ಸಾರಾಂಶ
ಚನ್ನಪಟ್ಟಣ: ಕಾರ್ಮಿಕ ಇಲಾಖೆ ಅಸಂಘಟಿತ ವಲಯದ ಪತ್ರಿಕಾ ವಿತರಕರಿಗೆ ಕೊಡ ಮಾಡುವ ಇ-ಶ್ರಮ್ ಕಾರ್ಡ್‌ಗಳನ್ನು ಜಿಲ್ಲೆಯ ಎಲ್ಲಾ ಪತ್ರಿಕಾ ವಿತರಕರು ಪಡೆದುಕೊಂಡು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಪತ್ರಿಕಾ ವಿತರಕರ ಸಂಘದ ಅಧ್ಯಕ್ಷ ಎಂ.ಶಿವಮಾದು ಸಲಹೆ ನೀಡಿದರು.

ಪಟ್ಟಣದಲ್ಲಿ ಕಾರ್ಮಿಕ ಇಲಾಖೆ ಹಾಗೂ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಸಹಯೋಗದಲ್ಲಿ ತಾಲೂಕಿನ ಪತ್ರಿಕಾ ವಿತರಕರಿಗೆ ಇ-ಶ್ರಮ್ ಕಾರ್ಡ್ ಹಾಗೂ ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್‌ಗಳಿಗೆ ನೋಂದಣಿ ಮಾಡಿದ ಸಂದರ್ಭದಲ್ಲಿ ಅವರು ಮಾತನಾಡಿದರು.ಈಗಾಗಲೇ ರಾಮನಗರ ಹಾಗೂ ಚನ್ನಪಟ್ಟಣ ತಾಲೂಕಿನ ಪತ್ರಿಕಾ ವಿತರಕರ ಕಾರ್ಡ್‌ಗಳ ನೋಂದಣಿಗೆ ಚಾಲನೆ ನೀಡಲಾಗಿದೆ. ಜಿಲ್ಲೆಯ ಇನ್ನುಳಿದ ತಾಲೂಕುಗಳ ವಿತರಕರನ್ನು ನೋಂದಣಿ ಮಾಡಿಕೊಂಡು ಇ-ಶ್ರಮ್ ಹಾಗೂ ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್‌ಗಳನ್ನು ನೀಡಲಾಗುವುದು ಎಂದರು.
ಕಾರ್ಮಿಕ ಇಲಾಖೆಯ ಯೋಜನಾ ನಿರ್ದೇಶಕರು, ಜಿಲ್ಲಾ ಬಾಲ ಕಾರ್ಮಿಕರ ಸೊಸೈಟಿಯ ಬಿ.ಆರ್.ದಿನೇಶ್, ಅರ್ಪಿತಾ ಬಿ.ಎಸ್, ಧರ್ಮಸ್ಥಳ ಸಂಸ್ಥೆಯ ಶ್ವೇತಾ ಎನ್, ಮನೋಜ್ ಇತರರಿದ್ದರು. ಈ ಸಂದರ್ಭದಲ್ಲಿ ತಾಲೂಕಿನ 30ಕ್ಕೂ ಹೆಚ್ಚು ಪತ್ರಿಕಾ ವಿತರಕರ ನೋಂದಣಿ ಮಾಡಿಕೊಂಡರು.ಪೊಟೋ೨೧ಸಿಪಿಟಿ೮:
ಚನ್ನಪಟ್ಟಣದಲ್ಲಿ ತಾಲೂಕಿನ ಪತ್ರಿಕಾ ವಿತರಕರಿಗೆ ಇ-ಶ್ರಮ್ ಕಾರ್ಡ್ ಹಾಗೂ ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್‌ಗಳ ನೋಂದಣಿ ಕಾರ್ಯ ನಡೆಯಿತು.