ಉತ್ತಮ ಶಿಕ್ಷಣ ಪಡೆದು ಜಿಲ್ಲೆಗೆ ಕೀರ್ತಿ ತನ್ನಿ

| Published : Jul 20 2024, 12:51 AM IST

ಉತ್ತಮ ಶಿಕ್ಷಣ ಪಡೆದು ಜಿಲ್ಲೆಗೆ ಕೀರ್ತಿ ತನ್ನಿ
Share this Article
  • FB
  • TW
  • Linkdin
  • Email

ಸಾರಾಂಶ

ಪ್ರತಿಭಾ ಪುರಸ್ಕಾರ ಪಡೆದಂತಹ ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿ ಉನ್ನತ ಶಿಕ್ಷಣ ಪಡೆದು ಜಿಲ್ಲೆಗೆ ಹಾಗೂ ಪೋಷಕರಿಗೆ ಕೀರ್ತಿ ತರುವಂತಹ ಕೆಲಸವನ್ನು ಮಾಡಬೇಕು ಎಂದು ಚೂಡಾ ಅಧ್ಯಕ್ಷ ಮಹಮದ್ ಅಸ್ಗರ್ ಮುನ್ನಾ ಅವರು ತಿಳಿಸಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಪ್ರತಿಭಾ ಪುರಸ್ಕಾರ ಪಡೆದಂತಹ ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿ ಉನ್ನತ ಶಿಕ್ಷಣ ಪಡೆದು ಜಿಲ್ಲೆಗೆ ಹಾಗೂ ಪೋಷಕರಿಗೆ ಕೀರ್ತಿ ತರುವಂತಹ ಕೆಲಸವನ್ನು ಮಾಡಬೇಕು ಎಂದು ಚೂಡಾ ಅಧ್ಯಕ್ಷ ಮಹಮದ್ ಅಸ್ಗರ್ ಮುನ್ನಾ ಅವರು ತಿಳಿಸಿದರು.ನಗರದ ಮೌಲಾನ ಆಜಾದ್ ಕಮ್ಯೂನಿಟಿ ಹಾಲ್‌ನಲ್ಲಿ ರೆಹಬಾರ್ ಅಸೋಸಿಯೇಷನ್ ವತಿಯಿಂದ ಆಯೋಜಿಸಲಾಗಿದ್ದ ಎಸ್ಸೆಸ್ಸೆಲ್ಸಿ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು.ರೆಹಬಾರ್ ಅಸೋಸಿಯೇಷನ್ ೨೦೧೩ರಲ್ಲಿ ಪ್ರಾರಂಭವಾಗಿ ಅಲ್ಲಿಂದ ಇಲ್ಲಿಯವರೆಗೂ ಉತ್ತಮ ಸೇವೆಗಳನ್ನು ಮಾಡುತ್ತಿದ್ದು, ಎಸ್ಸೆಸ್ಸೆಲ್ಸಿಯಲ್ಲಿ ಹೆಚ್ಚಿನ ಅಂಕ ಪಡೆದ ಎಲ್ಲಾ ಸಮುದಾಯದ ವಿದ್ಯಾರ್ಥಿಗಳನ್ನು ಗುರುತಿಸಿ ಅಭಿನಂದಿಸುತ್ತಿರುವುದು ಸಂತೋಷದ ವಿಷಯ. ಇದರೊಂದಿಗೆ ಮಕ್ಕಳಿಗೆ ಕ್ರೀಡಾ ಚಟುವಟಿಕೆ, ಕರಾಟೆ, ಶಿಕ್ಷಣದ ಬಗ್ಗೆ ತರಬೇತಿ ನೀಡುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ ಎಂದು ಶ್ಲಾಘನೆ ವ್ಯಕ್ತಪಡಿಸಿದರು. ಡಿಎಚ್‌ಒ ಡಾ.ಚಿದಂಬರಂ ಮಾತನಾಡಿ, ಮಕ್ಕಳು ಉತ್ತಮ ಶಿಕ್ಷಣ ಪಡೆದು, ಉತ್ತಮ ಸ್ಥಾನ ಪಡೆಯುವ ಮೂಲಕ, ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡು, ಸಮಾಜಕ್ಕೆ ಮಾದರಿಯಾಗಿ ಉತ್ತಮ ಹೆಸರನ್ನು ಗಳಿಸುವಂತಾಗಬೇಕು ಎಂದು ಶುಭ ಹಾರೈಸಿದರು.ರಾಜ್ಯದಲ್ಲಿ ಡೆಂಘೀ ಪ್ರಕರಣಗಳು ಹೆಚ್ಚಾಗಿದ್ದು, ಸಾರ್ವಜನಿಕರು ತಮ್ಮ ಮನೆಯ ಸುತ್ತಮುತ್ತಲ ಪರಿಸರದ ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು. ಸೊಳ್ಳೆಗಳಿಂದ ಎಚ್ಚರಿಕೆ ವಹಿಸಬೇಕು. ಆರೋಗ್ಯದ ಕಡೆ ಗಮನಹರಿಸಬೇಕು. ಯಾರಿಗಾದರೂ ತಲೆನೋವು, ಜ್ವರ, ಮೈಕೈ ನೋವು, ಇನ್ನಿತರ ಸಮಸ್ಯೆಗಳು ಬಂದರೆ ತಕ್ಷಣ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರ ಸಲಹೆ ಸೂಚನೆಯೊಂದಿಗೆ ಔಷಧಿ ಪಡೆದುಕೊಳ್ಳಬೇಕು ಎಂದರು.ಈ ಸಂದರ್ಭದಲ್ಲಿನ ಮುಖ್ಯ ಅತಿಥಿ ಸಹಿಹಬ್ ಚೊತ್ತಾರ್, ಅನ್ಸರ್ ಖಾನ್, ಜಾವಿದ್ ಅಹಮ್ಮದ್, ಫಾರೂಖಾನ್ ಇನ್ನಿತರರಿದ್ದರು.