ಸಾರಾಂಶ
ಪ್ರವಾಸಿ ಮಂದಿರದ ಸನಿಹದಲ್ಲೇ ಕಸ ಸುರಿದ ಪರಿಣಾಮ ಆ ಪ್ರದೇಶದಲ್ಲಿ ಸಂಪೂರ್ಣ ದುರ್ವಾಸನೆ ವ್ಯಾಪಿಸಿದೆ. ಈ ಕೊಳೆತ ತ್ಯಾಜದಿಂದ ಸಾಂಕ್ರಾಮಿಕ ರೋಗಗಳ ಭೀತಿ ಹೆಚ್ಚಾಗಿದ್ದು, ತಕ್ಷಣವೇ ಕಸವನ್ನು ತೆರವುಗೊಳಿಸಬೇಕು ಹಾಗೂ ಸುರಿದವರನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರಾದ ದೇವಣಿರ ಸುಜಯ್, ಗ್ರಾಮ ಪಂಚಾಯಿತಿಯನ್ನು ಒತ್ತಾಯಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಸಿದ್ದಾಪುರ
ಮೈಸೂರು ರಸ್ತೆಯಲ್ಲಿರುವ ಸರ್ಕಾರಿ ಪ್ರವಾಸಿ ಮಂದಿರ ಸಮೀಪದ ಜನವಸತಿ ಪ್ರದೇಶದಲ್ಲಿ ಟಿಪ್ಪರ್ ಲಾರಿಯಲ್ಲಿ ಕಸವನ್ನು ಸುರಿದಿದ್ದು, ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಪ್ರವಾಸಿ ಮಂದಿರದ ಸನಿಹದಲ್ಲೇ ಕಸ ಸುರಿದ ಪರಿಣಾಮ ಆ ಪ್ರದೇಶದಲ್ಲಿ ಸಂಪೂರ್ಣ ದುರ್ವಾಸನೆ ವ್ಯಾಪಿಸಿದೆ. ಈ ಕೊಳೆತ ತ್ಯಾಜದಿಂದ ಸಾಂಕ್ರಾಮಿಕ ರೋಗಗಳ ಭೀತಿ ಹೆಚ್ಚಾಗಿದ್ದು, ತಕ್ಷಣವೇ ಕಸವನ್ನು ತೆರವುಗೊಳಿಸಬೇಕು ಹಾಗೂ ಸುರಿದವರನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರಾದ ದೇವಣಿರ ಸುಜಯ್, ಗ್ರಾಮ ಪಂಚಾಯಿತಿಯನ್ನು ಒತ್ತಾಯಿಸಿದ್ದಾರೆ.ಸಿದ್ದಾಪುರ ಪ್ರವಾಸಿ ಮಂದಿರ ಉದ್ಘಾಟನೆಗೆ ಬೇಡಿಕೆ:ಸಿದ್ದಾಪುರದಲ್ಲಿ ನಿರ್ಮಾಣಗೊಂಡಿರುವ ಸರ್ಕಾರಿ ಪ್ರವಾಸಿ ಮಂದಿರದ ಎಲ್ಲ ಕಾಮಗಾರಿಗಳು ಪೂರ್ಣಗೊಂಡಿದ್ದರೂ ಈವರೆಗೆ ಉದ್ಘಾಟನೆ ಮಾಡಿಲ್ಲ. ಲಕ್ಷಾಂತರ ರು. ವೆಚ್ಚ ಮಾಡಿ ನಿರ್ಮಿಸಿದ ಮಂದಿರ ಪಾಳು ಬಿದ್ದಿರುವುದರಿಂದ ರಾತ್ರಿ ವೇಳೆ ಅನೈತಿಕ ಚಟುವಟಿಕೆಗಳು ನಡೆಯುತ್ತಿರುವ ಬಗ್ಗೆ ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ತಕ್ಷಣವೇ ಜಿಲ್ಲಾಡಳಿತ ಪ್ರವಾಸಿ ಮಂದಿರದ ಉದ್ಘಾಟನೆ ನಡೆಸಬೇಕೆಂದು ಸ್ಥಳೀಯರಾದ ಅನಿಲ್ ಶೆಟ್ಟಿ ಆಗ್ರಹಿಸಿದ್ದಾರೆ.