ಮಡಿಕೇರಿ: ಅಡುಗೆ ಅನಿಲದ ಬೆಲೆ ಏರಿಕೆ ಖಂಡಿಸಿ ವಿಮೆನ್ ಇಂಡಿಯಾ ಮೂವ್ಮೆಂಟ್ ಕೊಡಗು ಜಿಲ್ಲಾ ಘಟಕ ವತಿಯಿಂದ ನಗರದ ಇಂದಿರಗಾಂಧಿ ವೃತ್ತದಲ್ಲಿ ಶನಿವಾರ ಪ್ರತಿಭಟನೆ ನಡೆಸಲಾಯಿತು.
ವಿಮೆನ್ ಇಂಡಿಯಾ ಮೂವ್ಮೆಂಟ್‌ನ ಪ್ರಧಾನ ಕಾರ್ಯದರ್ಶಿ ರಿಶಾನ್ ತೈಸೀರ್ ಮಾತನಾಡಿ, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚತೈಲದ ಬೆಲೆ ಕುಸಿದಾಗ ನಮಗೆ ಸಿಗುವುದು ಶೂನ್ಯ. ಒಂದು ದಿನ 2 ರು. ಇಳಿಕೆ ಮಾಡಿದರೆ, ಮರುದಿನ 5 ರು. ಹೆಚ್ಚಳ ಮಾಡಲಾಗುತ್ತಿದೆ. ಈ ಹಿನ್ನೆಲೆ ಸರ್ಕಾರದ ವಿರುದ್ಧ ಧ್ವನಿ ಎತ್ತುವ ಸಲುವಾಗಿ ಇಂದು ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತಿದೆ ಎಂದರು. ಬೆಲೆ ನಿಗದಿ ಸಂದರ್ಭ ಪಾರದರ್ಶಕತೆ ಇರಬೇಕು ಎಂದು ಆಗ್ರಹಿಸಿದರು.ವಿಮೆನ್ ಇಂಡಿಯಾ ಮೂವ್ಮೆಂಟ್ ಜಿಲ್ಲಾಧ್ಯಕ್ಷೆ ಝಾಕೀಯ ಮಾತನಾಡಿ, ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರ ಸಿಲಿಂಡರ್‌ನ ಬೆಲೆ ಇಳಿಕೆ ಮಾಡಬೇಕು ಎಂದು ಆಗ್ರಹಿಸಿದರು. ವಿಮೆನ್ ಇಂಡಿಯಾ ಮೂವ್ಮೆಂಟ್ ಉಪಾಧ್ಯಕ್ಷೆ ಸಂಸುನ್ನೀಸಾ, ಕಾರ್ಯದರ್ಶಿ ಮೇರಿ ವೇಗಸ್, ತಾಹೀರಾ ಆಲಿ ಸೇರಿದಂತೆ ವಿಮೆನ್ ಇಂಡಿಯಾ ಮೂವ್ಮೆಂಟ್ ಪದಾಧಿಕಾರಿಗಳು ಪಾಲ್ಗೊಂಡಿದ್ದರು.ಅನಿಲ ದರ ಏರಿಕೆ: ವಿಮೆನ್ ಇಂಡಿಯಾ ಪ್ರತಿಭಟನೆ
ಅಡುಗೆ ಅನಿಲದ ಬೆಲೆ ಏರಿಕೆ ಖಂಡಿಸಿ ವಿಮೆನ್ ಇಂಡಿಯಾ ಮೂವ್ಮೆಂಟ್ ಕೊಡಗು ಜಿಲ್ಲಾ ಘಟಕ ವತಿಯಿಂದ ನಗರದ ಇಂದಿರಗಾಂಧಿ ವೃತ್ತದಲ್ಲಿ ಶನಿವಾರ ಪ್ರತಿಭಟನೆ ನಡೆಸಲಾಯಿತು.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.