ಸಾರಾಂಶ
ಗ್ರಾಮೀಣ ಪ್ರದೇಶಗಳ ರೈತರ ಸಮಗ್ರ ಅಭಿವೃದ್ಧಿಗೆ ರೈತ ಸಂಪರ್ಕ ಕೇಂದ್ರಗಳು ಅವಶ್ಯಕವಾಗಿವೆ. ರೈತರು ಕೃಷಿ ಇಲಾಖೆಯಿಂದ ಸಿಗುವಂಥ ಎಲ್ಲ ಸೌಲಭ್ಯಗಳನ್ನು ಸಕಾಲಕ್ಕೆ ಪಡೆದು, ಆರ್ಥಿಕ ಪ್ರಗತಿ ಸಾಧಿಸಬೇಕು ಎಂದು ಶಾಸಕ ಕೆ.ಎಸ್.ಬಸವಂತಪ್ಪ ಹೇಳಿದ್ದಾರೆ.
- ತ್ಯಾವಣಗಿಯಲ್ಲಿ ₹60 ಲಕ್ಷ ವೆಚ್ಚದ ರೈತ ಸಂಪರ್ಕ ಕೇಂದ್ರ ಉದ್ಘಾಟನೆ - - - ಕನ್ನಡಪ್ರಭ ವಾರ್ತೆ ದಾವಣಗೆರೆ
ಗ್ರಾಮೀಣ ಪ್ರದೇಶಗಳ ರೈತರ ಸಮಗ್ರ ಅಭಿವೃದ್ಧಿಗೆ ರೈತ ಸಂಪರ್ಕ ಕೇಂದ್ರಗಳು ಅವಶ್ಯಕವಾಗಿವೆ. ರೈತರು ಕೃಷಿ ಇಲಾಖೆಯಿಂದ ಸಿಗುವಂಥ ಎಲ್ಲ ಸೌಲಭ್ಯಗಳನ್ನು ಸಕಾಲಕ್ಕೆ ಪಡೆದು, ಆರ್ಥಿಕ ಪ್ರಗತಿ ಸಾಧಿಸಬೇಕು ಎಂದು ಶಾಸಕ ಕೆ.ಎಸ್.ಬಸವಂತಪ್ಪ ಹೇಳಿದರು.ಮಾಯಕೊಂಡ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ತ್ಯಾವಣಗಿ ಗ್ರಾಮದಲ್ಲಿ ಸೋಮವಾರ ಕೃಷಿ ಇಲಾಖೆ ವತಿಯಿಂದ ಆಯೋಜಿಸಿದ್ದ ₹60 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ್ದ ರೈತ ಸಂಪರ್ಕ ಕೇಂದ್ರ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು.
ರೈತ ಸಂಪರ್ಕ ಕೇಂದ್ರವೆಂದರೆ ಕೃಷಿಕರನ್ನು ಮತ್ತು ಕೃಷಿ ಇಲಾಖೆಯನ್ನು ಸಂಪರ್ಕಿಸುವ ಕೊಂಡಿಯಾಗಿದೆ. ನಮ್ಮ ರೈತರು ತಾಲೂಕು ಅಥವಾ ಜಿಲ್ಲಾಮಟ್ಟದ ಕೃಷಿ ಇಲಾಖೆ ಕಚೇರಿಗಳಿಗೆ ಹೋಗದೇ, ತಮ್ಮ ಸ್ಥಳೀಯ ಕೃಷಿಗೆ ಸಂಬಂಧಪಟ್ಟ ಸಮಸ್ಯೆಗಳನ್ನು ರೈತ ಸಂಪರ್ಕ ಕೇಂದ್ರ ಸಂಪರ್ಕಿಸಿ, ಅಲ್ಲಿನ ಅಧಿಕಾರಿಗಳ ಬಳಿಯೇ ಎಲ್ಲ ಪರಿಹಾರ ಕಂಡುಕೊಳ್ಳಬಹುದು. ಈ ಸೌಲಭ್ಯ ಪ್ರತಿಯೊಬ್ಬ ರೈತರೂ ಸದುಪಯೋಗ ಮಾಡಿಕೊಳ್ಳಬೇಕೆಂದು ಸಲಹೆ ನೀಡಿದರು.ಮಳೆಗಾಲ ಸಂದರ್ಭದಲ್ಲಿ ರೈತರಿಗೆ ಬೇಕಾದ ಬಿತ್ತನೆಬೀಜ, ಗೊಬ್ಬರ, ಯಂತ್ರೋಪಕರಣಗಳು ಸೇರಿದಂತೆ ಕೃಷಿ ಚಟುವಟಿಕೆಗಳಿಗೆ ಬೇಕಾದ ಅಗತ್ಯ ಸೌಲಭ್ಯಗಳನ್ನು ಸಮರ್ಪಕವಾಗಿ ತಲುಪಿಸುವುದು ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.
