27ರಂದು ರಾಜ್ಯ ಸರ್ಕಾರಿ ನೌಕರರ ಮಹಾಸಮ್ಮೇಳನ: ರಾಜ್ಯಾಧ್ಯಕ್ಷ ಷಡಾಕ್ಷರಿ

| Published : Feb 20 2024, 01:46 AM IST

27ರಂದು ರಾಜ್ಯ ಸರ್ಕಾರಿ ನೌಕರರ ಮಹಾಸಮ್ಮೇಳನ: ರಾಜ್ಯಾಧ್ಯಕ್ಷ ಷಡಾಕ್ಷರಿ
Share this Article
  • FB
  • TW
  • Linkdin
  • Email

ಸಾರಾಂಶ

ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಫೆ.27ರಂದು ಬೆಳಗ್ಗೆ 11 ಗಂಟೆಗೆ ರಾಜ್ಯ ಸರ್ಕಾರಿ ನೌಕರರ ಮಹಾಸಮ್ಮೇಳನ ಆಯೋಜಿಸಿದ್ದು, 2.50 ಲಕ್ಷಕ್ಕೂ ಹೆಚ್ಚು ನೌಕರರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಮ್ಮೇಳನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೌಕರರಿಗೆ ಆಶಯ ನುಡಿಗಳನ್ನಾಡಿದ್ದಾರೆ. ಸರ್ಕಾರದ ಎಲ್ಲ ಸಚಿವರು ಪಾಲ್ಗೊಳ್ಳಲಿದ್ದಾರೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಹೇಳಿದ್ದಾರೆ.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಫೆ.27ರಂದು ಬೆಳಗ್ಗೆ 11 ಗಂಟೆಗೆ ರಾಜ್ಯ ಸರ್ಕಾರಿ ನೌಕರರ ಮಹಾಸಮ್ಮೇಳನ ಆಯೋಜಿಸಿದ್ದು, 2.50 ಲಕ್ಷಕ್ಕೂ ಹೆಚ್ಚು ನೌಕರರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಹೇಳಿದರು.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮ್ಮೇಳನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೌಕರರಿಗೆ ಆಶಯ ನುಡಿಗಳನ್ನಾಡಿದ್ದಾರೆ. ಸರ್ಕಾರದ ಎಲ್ಲ ಸಚಿವರು ಪಾಲ್ಗೊಳ್ಳಲಿದ್ದಾರೆ ಎಂದರು.

ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ನೌಕರರ ಸೇವೆ ಹಾಗೂ ಕಾರ್ಯದಕ್ಷತೆ ಕುರಿತು, ಹೃದ್ರೋಗ ತಜ್ಞ ಡಾ. ಸಿ.ಎನ್. ಮಂಜುನಾಥ್ ನೌಕರರ ಒತ್ತಡ ನಿರ್ವಹಣೆ ಕುರಿತು ಉಪನ್ಯಾಸ ನೀಡಲಿದ್ದಾರೆ. ಸರ್ಕಾರದ ಉನ್ನತ ಅಧಿಕಾರಿಗಳು ಆಡಳಿತದಲ್ಲಿ ರಾಜ್ಯ ಸರ್ಕಾರಿ ನೌಕರರು ಭಾಗವಹಿಸುವಿಕೆ ಬಗ್ಗೆ ಮಾಹಿತಿ ಹಂಚಿಕೊಳ್ಳಲಿದ್ದಾರೆ. ಸರ್ಕಾರಿ ನೌಕರರ ಸಂಘ ನಡೆದು ಬಂದ ದಾರಿ ಹಾಗೂ ಸಂಘದ ಸಾಧನೆಗಳ ಕುರಿತು ನೌಕರರ ಸೇನೆ ಸಾಕ್ಷ್ಯಚಿತ್ರ ಬಿಡುಗಡೆ ಮಾಡಲಿದ್ದಾರೆ ಎಂದರು.

ಶಿವಮೊಗ್ಗ ಜಿಲ್ಲೆಯಿಂದ 100 ಬಸ್ ಮತ್ತು ಇತರೆ ವಾಹನಗಳಲ್ಲಿ ನೌಕರರು ಹೊರಡಲಿದ್ದಾರೆ. ಭಾಗವಹಿಸುವವ ನೌಕರರಿಗೆ ಒಒಡಿ ಹಾಗೂ ಸಾಂದರ್ಭಿಕ ರಜೆಯನ್ನು ಸರ್ಕಾರ ಮಂಜೂರು ಮಾಡಲಿದೆ ಎಂದು ತಿಳಿಸಿದರು.

ಬೇಡಿಕೆಗಳೇನೇನು?:

ಸಮ್ಮೇಳನದಲ್ಲಿ 7ನೇ ವೇತನ ಆಯೋಗದಿಂದ ವರದಿ ಪಡೆದು ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸುವುದು, ಎನ್‌ಪಿಎಸ್ ರದ್ದು ಮಾಡಿ ಒಪಿಎಸ್ ಮರು ಸ್ಥಾಪಿಸುವ ಸಲುವಾಗಿ ಮೊದಲನೆ ಹಂತದಲ್ಲಿ ಎನ್‌ಪಿಎಸ್ ನೌಕರರ ವೇತನದಲ್ಲಿ ಕಟಾವಣೆ ಆಗುತ್ತಿರುವ ವಂತಿಗೆಯನ್ನು ಏಪ್ರಿಲ್‌ 2024ರಿಂದ ಕಡಿತಗೊಳಿಸದಂತೆ ಸರ್ಕಾರಿ ಆದೇಶ ಹೊರಡಿಸುವುದು, ಆರೋಗ್ಯ ಸಂಜೀವಿನಿ ಯೋಜನೆಯನ್ನು ಶೀಘ್ರ ಅನುಷ್ಠಾನ ಇನ್ನಿತರ ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದು ವಿವರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಪದಾಧಿಕಾರಿಗಳಾದ ಮೋಹನ್‌ಕುಮಾರ್, ಡಿ.ಟಿ.ಕೃಷ್ಣಮೂರ್ತಿ, ನರಸಿಂಹಮೂರ್ತಿ, ಪ್ರಸನ್ನ, ಆರ್.ಪಾಪಣ್ಣ ಇದ್ದರು.

- - - -19ಎಸ್ಎಂಜಿಕೆಪಿ05: ಸಿ.ಎಸ್‌.ಷಡಾಕ್ಷರಿ