ಸಾರಾಂಶ
ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಕಿರಾಣಿ ಅಂಗಡಿ ಸುಟ್ಟು ಕರಕಲಾದ ಘಟನೆ ಜಿಲ್ಲೆಯ ಜಗಳೂರು ತಾಲೂಕು ಹನುಮಂತಾಪುರ ಗೊಲ್ಲರಹಟ್ಟಿಯಲ್ಲಿ ನಡೆದಿದೆ.
ದಾವಣಗೆರೆ: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಕಿರಾಣಿ ಅಂಗಡಿ ಸುಟ್ಟು ಕರಕಲಾದ ಘಟನೆ ಜಿಲ್ಲೆಯ ಜಗಳೂರು ತಾಲೂಕು ಹನುಮಂತಾಪುರ ಗೊಲ್ಲರಹಟ್ಟಿಯಲ್ಲಿ ನಡೆದಿದೆ.
ಗ್ರಾಮದ ಕುಮಾರ್ ಎಂಬವರಿಗೆ ಸೇರಿದ ಕಿರಾಣಿ ಅಂಗಡಿಯಲ್ಲಿಟ್ಟಿದ್ದ ಸಿಲಿಂಡರ್ ಗ್ಯಾಸ್ ಸೋರಿಕೆಯಾಗಿ, ಏಕಾಏಕಿ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಅಂಗಡಿಯಲ್ಲಿದ್ದ ವಸ್ತುಗಳು ಸುಟ್ಟು ಕರಕಲಾಗಿವೆ. ಸ್ಫೋಟದ ಶಬ್ದ ಕೇಳುತ್ತಿದ್ದಂತೆ ಜನ ಗಾಬರಿಯಾಗಿ ಹೊರಗೆ ಓಡಿ ಬಂದರು.ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಘಟನೆಯಲ್ಲಿ ಲಕ್ಷಾಂತರ ರು. ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಧಾವಿಸಿ ಬೆಂಕಿ ನಂದಿಸಿದ್ದಾರೆ. ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- - - (ಸಾಂದರ್ಭಿಕ ಚಿತ್ರ)