ಸಾರಾಂಶ
ಆತ ಪೊಲೀಸರನ್ನು ಕಂಡೊಡನೆ ಪೊಲೀಸರ ಮೇಲೆಯೇ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಈ ವೇಳೆ ಆತ್ಮ ರಕ್ಷಣೆಗಾಗಿ ಹೊಸಕೋಟೆ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಅಶೋಕ್ ರವರು ಆರೋಪಿ ಸೈಯದ್ ಸುಯಲ್ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಹೊಸಕೋಟೆ
ಪೊಲೀಸರ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ ಗಾಂಜಾ ಪೆಡ್ಲರ್ ಕಾಲಿಗೆ ಹೊಸಕೋಟೆ ಪೊಲೀಸರು ಗುಂಡು ಹಾರಿಸಿ ಬಂಧಿಸಿರುವ ಘಟನೆ ನಡೆದಿದೆ.ಹೊಸಕೋಟೆ ನಗರದ ಕಾಳಜಿ ಮೊಹಲ್ಲಾ ವಾಸಿ ಸೈಯದ್ ಸುಯೆಲ್ ಬಂಧಿತ ಆರೋಪಿ. ಹೊಸಕೋಟೆ ನಗರ ಹೊರವಲಯದ ಟೋಲ್ ಸಮೀಪ ಖಚಿತ ಮಾಹಿತಿ ಮೇರೆಗೆ ಹೊಸಕೋಟೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಅಶೋಕ್ ನೇತೃತ್ವದ ತಂಡ ಗಾಂಜಾ ಪೆಡ್ಲರ್ ಸೈಯದ್ ಸುಯೆಲ್ ನನ್ನು ಬಂಧಿಸಲು ತೆರಳಿದ್ದರು.
ಆದರೆ, ಆತ ಪೊಲೀಸರನ್ನು ಕಂಡೊಡನೆ ಪೊಲೀಸರ ಮೇಲೆಯೇ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಈ ವೇಳೆ ಆತ್ಮ ರಕ್ಷಣೆಗಾಗಿ ಹೊಸಕೋಟೆ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಅಶೋಕ್ ರವರು ಆರೋಪಿ ಸೈಯದ್ ಸುಯಲ್ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.ಬಂಧಿತ ಪೆಡ್ಲರ್ ಸೈಯದ್ ಸುಯಲ್ ಕಾಲಿಗೆ ಗಾಯವಾಗಿದ್ದು, ಆತನಿಗೆ ಹೊಸಕೋಟೆ ಸರ್ಕಾರಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ನಗರದ ಎಂವಿಜಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಗಾಂಜಾ ಪೆಡ್ಲರ್ ಸೈಯದ್ ಸುಯಲ್ ಯಲಹಂಕ ನ್ಯೂಟೌನ್ ಹಾಗೂ ಹೊಸಕೋಟೆ ಪೊಲೀಸ್ ಠಾಣೆಯ ವಿವಿಧ ಪ್ರಕರಣಗಳಿಗೆ ಆರೋಪಿಯಾಗಿದ್ದಾನೆ. ಅಲ್ಲದೆ ದ್ವಿಚಕ್ರ ವಾಹನಗಳನ್ನು ಸಹ ಕಳವು ಮಾಡುತ್ತಿದ್ದ ಎನ್ನಲಾಗಿದೆ.ಇನ್ನು ಘಟನೆ ಹಿನ್ನೆಲೆಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.