ಸಾರಾಂಶ
ಕನ್ನಡಪ್ರಭ ವಾರ್ತೆ ಬೈಂದೂರುಇಲ್ಲಿನ ಗಂಗೊಳ್ಳಿಯ ನಾರಾಯಣಗುರು ಜನಸೇವಾ ಬಳಗದ ಉದ್ಘಾಟನಾ ಸಮಾರಂಭವು ಇಲ್ಲಿನ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಸಭಾಂಗಣದಲ್ಲಿ ಇತ್ತೀಚೆಗೆ ನಡೆಯಿತು.
ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆ ನಿವೃತ್ತ ಮುಖ್ಯಶಿಕ್ಷಕಿ ಸುಮನ ಪಡಿಯಾರ್ ಸಮಾರಂಭ ಉದ್ಘಾಟಿಸಿ, ಸಮಾಜದ ಸೇವೆಗಾಗಿ ಸಂಘಟಿತ ಪ್ರಯತ್ನವನ್ನು ಮಾಡುವುದು ಯಶಸ್ಸನ್ನು ಕೊಡುತ್ತದೆ. ಉತ್ತಮ ಕಾರ್ಯಗಳಿಗೆ ಬೆಂಬಲ ನೀಡುವುದು ಮತ್ತು ಆ ಮೂಲಕ ಉತ್ತಮ ಸಮಾಜದ ನಿರ್ಮಾಣದಲ್ಲಿ ಭಾಗಿಯಾಗುವುದು ನಮ್ಮೆಲ್ಲರ ಕರ್ತವ್ಯ ಎಂದು ಹೇಳಿದರು.ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಕುಂದಾಪುರದ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಉಪಪ್ರಾಂಶುಪಾಲ ಡಾ. ಚೇತನ್ ಶೆಟ್ಟಿ ಕೋವಾಡಿ, ಬೆಂಗಳೂರಿನ ಹರಪನಹಳ್ಳಿ ಆನೇಕಲ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆಂಗ್ಲ ಭಾಷಾ ಶಿಕ್ಷಕ ಮತ್ತು ಲೇಖಕ ಸಂದೇಶ್ ಎಚ್. ನಾಯ್ಕ್ ಹಕ್ಲಾಡಿ ಮತ್ತು ನಿವೃತ್ತ ಕೆನರಾ ಬ್ಯಾಂಕ್ ಉದ್ಯೋಗಿ ಪ್ರಮೋದ್ ಗಾಣಿಗ ಗಂಗೊಳ್ಳಿ ಶುಭ ಹಾರೈಸಿದರು.ಶ್ರೀ ನಾರಾಯಣಗುರು ಜನ ಸೇವಾ ಬಳಗ ಅಧ್ಯಕ್ಷ ಗೋಪಾಲ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ಸುಜಾತ ಕಾಂತು ಬಾಬು ಖಾರ್ವಿ, ಇತ್ತೀಚೆಗೆ ನಿಧನರಾದ ಖ್ಯಾತ ಸಾಹಿತಿ ಎಸ್.ಎಲ್. ಭೈರಪ್ಪ ಅವರಿಗೆ ನುಡಿನಮನಗಳನ್ನು ಸಲ್ಲಿಸಿದರು.ಸಲಹೆಗಾರರಾದ ಡಾ. ವೀಣಾ ಕಾರಂತ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಉಪಾಧ್ಯಕ್ಷೆ ಮಮತಾ ಪೂಜಾರಿ ಸ್ವಾಗತಿಸಿದರು. ಕೋಶಾಧಿಕಾರಿ ನರೇಂದ್ರ ಎಸ್. ಗಂಗೊಳ್ಳಿ ಕಾರ್ಯಕ್ರಮ ನಿರೂಪಿಸಿದರು. ಗೋಪಾಲ ಚಂದನ್ ಸಹಕರಿಸಿದರು. ಸಾನಿಕ ಪ್ರಾರ್ಥಿಸಿದರು. ಮನೋಜ್ ಎನ್.ಡಿ. ವಂದಿಸಿದರು.