ಸಾವಯವ ಗೊಬ್ಬರ ಬಳಸಿ ಅಧಿಕ ಇಳುವರಿ ಪಡೆಯಿರಿ

| Published : Jan 12 2025, 01:15 AM IST

ಸಾರಾಂಶ

ದೇವನಹಳ್ಳಿ: ಇತ್ತೀಚಿನ ದಿನಗಳಲ್ಲಿ ರೈತರು ಬೆಳೆಗಳಿಗೆ ರಾಸಾಯನಿಕ ಗೊಬ್ಬರ ಬಳಸುವುದರಿಂದ ಅನೇಕ ರೋಗಗಳಿಗೆ ತುತ್ತಾಗುತ್ತಿದ್ದು, ಸಾವಯವ ಗೊಬ್ಬರ ಬಳಸಿ ಅಧಿಕ ಇಳುವರಿ ಪಡೆಯಬೇಕು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ.ಎಚ್‌.ಮುನಿಯಪ್ಪ ತಿಳಿಸಿದರು.

ದೇವನಹಳ್ಳಿ: ಇತ್ತೀಚಿನ ದಿನಗಳಲ್ಲಿ ರೈತರು ಬೆಳೆಗಳಿಗೆ ರಾಸಾಯನಿಕ ಗೊಬ್ಬರ ಬಳಸುವುದರಿಂದ ಅನೇಕ ರೋಗಗಳಿಗೆ ತುತ್ತಾಗುತ್ತಿದ್ದು, ಸಾವಯವ ಗೊಬ್ಬರ ಬಳಸಿ ಅಧಿಕ ಇಳುವರಿ ಪಡೆಯಬೇಕು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ.ಎಚ್‌.ಮುನಿಯಪ್ಪ ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಪಂ ಹಾಗೂ ಕೃಷಿ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಸಾವಯವ ಮತ್ತು ಸಿರಿಧಾನ್ಯ ಮೇಳ -2025ದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರೈತರಿಗೆ ನಾವು ಕೊಡುವಂತಹ ಕಾಂಪೋಸ್ಟ್‌ ಗೊಬ್ಬರಗಳಾಗಲಿ ಅಥವಾ ಸಾವಯವ ಗೊಬ್ಬರ ಬಳಸಿ ಬೆಳೆ ಬೆಳೆಯುವ ಅರಿವು ಮೂಡಿಸಬೇಕು. 50 ವರ್ಷಗಳ ಹಿಂದೆ ನಾವು ಕೇವಲ ಸಾವಯವ ಗೊಬ್ಬರ ಮತ್ತು ಹಸಿರೆಲೆ ಗೊಬ್ಬರ ಬಳಸುತ್ತಿದ್ದೆವು. ಆಗ ಯಾವುದೇ ರೋಗ ರುಜಿನಗಳಿಲ್ಲದೆ ಜನರು ಆರೋಗ್ಯವಾಗಿದ್ದರು. ರಾಸಾಯನಿಕ ಗೊಬ್ಬರ ಬಳಸಿದ ಮೇಲೆ ಹುಟ್ಟುವ ಮಗು ಅಲ್ಲದೆ ಎಲ್ಲ ವಯಸ್ಸಿನವರಿಗೂ ಬಿಪಿ ಮತ್ತು ಸಕ್ಕರೆ ಕಾಯಿಲೆ ಹೆಚ್ಚಿದೆ. ನಮ್ಮ ಮುಂದಿನ ಪೀಳಿಗೆ ಆರೋಗ್ಯವಂತರಾಗಿ ಬೆಳೆಯಲು ಸಾವಯವ ಗೊಬ್ಬರ ಬಳಸಿ ಸಿರಿಧಾನ್ಯ ಬೆಳೆಯಬೇಕು ಎಂದರು.

ಇದೇ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಗಳ ಜಿಲ್ಲಾ ಉಪಾಧ್ಯಕ್ಷ ಮುದಗುರ್ಕಿ ನಾರಾಯಣಸ್ವಾಮಿ, ಯಾವುದೇ ಬೆಳೆ ಬೆಳೆಯಲು ಅಧಿಕಾರಿಗಳು ರೈತರಲ್ಲಿ ಅರಿವು ಮೂಡಿಸಬೇಕು. ಸರ್ಕಾರ ಹಾಲಿಗೆ ಪ್ರೋತ್ಸಾಹ ಧನ ಬಿಡುಗಡೆ ಮಾಡಬೇಕು ಎಂದರು.

ಇದೇ ಸಂದರ್ಭದಲ್ಲಿ ಐದನೇ ಹಣಕಾಸು ಆಯೋಗ ಅಧ್ಯಕ್ಷ ಸಿ.ನಾರಾಯಣಸ್ವಾಮಿ ಮತ್ತು ಗ್ಯಾರಂಟಿ ಯೋಜನೆಗಳ ಜಿಲ್ಲಾಧ್ಯಕ್ಷ ಬಿ.ರಾಜಣ್ಣ, ಗ್ಯಾರಂಟಿ ಯೋಜನೆಗಳ ಸಮಿತಿ ತಾಲೂಕು ಅಧ್ಯಕ್ಷ ಸಿ.ಜಗನ್ನಾಥ್‌, ಬಯಪ ಸದಸ್ಯರಾದ ಪ್ರಸನ್ನಕುಮಾರ್‌, ರಾಮಚಂದ್ರಪ್ಪ, ವಿ.ಮಂಜುನಾಥ್‌, ಅನಂತಕುಮಾರಿ ಚಿನ್ನಪ್ಪ, ತಹಸೀಲ್ದಾರ್‌ ಎಚ್‌.ಬಾಲಕೃಷ್ಣ, ತಾಪಂ ಇಒ ಶ್ರೀನಾಥಗೌಡ ಉಪಸ್ಥಿತರಿದ್ದರು.

(ಫೋಟೋ ಕ್ಯಾಫ್ಷನ್‌)

ದೇವನಹಳ್ಳಿಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಪಂ ಹಾಗೂ ಕೃಷಿ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಸಾವಯವ ಮತ್ತು ಸಿರಿಧಾನ್ಯ ಮೇಳ -2025ದಲ್ಲಿ ಸಚಿವ ಕೆ.ಎಚ್‌.ಮುನಿಯಪ್ಪ ಇತರರು ಪಾಲ್ಗೊಂಡಿದ್ದರು.