Get involved in sports along with education

ಸುಧೀಂದ್ರ ಕಾಲೇಜಿನಲ್ಲಿ ಅಂತರ ಕಾಲೇಜುಗಳ ಚೆಸ್ ಪಂದ್ಯಾವಳಿ ಉದ್ಘಾಟಿಸಿದ ಭಟ್ಕಳ ಎಜ್ಯುಕೇಶನ್ ಟ್ರಸ್ಟ್‌ನ ಟ್ರಸ್ಟಿ

ಕನ್ನಡಪ್ರಭ ವಾರ್ತೆ ಭಟ್ಕಳ

ತಾಲೂಕಿನ ಶ್ರೀ ಗುರು ಸುಧೀಂದ್ರ ಪದವಿ ಕಾಲೇಜಿನಲ್ಲಿ ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದ ಸಂಲಗ್ನ ಕಾಲೇಜುಗಳ ಅಂತರ ಮಹಾವಿದ್ಯಾಲಯಗಳ ಏಕ ವಲಯ ಮಟ್ಟದ ಪುರುಷ ಹಾಗೂ ಮಹಿಳೆಯರ ಚೆಸ್ ಪಂದ್ಯಾವಳಿ ಹಾಗೂ ಆಯ್ಕೆ ಪ್ರಕ್ರಿಯೆ ನಡೆಯಿತು.

ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿದ ಭಟ್ಕಳ ಎಜ್ಯುಕೇಶನ್ ಟ್ರಸ್ಟ್‌ನ ಟ್ರಸ್ಟಿ ರಮೇಶ ಖಾರ್ವಿ, ಶಿಕ್ಷಣದ ಜತೆಯಲ್ಲಿ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.

ಚದುರಂಗ ಸ್ಪರ್ಧೆಯ ನಿರ್ಣಾಯಕರಾದ ಪ್ರಸನ್ನ ರಾವ್, ಉಪನಿರ್ಣಾಯಕ ಧನರಾಜ್ ಖಾರ್ವಿ ಹಾಗೂ ರಾಷ್ಟ್ರೀಯ ಚೆಸ್ ತರಬೇತುದಾರ ಗುರುರಾಜ್ ಶೆಟ್ಟಿ ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಶುಭ ಕೋರಿದರು. ಪ್ರಾಂಶುಪಾಲ ಶ್ರೀನಾಥ್ ಪೈ ಸ್ವಾಗತಿಸಿದರು.

ಪುರುಷರ ವಿಭಾಗದಲ್ಲಿ ಸಮರ್ಥ ಕಾಲೇಜ್, ಹುಬ್ಬಳ್ಳಿ, ಪಿ.ಸಿ. ಜಾಬಿನ್ ಕಾಲೇಜ್, ಹುಬ್ಬಳ್ಳಿ, ಜೆ.ಜಿ. ಕಾಮರ್ಸ್ ಕಾಲೇಜ್, ಹುಬ್ಬಳ್ಳಿ, ಕರ್ನಾಟಕ ಆರ್ಟ್ಸ್ ಕಾಲೇಜ್, ಧಾರವಾಡ, ಗುರು ಸುಧೀಂದ್ರ ಕಾಲೇಜ್, ಭಟ್ಕಳ ಟಾಪ್ ಐದು ಸ್ಥಾನ ಪಡೆಯಿತು. ಮಹಿಳೆಯರ ವಿಭಾಗದಲ್ಲಿ ಎಂ.ಎ. ಆರ್ಟ್ಸ್ ಆ್ಯಂಡ್ ಸೈನ್ಸ್ ಕಾಲೇಜ್, ಸಿರ್ಸಿ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಹೊನ್ನಾವರ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಅಂಕೋಲಾ, ಶ್ರೀ ಗುರು ಸುಧೀಂಧ್ರ ಕಾಲೇಜ್, ಭಟ್ಕಳ, ಪಿಸಿ ಜಾಬಿನ್ ಸೈನ್ಸ್ ಕಾಲೇಜ್, ಹುಬ್ಬಳ್ಳಿ ಟಾಪ್ ಐದು ಸ್ಥಾನ ಪಡೆಯಿತು.

ಈ ಸಂದರ್ಭದಲ್ಲಿ ಭಟ್ಕಳ ಎಜ್ಯುಕೇಶನ್ ಟ್ರಸ್ಟಿನ ಅಧ್ಯಕ್ಷ ಡಾ. ಸುರೇಶ ನಾಯಕ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕ ವಿನಾಯಕ ನಾಯ್ಕ ಉಪಸ್ಥಿತರಿದ್ದರು. ಸಹನಾ ಮೊಗೇರ, ಮಮತಾ ಶಾನಭಾಗ್ ನಿರೂಪಿಸಿದರು.