ವಿದೇಶದಿಂದ ಪೋಟೋ ಫ್ರೇಮ್‌ನಲ್ಲಿ ಅಡಗಿಸಿ ಸಾಗಿಸಲು ಯತ್ನಿಸಿದ್ದ 39.37 ಲಕ್ಷ ರು. ಮೌಲ್ಯದ ಹೈಡ್ರೋ ಗಾಂಜಾವನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಕನ್ನಡಪ್ರಭ ವಾರ್ತೆ ಬೆಂಗಳೂರು
ವಿದೇಶದಿಂದ ಪೋಟೋ ಫ್ರೇಮ್‌ನಲ್ಲಿ ಅಡಗಿಸಿ ಸಾಗಿಸಲು ಯತ್ನಿಸಿದ್ದ 39.37 ಲಕ್ಷ ರು. ಮೌಲ್ಯದ ಹೈಡ್ರೋ ಗಾಂಜಾವನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.ಬ್ಯಾಂಕಾಕ್‌ನಿಂದ ಕೆಐಎಗೆ ಶನಿವಾರ ಬಂದಿಳಿದ ಪ್ರಯಾಣಿಕನನ್ನು ಬಂಧಿಸಿದ ಕಸ್ಟಮ್ಸ್ ಅಧಿಕಾರಿಗಳು, ಬಳಿಕ ಆತನ ಬಳಿ 39.37 ಲಕ್ಷ ರು. ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ.
ಬ್ಯಾಂಕಾಕ್‌ನಿಂದ ಗಾಂಜಾ ಕಳ್ಳ ಸಾಗಾಣಿಕೆ ಬಗ್ಗೆ ಮಾಹಿತಿ ಸಿಕ್ಕಿತು. ಅಂತೆಯೇ ಅಲ್ಲಿಂದ ಶನಿವಾರ ಆಗಮಿಸಿದ ಪ್ರಯಾಣಿಕರ ಮೇಲೆ ನಿಗಾ ವಹಿಸಲಾಯಿತು. ಈ ವೇಳೆ ಶಂಕೆ ಮೇರೆಗೆ ಒಬ್ಬಾತನನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದಾಗ ಗಾಂಜಾ ಪತ್ತೆಯಾಯಿತು. ಆತನ ಬ್ಯಾಗ್‌ನಲ್ಲಿದ್ದ ಪೋಟೋ ಅನ್ನು ಒಡೆದು ಹಾಕಿದಾಗ ಅದರಲ್ಲಿ ಅಡಗಿಸಿಟ್ಟಿದ್ದ ಗಾಂಜಾ ಸಿಕ್ಕಿದೆ ಎಂದು ಕಸ್ಟಮ್ಸ್ ಹೇಳಿದೆ.