ಗರಗಂದೂರು: ಸಂತ್ರಸ್ತರ ಕಾಳಜಿ ಕೇಂದ್ರಕ್ಕೆ ಶಾಸಕ ಭೇಟಿ

| Published : Aug 10 2025, 02:17 AM IST

ಗರಗಂದೂರು: ಸಂತ್ರಸ್ತರ ಕಾಳಜಿ ಕೇಂದ್ರಕ್ಕೆ ಶಾಸಕ ಭೇಟಿ
Share this Article
  • FB
  • TW
  • Linkdin
  • Email

ಸಾರಾಂಶ

ಸಂತ್ರಸ್ತರ ಕಾಳಜಿ ಕೇಂದ್ರಕ್ಕೆ ಶಾಸಕರು ಭೇಟಿ ನೀಡಿ ಮಳೆ ಹಾನಿ ಸಂತ್ರಸ್ತರ ಅಹವಾಲು ಆಲಿಸಿದರು.

ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ

ಗರಗಂದೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಆಶ್ರಯ ಪಡೆದ ಸಂತ್ರಸ್ತರ ಕಾಳಜಿ ಕೇಂದ್ರಕ್ಕೆ ಮಂಗಳವಾರ ಶಾಸಕರಾದ ಡಾ. ಮಂತರ್ ಗೌಡ ಅವರು ಭೇಟಿ ನೀಡಿ ಮಳೆ ಹಾನಿ ಸಂತ್ರಸ್ತರ ಅಹವಾಲುಗಳನ್ನು ಆಲಿಸಿದ ಶಾಸಕರು ಸಾಂತ್ವನ ಹೇಳಿದರು. ನಂತರ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಹಾಗೆಯೇ ಯಾರೂ ಕೂಡ ಭಯ ಪಡುವಂತಹ ಅಗತ್ಯವಿಲ್ಲ. ಗ್ರಾಮ ಪಂಚಾಯಿತಿ, ಜನಪ್ರತಿನಿಧಿಗಳು ನಿಮ್ಮ ಜೊತೆಗಿದ್ದಾರೆ ಎಂದು ಧೈರ್ಯ ತುಂಬಿದರು.ಈ ಸಂದರ್ಭ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ.ಶಶಿಧರ್, ಹರದೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಬೋಜಮ್ಮ, ಉಪಾಧ್ಯಕ್ಷ ಮುಸ್ತಫಾ, ಕಾರ್ಯನಿರ್ವಹಣಾಧಿಕಾರಿ ಪರಮೇಶ್ವರ್ ಇತರರು ಇದ್ದರು.