ಈ ಸಂದರ್ಭ ಕೃಷಿ ಅಧಿಕಾರಿ ಅರುಣ್‌ಕುಮಾರ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಕರಿಬಸಪ್ಪ, ಸದಸ್ಯರಾದ ಪರಶುರಾಮ್, ಮಂಜುನಾಥ್, ಬಸವಾಪಟ್ಟಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ.ನಾಗಣ್ಣ, ಮಾಜಿ ಜಿಪಂ ಸದಸ್ಯ ಪಿ.ಸಿ.ಗೋವಿಂದಸ್ವಾಮಿ, ಮಾಜಿ ತಾಪಂ ಸದಸ್ಯ ಬಿ.ಎಚ್.ಹಾಲಪ್ಪ, ಮುಖಂಡರಾದ ಲೋಹಿತಣ್ಣ, ಸುರೇಶ್ ಪೈ, ಮಹಿಳಾ ಮುಖಂಡರಾದ ಶಶಿಕಲಾ ಮೂರ್ತಿ, ನಲ್ಕುದುರೆ ವಿ.ಜಿ.ಗೌಡ, ರೈತ ಮುಖಂಡ ರವಿ ಹಾಗೂ ಗ್ರಾಮಸ್ಥರು ಇದ್ದರು.ಬಸವಾಪಟ್ಟಣ:
ಬಸವಾಪಟ್ಟಣ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿದ್ದ ರೈತ ಸಂಪರ್ಕ ಕೇಂದ್ರವನ್ನು ಸಹ ಕ್ಷೇತ್ರ ಶಾಸಕ ಕೆ.ಎಸ್.ಬಸವಂತಪ್ಪ ಉದ್ಘಾಟಿಸಿದರು. ಜಂಟಿ ಕೃಷಿ ನಿರ್ದೇಶಕ ಶ್ರೀನಿವಾಸ್ ಚಿಂತಾಲ್, ಕೃಷಿ ಅಧಿಕಾರಿ ಅರುಣ್‌ಕುಮಾರ್, ಗ್ರಾಪಂ ಅಧ್ಯಕ್ಷರು, ಸದಸ್ಯರು, ಗ್ರಾಮದ ಮುಖಂಡರು ಇದ್ದರು.- - -
ಕೋಟ್ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರ ಅಭಿವೃದ್ಧಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಅವುಗಳನ್ನು ಸಮರ್ಪಕವಾಗಿ ಅಧಿಕಾರಿಗಳು ತಲುಪಿಸಬೇಕು. ಕ್ಷೇತ್ರದ ವ್ಯಾಪ್ತಿಯಲ್ಲಿ ರಸ್ತೆ ಅಭಿವೃದ್ಧಿ, ರೈತರ ಹಲವಾರು ಸಮಸ್ಯೆಗಳು ಇವೆ. ಅವುಗಳನ್ನು ಮುಂದಿನ ದಿನಗಳಲ್ಲಿ ಸರ್ಕಾರದಿಂದ ಅನುದಾನ ತರುವ ಮೂಲಕ ಕ್ಷೇತ್ರವನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ- ಕೆ.ಎಸ್. ಬಸವಂತಪ್ಪ, ಶಾಸಕ, ಮಾಯಕೊಂಡ ಕ್ಷೇತ್ರ
- - - -10ಕೆಡಿವಿಜಿ35, 36:ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯ ತ್ಯಾವಣಗಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿದ್ದ ರೈತ ಸಂಪರ್ಕ ಕೇಂದ್ರವನ್ನು ಶಾಸಕ ಕೆ.ಎಸ್.ಬಸವಂತಪ್ಪ ಉದ್ಘಾಟಿಸಿ ಮಾತನಾಡಿದರು.