ಸರ್ಕಾರಿ ಬಸ್ ನಲ್ಲಿ ಪ್ರಯಾಣಿಸಿದ ಗೀತಾ ಶಿವರಾಜಕುಮಾರ್

| Published : Oct 11 2023, 12:45 AM IST

ಸರ್ಕಾರಿ ಬಸ್ ನಲ್ಲಿ ಪ್ರಯಾಣಿಸಿದ ಗೀತಾ ಶಿವರಾಜಕುಮಾರ್
Share this Article
  • FB
  • TW
  • Linkdin
  • Email

ಸಾರಾಂಶ

ನಗರದಲ್ಲಿ ಮಹಿಳಾ ಕಾಂಗ್ರೆಸ್ ಹಮ್ಮಿಕೊಂಡಿದ್ದ ನಾರೀಶಕ್ತಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ಗೀತಾ ಶಿವರಾಜ್ ಕುಮಾರ್ ಅವರು ಬಸ್‌ನಲ್ಲಿ ಪ್ರಯಾಣಿಸುವ ಮೂಲಕ ಶಕ್ತಿ ಯೋಜನೆಯ ಮಹತ್ವ ತಿಳಿಸಿದರು.
ಕನ್ನಡಪ್ರಭ ವಾರ್ತೆ ಬಳ್ಳಾರಿ ನಗರದಲ್ಲಿ ಮಹಿಳಾ ಕಾಂಗ್ರೆಸ್ ಹಮ್ಮಿಕೊಂಡಿದ್ದ ನಾರೀಶಕ್ತಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ಗೀತಾ ಶಿವರಾಜ್ ಕುಮಾರ್ ಅವರು ಬಸ್‌ನಲ್ಲಿ ಪ್ರಯಾಣಿಸುವ ಮೂಲಕ ಶಕ್ತಿ ಯೋಜನೆಯ ಮಹತ್ವ ತಿಳಿಸಿದರು. ಬಳ್ಳಾರಿಯ ಕೆಆರ್‌ಎಸ್ ಫಂಕ್ಷನ್‌ ಹಾಲ್‌ನಿಂದ ರಾಯಲ್ ವೃತ್ತದವರೆಗೆ ಪ್ರಯಾಣ ಬೆಳೆಸಿದರು. ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಕಂಡಕ್ಟರ್ ಆಗಿ ಟಿಕೆಟ್ ನೀಡಿದರು. ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಸೇರಿದಂತೆ ಪಕ್ಷದ ಮಹಿಳಾ ಘಟಕದ ಪದಾಧಿಕಾರಿಗಳು ಸಾಥ್ ನೀಡಿದರು.