ಗಾಯತ್ರಿ ಸಿದ್ದೇಶ್ವರ ಗೆಲವು ದಾಖಲೆಯಾಗಿಸಿ: ರವೀಂದ್ರನಾಥ

| Published : Mar 28 2024, 12:50 AM IST

ಗಾಯತ್ರಿ ಸಿದ್ದೇಶ್ವರ ಗೆಲವು ದಾಖಲೆಯಾಗಿಸಿ: ರವೀಂದ್ರನಾಥ
Share this Article
  • FB
  • TW
  • Linkdin
  • Email

ಸಾರಾಂಶ

ಮೂರನೇ ಬಾರಿಗೆ ನರೇಂದ್ರ ಮೋದಿ ಪ್ರಧಾನಿಯಾಗಬೇಕು. ರಾಜ್ಯದ 28 ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲಬೇಕು. ಅದರಲ್ಲೂ ದಾವಣಗೆರೆ ಕ್ಷೇತ್ರದಲ್ಲಿ ಅತಿ ಹೆಚ್ಚು ಮತಗಳ ಅಂತರದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಲು ಹಗಲು-ರಾತ್ರಿ ಎನ್ನದೇ ಶ್ರಮಿಸಬೇಕು ಎಂದು ಪಕ್ಷದ ಚುನಾವಣಾ ಉಸ್ತುವಾರಿ, ಮಾಜಿ ಸಚಿವ ಎಸ್‌.ಎ.ರವೀಂದ್ರನಾಥ ದಾವಣಗೆರೆಯಲ್ಲಿ ಹೇಳಿದ್ದಾರೆ.

- ಬಿಜೆಪಿ ಕಚೇರಿಯಲ್ಲಿ ಲೋಕಸಭಾ ಚುನಾವಣೆ ನಿರ್ವಹಣಾ ಸಮಿತಿ ಸಭೆ- - - ಕನ್ನಡಪ್ರಭ ವಾರ್ತೆ, ದಾವಣಗೆರೆ

ಮೂರನೇ ಬಾರಿಗೆ ನರೇಂದ್ರ ಮೋದಿ ಪ್ರಧಾನಿಯಾಗಬೇಕು. ರಾಜ್ಯದ 28 ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲಬೇಕು. ಅದರಲ್ಲೂ ದಾವಣಗೆರೆ ಕ್ಷೇತ್ರದಲ್ಲಿ ಅತಿ ಹೆಚ್ಚು ಮತಗಳ ಅಂತರದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಲು ಹಗಲು-ರಾತ್ರಿ ಎನ್ನದೇ ಶ್ರಮಿಸಬೇಕು ಎಂದು ಪಕ್ಷದ ಚುನಾವಣಾ ಉಸ್ತುವಾರಿ, ಮಾಜಿ ಸಚಿವ ಎಸ್‌.ಎ.ರವೀಂದ್ರನಾಥ ಹೇಳಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಎನ್.ರಾಜಶೇಖರ ನಾಗಪ್ಪ ಅಧ್ಯಕ್ಷತೆಯಲ್ಲಿ ಲೋಕಸಭಾ ಚುನಾವಣಾ ನಿರ್ವಹಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಪಕ್ಷದ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಅವರನ್ನು ಅತಿ ಹೆಚ್ಚು ಮತಗಳ ಅಂತರದಲ್ಲಿ ಗೆಲ್ಲಿಸಬೇಕು. ದಾವಣಗೆರೆ ಬಿಜೆಪಿಯ ಭದ್ರಕೋಟೆ ಎಂಬುದನ್ನು ನಾವೆಲ್ಲರೂ ಮತ್ತೊಂದು ಸಲ ಸಾಬೀತುಪಡಿಸೋಣ. ಈಗಿನಿಂದಲೇ ಎಲ್ಲರೂ ಸೇರಿ, ಬಿಜೆಪಿಯನ್ನು ಗೆಲ್ಲಿಸುವ ನಿಟ್ಟಿನಲ್ಲಿ ಸಂಘಟಿತ ಶಕ್ತಿಯಾಗಿ ಕೆಲಸ ಮಾಡೋಣ. ನಮ್ಮ ಗುರಿ 28 ಕ್ಷೇತ್ರವನ್ನು ರಾಜ್ಯದಲ್ಲಿ ಗೆದ್ದು, ನರೇಂದ್ರ ಮೋದಿ ಅವರನ್ನು ಮತ್ತೆ ಪ್ರಧಾನಿ ಮಾಡುವುದೇ ಆಗಿದೆ ಎಂದು ತಿಳಿಸಿದರು.

ಸಂಸದ ಡಾ. ಜಿ.ಎಂ. ಸಿದ್ದೇಶ್ವರ, ಹರಿಹರ ಶಾಸಕ ಬಿ.ಪಿ. ಹರೀಶ ಗೌಡ, ನಿಕಟಪೂರ್ವ ಜಿಲ್ಲಾಧ್ಯಕ್ಷ ಎಸ್.ಎಂ. ವೀರೇಶ ಹನಗವಾಡಿ, ಮಾಜಿ ಶಾಸಕರಾದ ಜಗಳೂರಿನ ಎಸ್‌.ವಿ. ರಾಮಚಂದ್ರ, ಮಾಯಕೊಂಡದ ಪ್ರೊ. ಎನ್.ಲಿಂಗಣ್ಣ, ಎಂ.ಬಸವರಾಜ ನಾಯ್ಕ, ವಿಪ ಮಾಜಿ ಮುಖ್ಯ ಸಚೇತಕ ಡಾ. ಎ.ಎಚ್. ಶಿವಯೋಗಿಸ್ವಾಮಿ, ಮಾಡಾಳ ಮಲ್ಲಿಕಾರ್ಜುನ, ಧನಂಜಯ ಕಡ್ಲೇಬಾಳು, ಬಿ.ಜಿ. ಅಜಯಕುಮಾರ, ಅನಿಲಕುಮಾರ ನಾಯ್ಕ, ಐರಣಿ ಅಣ್ಣೇಶ, ಕ್ಷೇತ್ರದ ಜಿಲ್ಲಾ ನಿರ್ವಹಣಾ ಸಮಿತಿ ಸದಸ್ಯರು ಇದ್ದರು.

- - - -27ಕೆಡಿವಿಜಿ8:

ಬಿಜೆಪಿ ಕಚೇರಿ ಸಭೆಯಲ್ಲಿ ಎಸ್.ಎ.ರವೀಂದ್ರನಾಥ, ಜಿ.ಎಂ.ಸಿದ್ದೇಶ್ವರ ಇತರರು ಪಾಲ್ಗೊಂಡು ಮಾತನಾಡಿದರು.