ಸಾರಾಂಶ
ಚನ್ನಪಟ್ಟಣ: ಖಾಲಿ ಜಾಗದಲ್ಲಿ ಹಾಕಿದ್ದ ಕಸದ ರಾಶಿಗೆ ಕಿಡಿಗೇಡಿಗಳು ಬೆಂಕಿ ಹೊತ್ತಿಸಿದ ಪರಿಣಾಮ ಬೆಂಕಿಯ ಕೆನ್ನಾಲಿಗೆ ಅಕ್ಕಪಕ್ಕದ ಮನೆಗೆಲ್ಲಾ ಹರಡಿ ಟ್ರಾನ್ಸ್‌ಫಾರ್ಮರ್ ಸುಟ್ಟುಹೋಗಿರುವ ಘಟನೆ ಪಟ್ಟಣದ ಕೋಟೆಯ 11ನೇ ವಾರ್ಡ್‌ನಲ್ಲಿ ಸಂಭವಿಸಿದೆ. ಮಂಗಳವಾರ ರಾತ್ರಿ ದುರ್ಘಟನೆ ಸಂಭವಿಸಿದೆ.
ಚನ್ನಪಟ್ಟಣ: ಖಾಲಿ ಜಾಗದಲ್ಲಿ ಹಾಕಿದ್ದ ಕಸದ ರಾಶಿಗೆ ಕಿಡಿಗೇಡಿಗಳು ಬೆಂಕಿ ಹೊತ್ತಿಸಿದ ಪರಿಣಾಮ ಬೆಂಕಿಯ ಕೆನ್ನಾಲಿಗೆ ಅಕ್ಕಪಕ್ಕದ ಮನೆಗೆಲ್ಲಾ ಹರಡಿ ಟ್ರಾನ್ಸ್‌ಫಾರ್ಮರ್ ಸುಟ್ಟುಹೋಗಿರುವ ಘಟನೆ ಪಟ್ಟಣದ ಕೋಟೆಯ 11ನೇ ವಾರ್ಡ್‌ನಲ್ಲಿ ಸಂಭವಿಸಿದೆ. ಮಂಗಳವಾರ ರಾತ್ರಿ ದುರ್ಘಟನೆ ಸಂಭವಿಸಿದೆ. ರಸ್ತೆಯ ಬದಿಯ ಖಾಲಿ ಜಾಗದಲ್ಲಿ ಹಾಕಿದ್ದ ಕಸದ ರಾಶಿಗೆ ಯಾರೋ ಕಿಡಿಗೇಡಿಗಳು ಬೆಂಕಿ ಹೊತ್ತಿಸಿದ್ದು, ಅದು ಸುತ್ತಮುತ್ತ ವ್ಯಾಪಿಸಿದೆ. ಇದನ್ನು ಕಂಡ ಸ್ಥಳೀಯರು ಅಗ್ನಶಾಮಕದಳಕ್ಕೆ ಕರೆಮಾಡಿ ತಿಳಿಸಿದ್ದಾರೆ. ತಕ್ಷಣ ಸ್ಥಳಕ್ಕೆ ಆಗಮಿಸಿದ ಬೆಸ್ಕಾಂ ಹಾಗೂ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಸಫಲರಾಗಿದ್ದಾರೆ. ಘಟನೆಯಲ್ಲಿ ಯಾವುದೇ ರೀತಿಯ ಅಪಾಯ ಸಂಭವಿಸಿಲ್ಲವಾದರೂ ಸ್ಥಳದಲ್ಲಿದ್ದ ಟ್ರಾನ್ಸ್‌ಫಾರ್ಮರ್ ಸುಟ್ಟುಹೋದ ಕಾರಣ ನಗರದಲ್ಲಿ ವಿದ್ಯುತ್ ಪೂರೈಕೆಯಲ್ಲಿ ಕೆಲಕಾಲ ವ್ಯತ್ಯಯವಾಗಿತ್ತು.