ಹೊನ್ನಾಳಿಯಲ್ಲಿ ಗೌರಿ, ಗಣೇಶ ವಿಸರ್ಜನೆ

| Published : Sep 16 2025, 01:00 AM IST

ಸಾರಾಂಶ

ಹೊನ್ನಾಳಿ ಪಟ್ಟಣದ ಶ್ರೀ ಹಳದಮ್ಮ ದೇವಿ ದೇವಸ್ಥಾನದಲ್ಲಿ ಶ್ರೀ ಹಿಂದೂ ಮಹಾಸಭಾ ಗೌರಿ- ಗಣೇಶ ಸೇವಾ ಸಮಿತಿ ವತಿಯಿಂದ ಗಣೇಶ ಚರ್ತುರ್ಥಿಯಂದು ಪ್ರತಿಷ್ಠಾಪಿಸಲಾಗಿದ್ದ ಗೌರಿ- ಗಣೇಶ ಮೂರ್ತಿಗಳನ್ನು ಭಾನುವಾರ ಪಟ್ಟಣದ ಪ್ರಮುಖ ಬೀದಿಗಳಲ್ಲಿ ವಿವಿಧ ಕಲಾ ಮೇಳಗಳೊಂದಿಗೆ ಅದ್ಧೂರಿ ಹಾಗೂ ಶಾಂತಿಯುತವಾಗಿ ಮೆರವಣಿಗೆ ನಡೆಸಿ, ತುಂಗಭದ್ರಾ ನದಿಯಲ್ಲಿ ವಿಸರ್ಜನೆ ಮಾಡಲಾಯಿತು.

ಹೊನ್ನಾಳಿ: ಪಟ್ಟಣದ ಶ್ರೀ ಹಳದಮ್ಮ ದೇವಿ ದೇವಸ್ಥಾನದಲ್ಲಿ ಶ್ರೀ ಹಿಂದೂ ಮಹಾಸಭಾ ಗೌರಿ- ಗಣೇಶ ಸೇವಾ ಸಮಿತಿ ವತಿಯಿಂದ ಗಣೇಶ ಚರ್ತುರ್ಥಿಯಂದು ಪ್ರತಿಷ್ಠಾಪಿಸಲಾಗಿದ್ದ ಗೌರಿ- ಗಣೇಶ ಮೂರ್ತಿಗಳನ್ನು ಭಾನುವಾರ ಪಟ್ಟಣದ ಪ್ರಮುಖ ಬೀದಿಗಳಲ್ಲಿ ವಿವಿಧ ಕಲಾ ಮೇಳಗಳೊಂದಿಗೆ ಅದ್ಧೂರಿ ಹಾಗೂ ಶಾಂತಿಯುತವಾಗಿ ಮೆರವಣಿಗೆ ನಡೆಸಿ, ತುಂಗಭದ್ರಾ ನದಿಯಲ್ಲಿ ವಿಸರ್ಜನೆ ಮಾಡಲಾಯಿತು.

ಭಾನುವಾರ ಬೆಳಗ್ಗೆಯಿಂದ ಮಧ್ಯಾಹ್ನವರೆಗೆ ಭಕ್ತರಿಗೆ ಅನ್ನ ಸಂತರ್ಪಣೆ ನಡೆಯಿತು. ಅನಂತರ ಹಳದಮ್ಮ ದೇವಿ ದೇವಸ್ಥಾನದಿಂದ ಹೂವುಗಳಿಂದ ಅಲಂಕೃತಗೊಂಡ ಟ್ರ್ಯಾಕ್ಟರ್‌ನಲ್ಲಿ ವಿವಿಧ ಕಲಾಮೇಳಗಳು, ಮಂಗಳವಾದ್ಯಗಳೊಂದಿಗೆ ಮೆರವಣಿಗೆ ಆರಂಭವಾಯಿತು. ದುರ್ಗಿಗುಡಿ ಸರ್ಕಲ್, ಮರಳೋಣಿ ರಸ್ತೆ ಮೂಲಕ ಸಾಗಿದ ಮೆರವಣಿಗೆಯು ಹಿರೇಮಠ, ಸಂಗೊಳ್ಳಿ ರಾಯಣ್ಣ ವೃತ್ತ ಮಾರ್ಗವಾಗಿ ಪೇಟೆ ಬೀದಿಗೆ ತೆರಳಿ ನದಿಯವರೆಗೆ ಸಾಗಿತು.

ಮೆರವಣಿಗೆ ವೇಳೆ ಭಕ್ತರು ಹಣ್ಣು, ಕಾಯಿ, ಹೂವುಗಳನ್ನು ನೀಡಿ ಗೌರಿ-ಗಣೇಶನಿಗೆ ಪೂಜೆ ಸಲ್ಲಿಸಿದರು. ಪೊಲೀಸ್ ಇನ್‌ಸ್ಪೆಕ್ಟರ್ ಸುನೀಲ್ ಕುಮಾರ್ ಹಾಗೂ ನ್ಯಾಮತಿ ಸಿಪಿಐ ರವಿ ನೇತೃತ್ವದಲ್ಲಿ ಬಿಗಿ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿತ್ತು. ಭಾನುವಾರ ಮೆರವಣಿಗೆ ಬಳಿಕ ರಾತ್ರಿ 9.30ರ ಸುಮಾರಿಗೆ ಶಾಸ್ತ್ರೋಕ್ತವಾಗಿ ಗೌರಿ-ಗಣೇಶ ಮೂರ್ತಿಗಳಿಗೆ ಪೂಜೆ ಸಲ್ಲಿಸಿ, ತುಂಗಭದ್ರಾ ನದಿಯಲ್ಲಿ ವಿಸರ್ಜನೆ ಮಾಡಲಾಯಿತು.

- - -

-15ಎಚ್.ಎಲ್.ಐ2: