ಅಡುಗೆ ಅನಿಲ ಸೋರಿಕೆಯಾಗಿ ಸ್ಫೋಟಗೊಂಡು ಒಂದೇ ಕುಟುಂಬದ 6 ಮಂದಿ ಗಾಯಗೊಂಡಿದ್ದವರ ಪೈಕಿ ತಾಯಿ ಮತ್ತು ಮಗಳು ಮೃತಪಟ್ಟಿದ್ದಾರೆ. ಲಕ್ಷ್ಮಮ್ಮ(43) ಇವರ ಪುತ್ರಿ ಗಿರಿಜಾ(3) ಮೃತ ದುರ್ದೈವಿಗಳು. ಚಂದ್ರಲೇಔಟ್ ಪೊಲೀಸ್ ಠಾಣೆಯ ನಾಯಂಡಹಳ್ಳಿ ಸಮೀಪದ ವಿನಾಯಕ ಲೇಔಟ್‌ನಲ್ಲಿ ಕಳೆದ ಶುಕ್ರವಾರ ಈ ಘಟನೆ ನಡೆದಿತ್ತು.
ಕನ್ನಡಪ್ರಭ ವಾರ್ತೆ ಬೆಂಗಳೂರು
ಅಡುಗೆ ಅನಿಲ ಸೋರಿಕೆಯಾಗಿ ಸ್ಫೋಟಗೊಂಡು ಒಂದೇ ಕುಟುಂಬದ 6 ಮಂದಿ ಗಾಯಗೊಂಡಿದ್ದವರ ಪೈಕಿ ತಾಯಿ ಮತ್ತು ಮಗಳು ಮೃತಪಟ್ಟಿದ್ದಾರೆ. ಲಕ್ಷ್ಮಮ್ಮ(43) ಇವರ ಪುತ್ರಿ ಗಿರಿಜಾ(3) ಮೃತ ದುರ್ದೈವಿಗಳು. ಚಂದ್ರಲೇಔಟ್ ಪೊಲೀಸ್ ಠಾಣೆಯ ನಾಯಂಡಹಳ್ಳಿ ಸಮೀಪದ ವಿನಾಯಕ ಲೇಔಟ್‌ನಲ್ಲಿ ಕಳೆದ ಶುಕ್ರವಾರ ಈ ಘಟನೆ ನಡೆದಿತ್ತು.ಕರಿಲಿಂಗಪ್ಪ (40), ಇವರ ಪತ್ನಿ ಲಕ್ಷ್ಮಮ್ಮ (43), ಮಗಳು ಚೈತ್ರಾ(11) ಬಸಮ್ಮ (9) ಮತ್ತು ಅವಳಿ ಮಕ್ಕಳಾದ ಗೀತಾ (3), ಗಿರಿಜಾ (3) ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಇವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಬುಧವಾರ ಲಕ್ಷ್ಮಮ್ಮ ಇವರ ಪುತ್ರಿ ಗಿರಿಜಾ ಗಿರಿಜಾ ಮೃತಪಟ್ಟಿದ್ದಾರೆ. ಉಳಿದವರಿಗೆ ಚಿಕಿತ್ಸೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಾಯಚೂರು ಮೂಲದ ಕೂಲಿ ಕಾರ್ಮಿಕರಾದ ಕರಿಲಿಂಗಪ್ಪ ಅವರು 3 ವರ್ಷದ ಹಿಂದೆ ನಗರಕ್ಕೆ ಕೆಲಸ ಅರಸಿಕೊಂಡು ಬಂದು ನಾಲ್ವರು ಮಕ್ಕಳೊಂದಿಗೆ ನಾಯಂಡಹಳ್ಳಿಯ ವಿನಾಯಕ ಲೇಔಟ್‌ನಲ್ಲಿ ಬಾಡಿಗೆ ಮನೆ ಮಾಡಿಕೊಂಡು ವಾಸವಿದ್ದರು. ಬೆಳಗ್ಗೆ 6.30 ಗಂಟೆ ಸುಮಾರಿಗೆ ಅಡಿಗೆ ಮಾಡಲು ಸ್ಟೌವ್ ಹಚ್ಚುತ್ತಿದ್ದಂತೆ ಸಿಲಿಂಡರ್‌ನಿಂದ ಅನಿಲ ಸೋರಿಕೆಯಾಗಿ ಏಕಾಏಕಿ ಬೆಂಕಿ ಹೊತ್ತಿಕೊಂಡು ಸ್ಫೋಟ ಸಂಭವಿಸಿದೆ. ನಾಲ್ವರು ಮಕ್ಕಳು ಸೇರಿದಂತೆ 6 ಮಂದಿ ಗಾಯಗೊಂಡಿದ್ದರು.ಸ್ಫೋಟದಿಂದಾಗಿ ಮನೆಯಲ್ಲಿದ್ದ ವಸ್ತುಗಳೆಲ್ಲಾ ಚೆಲ್ಲಾಪಿಲ್ಲಿಯಾಗಿತ್ತು. ಸ್ಫೋಟದ ಸದ್ದು ಕೇಳಿ ನೆರೆಹೊರೆಯವರು ಹೊರಗೆ ಓಡಿ ಬಂದಿದ್ದರು. ಕರಿಲಿಂಗಪ್ಪ ಅವರ ಮನೆಯಲ್ಲಿ ಬೆಂಕಿ ಹೊತ್ತಿಕೊಂಡಿರುವುದು ಕಂಡು ತಕ್ಷಣ ನೆರೆಯ ಜನರು ಮನೆಗೆ ಹೋಗಿ ಬೆಂಕಿಯ ಜ್ವಾಲೆಯಲ್ಲಿ ಸಿಲುಕಿದ್ದ ಗಾಯಾಳುಗಳನ್ನು ರಕ್ಷಿಸಿ ಹೊರಗೆ ಕರೆತಂದು 6 ಮಂದಿಯನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದರು.