ದಾಬಸ್‍ಪೇಟೆ: ಎಚ್‌ಪಿವಿ ಲಸಿಕೆ ಹ್ಯೂಮನ್ ಪ್ಯಾಪಿಲೋಮ ವೈರಸ್ ಸೋಂಕುಗಳಿಂದ ಉಂಟಾಗುವ ಗರ್ಭಕಂಠ ಹಾಗೂ ಇತರ ಕೆಲ ಕ್ಯಾನ್ಸರ್‌ಗಳಿಂದ ರಕ್ಷಿಸುತ್ತದೆ ಎಂದು ವೈದ್ಯಾಧಿಕಾರಿ ಡಾ.ಶುಭ ತಿಳಿಸಿದರು
ದಾಬಸ್‍ಪೇಟೆ: ಎಚ್‌ಪಿವಿ ಲಸಿಕೆ ಹ್ಯೂಮನ್ ಪ್ಯಾಪಿಲೋಮ ವೈರಸ್ ಸೋಂಕುಗಳಿಂದ ಉಂಟಾಗುವ ಗರ್ಭಕಂಠ ಹಾಗೂ ಇತರ ಕೆಲ ಕ್ಯಾನ್ಸರ್‌ಗಳಿಂದ ರಕ್ಷಿಸುತ್ತದೆ ಎಂದು ವೈದ್ಯಾಧಿಕಾರಿ ಡಾ.ಶುಭ ತಿಳಿಸಿದರು.
ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಿದ್ದ 14 ವರ್ಷದ ಹೆಣ್ಣು ಮಕ್ಕಳಿಗೆ ಗರ್ಭಕಂಠ ಕ್ಯಾನ್ಸರ್ ನಿರೋಧಕ ಎಚ್‌ಪಿವಿ ಲಸಿಕಾ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಪ್ರಸ್ತುತ ಈ ಲಸಿಕೆಯನ್ನು 14 ವರ್ಷ ತುಂಬಿದ ಹಾಗೂ 15 ವರ್ಷ ವಯಸ್ಸಿನ ಒಳಗಿನ ಹೆಣ್ಣು ಮಕ್ಕಳಿಗೆ ಭಾರತ ಸರ್ಕಾರದ ಮಾರ್ಗಸೂಚಿ ಅನುಸಾರ ನೀಡಲಾಗುವುದು. ಲಸಿಕೆಯನ್ನು ರಾಷ್ಟ್ರೀಯ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದ ಮಾರ್ಗಸೂಚಿ ಅನುಸಾರ ಆಯೋಜನೆ ಮಾಡಲಾಗುತ್ತಿದೆ. ಎಲ್ಲಾ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳು ಮತ್ತು ತಾಲೂಕು ಸಾರ್ವಜನಿಕ ಆಸ್ಪತ್ರೆಗಳಲ್ಲಿ ತಜ್ಞ ವೈದ್ಯರಿಂದ ಲಸಿಕೆ ನೀಡಲಾಗುವುದು. ಲಸಿಕೆ ಪಡೆದ ಮ್ಕಕಳಿಗೆ ಯೂ-ವಿನ್ ತಂತ್ರಾಂಶದಲ್ಲಿ ನೋಂದಣಿ ಮಾಡಿ ಪ್ರಮಾಣ ಪತ್ರ ನೀಡಲಾಗತ್ತದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಫಲಾನುಭವಿಗಳು ಆಗತ್ಯ ಸೂಕ್ತ ಗುರುತಿನ ಚೀಟಿಯೊಂದಿಗೆ ಮೊಬೈಲ್ ನಂ. ಹಾಗೂ ಆಧಾರ್ ಕಾರ್ಡ್ ಕಡ್ಡಾಯವಾಗಿರುತ್ತದೆ ಎಂದರು.ಜಿಲ್ಲಾ ಸ್ತ್ರೀಶಕ್ತಿ ಒಕ್ಕೂಟದ ಅಧ್ಯಕ್ಷೆ ವೇದಾವತಿ ಮಾತನಾಡಿ, ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು ಈ ಲಸಿಕೆ ಸುರಕ್ಷಿತ ಮತ್ತು ಪರಿಣಾಮಕಾರಿಯಾಗಿದೆ. ಎಲ್ಲಾ ಪೋಷಕರು ಮಕ್ಕಳಿಗೆ ಈ ಲಸಿಕೆಯನ್ನು ಕಡ್ಡಾಯವಾಗಿ ಹಾಕಿಸಿ ನಿಮ್ಮ ಮಕ್ಕಳ ಆರೋಗ್ಯವನ್ನು ರಕ್ಷಿಸಿಕೊಳ್ಳುವಂತೆ ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಡಾ.ರಮೇಶ್, ಸಿಬ್ಬಂದಿ ಜಯಲಕ್ಷ್ಮೀ, ಜಯಲಕ್ಷ್ಮಮ್ಮ, ಆಶಾ ಕಾರ್ಯಕರ್ತೆಯರು, ಮಹಿಳೆಯರು ಉಪಸ್ಥಿತರಿದ್ದರು.ಪೋಟೋ 2 : ದಾಬಸ್‍ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಿದ್ದ 14 ವರ್ಷದ ಹೆಣ್ಣು ಮಕ್ಕಳಿಗೆ ಗರ್ಭಕಂಠ ಕ್ಯಾನ್ಸರ್ ನಿರೋಧಕ ಲಸಿಕಾ ಅಭಿಯಾನ ಕಾರ್ಯಕ್ರಮವನ್ನು ವೈದ್ಯಾಧಿಕಾರಿ ಡಾ.ಶುಭ ಉದ್ಘಾಟಿಸಿದರು.