ಸಾರಾಂಶ
ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಎಸ್.ವಿ ಕಾಮರ್ಸ್ ಕ್ಲಬ್ ಗಂಗೊಳ್ಳಿ ಮತ್ತು ರಾಷ್ಟ್ರೀಯ ಸೇವಾ ಯೋಜನೆಯ ಜಂಟಿ ಆಶ್ರಯದಲ್ಲಿ ಪೋಕ್ಸೋ ಮಾಹಿತಿ ಕಾರ್ಯಕ್ರಮ ನಡೆಯಿತು.
ಕನ್ನಡಪ್ರಭ ವಾರ್ತೆ ಗಂಗೊಳ್ಳಿ
ಮಕ್ಕಳು ತಮ್ಮ ಮೇಲೆ ದೌರ್ಜನ್ಯಗಳು ನಡೆದಾಗ ಅದನ್ನು ಯಾವುದೇ ಹಿಂಜರಿಕೆ ಇಲ್ಲದೆ ಹೇಳಿಕೊಳ್ಳುವಂತಹ ಮನಸ್ಥಿತಿ ಬೆಳೆಸಿಕೊಳ್ಳಬೇಕು. ಪೋಕ್ಸೋ ಕಾಯ್ದೆ ಬಗ್ಗೆ ಅರಿವನ್ನು ಹೊಂದುವುದರ ಮೂಲಕ ಸಮಾಜದಲ್ಲಿ ಜಾಗೃತಿ ಮೂಡಿಸಲು ಮತ್ತು ನೊಂದವರಿಗೆ ಸಹಾಯ ಮಾಡಲು ಸಾಧ್ಯ ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಪೋಕ್ಸೋ ಸಪೋರ್ಟ್ ಪರ್ಸನ್ ಫಿಲೋಮಿನಾ ಫರ್ನಾಂಡಿಸ್ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಎಸ್.ವಿ ಕಾಮರ್ಸ್ ಕ್ಲಬ್ ಗಂಗೊಳ್ಳಿ ಮತ್ತು ರಾಷ್ಟ್ರೀಯ ಸೇವಾ ಯೋಜನೆಯ ಜಂಟಿ ಆಶ್ರಯದಲ್ಲಿ ಇಲ್ಲಿನ ರೋಟರಿ ಸಭಾಂಗಣದಲ್ಲಿ ನಡೆದ ಪೋಕ್ಸೋ ಮಾಹಿತಿ ಕಾರ್ಯಕ್ರಮದಲ್ಲಿ ಮಾತನಾಡಿದರು.ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಪ್ರಭಾರ ಪ್ರಾಂಶುಪಾಲ ಥಾಮಸ್ ಪಿ.ಎ. ಅಧ್ಯಕ್ಷತೆ ವಹಿಸಿದ್ದರು. ಗಂಗೊಳ್ಳಿಯ ಬಿಲ್ಲವರ ಸಮಾಜ ಸೇವಾ ಸಂಘ ಅಧ್ಯಕ್ಷ ಗೋಪಾಲ ಬಿಲ್ಲವ ಶುಭ ಹಾರೈಸಿದರು. ವಿದ್ಯಾರ್ಥಿ ಪ್ರತಿನಿಧಿ ಬಿಂದುಶ್ರೀ ಉಪಸ್ಥಿತರಿದ್ದರು. ಅಂಕಿತ ಮತ್ತು ಸೃಷ್ಟಿ ಪ್ರಾರ್ಥಿಸಿದರು. ಸುಜಾತ ಸ್ವಾಗತಿಸಿದರು. ಅಂಕಿತ ಅತಿಥಿಗಳನ್ನು ಪರಿಚಯಿಸಿದರು. ಎಸ್.ವಿ. ಕಾಮರ್ಸ್ ಕ್ಲಬ್ ಸಂಯೋಜಕ ನರೇಂದ್ರ ಎಸ್. ಗಂಗೊಳ್ಳಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವೈಷ್ಣವಿ ಖಾರ್ವಿ ನಿರೂಪಿಸಿದರು. ಪೃಥ್ವಿ ಖಾರ್ವಿ ವಂದಿಸಿದರು.;Resize=(128,128))
;Resize=(128,128))
;Resize=(128,128))
;Resize=(128,128))