ವಹಿಸಿದ್ದರು. ಕೆನರಾ ಬ್ಯಾಂಕ್ ಸಿಬ್ಬಂದಿ ರಾಜೇಂದ್ರ ಬಿ.ಟಿ. ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಶ್ರೇಷ್ಠ ಮೇಸ್ತ ಸ್ವಾಗತಿಸಿದರು. ವಾಣಿಜ್ಯಶಾಸ್ತ್ರ ಉಪನ್ಯಾಸಕ ನರೇಂದ್ರ ಎಸ್. ಗಂಗೊಳ್ಳಿ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು.