ಇಂದು ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ನೇಮಕ ಪರೀಕ್ಷೆ

| Published : Dec 29 2024, 01:20 AM IST

ಇಂದು ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ನೇಮಕ ಪರೀಕ್ಷೆ
Share this Article
  • FB
  • TW
  • Linkdin
  • Email

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ ಮುಂದಿನ ಆಡಳಿತದ ಅಧಿಕಾರಿಗಳು ರೂಪುಗೊಳ್ಳುವ ಪರೀಕ್ಷೆ ಇದಾಗಿದ್ದು, ಅತ್ಯಂತ ಎಚ್ಚರಿಕೆ, ಪಾರದರ್ಶಕತೆಯಿಂದ ಪರೀಕ್ಷೆ ನಡೆಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸೂಚಿಸಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ಮುಂದಿನ ಆಡಳಿತದ ಅಧಿಕಾರಿಗಳು ರೂಪುಗೊಳ್ಳುವ ಪರೀಕ್ಷೆ ಇದಾಗಿದ್ದು, ಅತ್ಯಂತ ಎಚ್ಚರಿಕೆ, ಪಾರದರ್ಶಕತೆಯಿಂದ ಪರೀಕ್ಷೆ ನಡೆಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸೂಚಿಸಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ೨೦೨೩-೨೪ನೇ ಸಾಲಿನ ಗೆಜೆಟೆಡ್ ಪ್ರೊಬೆಷನರಿ ಗ್ರೂಪ್ ಎ ಹಾಗೂ ಬಿ ವೃಂದದ ಪರೀಕ್ಷೆಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಡಿ.೨೯ ರಂದು ನಡೆಯುವ ೩೨ ಕೇಂದ್ರಗಳಲ್ಲಿ ಒಟ್ಟು ೧೨,೭೪೧ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಬೆಳಗ್ಗೆ ೧೦ ರಿಂದ ೧೨ಗಂಟೆವರೆಗೆ 1ನೇ ಅಧಿವೇಶನ ಮಧ್ಯಾಹ್ನ ೨ ರಿಂದ ೪ಗಂಟೆಯವರೆಗೆ 2ನೇ ಅವಧಿವೇಶನ ಪರೀಕ್ಷೆಗಳು ಜರುಗಲಿವೆ. ಅಭ್ಯರ್ಥಿಗಳು ಪರೀಕ್ಷಾ ದಿನಗಳಂದು ಬೆಳಗಿನ ಹಾಗೂ ಮಧ್ಯಾಹ್ನದ ಅಧಿವೇಶನಗಳ ಪರೀಕ್ಷೆ ಪ್ರಾರಂಭವಾಗುವ ೨ ಗಂಟೆ ಮೊದಲು ಕಡ್ಡಾಯವಾಗಿ ಪರೀಕ್ಷಾ ಕೇಂದ್ರದಲ್ಲಿ ಹಾಜರಿರಬೇಕು. ಪರೀಕ್ಷಾ ಕೇಂದ್ರಗಳ ಸುತ್ತ ೨೦೦ ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸುವುದು. ಪರೀಕ್ಷಾ ಕೇಂದ್ರಗಳಿಗೆ ಉಪಕೇಂದ್ರಗಳ ಮೇಲ್ವಿಚಾರಣೆಗೆ ಓರ್ವ ಎ ಹಾಗೂ ಬಿ ದರ್ಜೆಯ ಅಧಿಕಾರಿ ನೇಮಿಸಿವುದು ಪ್ರಶ್ನೆ ಪತ್ರಿಕೆ ಕೊಂಡೊಯ್ಯಲು ಮಾರ್ಗಾಧಿಕಾರಿಯನ್ನು ನೇಮಿಸಿ ಅವರಿಗೆ ಬೆಂಗಾವಲು ಕಾರ್ಯಕ್ಕಾಗಿ ಓರ್ವ ಸಶಸ್ತ್ರ ಪೊಲೀಸ್ ಸಿಬ್ಬಂದಿ, ಗ್ರೂಪ್-ಡಿ ಸಿಬ್ಬಂದಿ, ವಾಹನದ ವ್ಯವಸ್ಥೆ ಮಾಡಬೇಕು ಎಂದು ಸೂಚನೆ ನೀಡಿದರು.

ಅಭ್ಯರ್ಥಿಗಳನ್ನು ಕಟ್ಟುನಿಟ್ಟಾಗಿ ತಪಾಸಣೆಗೊಳಪಡಿಸಬೇಕು. ಅಭ್ಯರ್ಥಿಗಳ ಯಾವುದೇ ಎಲೆಕ್ಟ್ರಾನಿಕ್ ಡಿವೈಸ್, ಮೈಕ್ರೋಪೂನ್ ಇನ್ನಿತರ ಉಪಕರಣ ಬಳಸದಿರುವ ಬಗ್ಗೆ ತಪಾಸಣೆ ನಡೆಸಬೇಕು. ಪರೀಕ್ಷಾ ಹಿಂದಿನ ದಿನ ಸಿಸಿಟಿವಿ ಕ್ಯಾಮೆರಾ, ಬಾಡಿ ಕ್ಯಾಮೆರಾ, ಪ್ರಿಸ್ಕಿಂಗ್, ಮುಖ ಚಹರೆ ಮತ್ತು ಜಾಮರ್ ಗಳನ್ನು ಉಪ ಪರೀಕ್ಷಾ ಕೇಂದ್ರದ ಪರೀಕ್ಷಾ ಕೊಠಡಿಗಳಲ್ಲಿ ಅಳವಡಿಸುವುದು, ಪರೀಕ್ಷಾ ದಿನದಂದು ಅವುಗಳು ಕಾರ್ಯನಿರ್ವಹಿಸುತ್ತಿರುವ ಕುರಿತು ಪರಿಶೀಲಿಸಬೇಕು. ಪರೀಕ್ಷೆ ಶುರುವಾಗುವ ಅರ್ಧಗಂಟೆಯ ಮುಂಚೆ ಜಾಮರ್ ಆನ್ ಮಾಡುವುದು, ಪರೀಕ್ಷಾ ಮುಗಿದ ಅರ್ಧ ಗಂಟೆಯ ನಂತರ ಬಂದ್ ಮಾಡುವುದು. ಎಲ್ಲಾ ಸಿಸಿಟಿವಿ ಕ್ಯಾಮರಾಗಳ ವೀಕ್ಷಣೆಗೆ ಅನುಕೂಲವಾಗುವಂತೆ ದೃಶ್ಯಾವಳಿ ವೀಕ್ಷಿಸಲು ಮಾನಿಟರ್ ಅಳವಡಿಸಿ ವೆಬ್ ಕಾಸ್ಟಿಂಗ್ ಮಾಡಬೇಕು. ಪರೀಕ್ಷಾ ಕೊಠಡಿಗಳಲ್ಲಿ ಸಮರ್ಪಕ ಗಾಳಿ ಬೆಳಕಿನ ವ್ಯವಸ್ಥೆ ಇರುವಂತೆ ನೋಡಿಕೊಳ್ಳಬೇಕು. ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಪ್ರತ್ಯೇಕ ಶೌಚಾಲಯ ವ್ಯವಸ್ಥೆ ಸೇರಿದಂತೆ ಅಗತ್ಯ ಕ್ರಮ ವಹಿಸುವಂತೆ ನಿರ್ದೇಶನ ನೀಡಿದರು.

ಪ್ರತಿ ಅಭ್ಯರ್ಥಿಯ ಮಧ್ಯೆ ೨ಮೀಟರ್ ಅಂತರವಿರಬೇಕು. ವಿಶೇಷಚೇತನ ಅಭ್ಯರ್ಥಿಗಳಿಗೆ ಪರೀಕ್ಷಾ ಕೊಠಡಿಗಳಿಗೆ ತೆರಳಲು ವೀಲ್‌ಚೇರ. ಇಯರಿಂಗ್ ಏಯ್ಡ್ ಧರಿಸಿರುವ ಅಭ್ಯರ್ಥಿಗಳು ವೈದ್ಯಕೀಯ ದಾಖಲೆ ಕಡ್ಡಾಯವಾಗಿ ನೀಡಬೇಕು. ಮಹಿಳೆಯರಿಗೆ ಮಹಿಳಾ ಸಿಬ್ಬಂದಿಯೇ ತಪಾಸಣೆ ನಡೆಸಬೇಕು. ವ್ಯವಸ್ಥಿತ ಪರೀಕ್ಷೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ ಮಾತನಾಡಿ, ಪರೀಕ್ಷಾ ದಿನದಂದು ಪೋಲಿಸ್ ಇಲಾಖೆಯಿಂದ ಎಲ್ಲ ರೀತಿಯ ಸಹಾಯ ಸಹಕಾರಿ ನೀಡುವುದಾಗಿ ತಿಳಿಸಿದರು.ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ರಾಜಶೇಖರ ಡಂಬಳ, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಡಾ.ಸಿ.ಕೆ.ಹೊಸಮನಿ, ಮಾರ್ಗಾಧಿಕಾರಿಗಳು, ಅಧೀಕ್ಷಕರು, ಸ್ಥಾನಿಕ ನಿರೀಕ್ಷಣಾಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪ್ರಾಂಶುಪಾಲರು, ಉಪನ್ಯಾಸಕರು ಉಪಸ್ಥಿತರಿದ್ದರು.