ಸಾರಾಂಶ
ತಾಲೂಕಿನ ವೀರಶೈವ ಲಿಂಗಾಯತ ಸಮುದಾಯದವರು ಅಖಿಲ ಭಾರತ ವೀರಶೈವ ಮಹಾಸಭಾ ಸಂಘಟನೆಯ ಸದಸ್ಯತ್ವ ಪಡೆಯಲು ಮುಂದಾಗಬೇಕು
ಸದಸ್ಯತ್ವ ಅಭಿಯಾನ ಕಾರ್ಯಕ್ರಮಕ್ಕೆ ರಾಜ್ಯ ಉಪಾಧ್ಯಕ್ಷ ಚಾಲನೆಕನ್ನಡಪ್ರಭ ವಾರ್ತೆ ಕುಷ್ಟಗಿ
ತಾಲೂಕಿನ ವೀರಶೈವ ಲಿಂಗಾಯತ ಸಮುದಾಯದವರು ಅಖಿಲ ಭಾರತ ವೀರಶೈವ ಮಹಾಸಭಾ ಸಂಘಟನೆಯ ಸದಸ್ಯತ್ವ ಪಡೆಯಲು ಮುಂದಾಗಬೇಕು ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಜ್ಯ ಉಪಾಧ್ಯಕ್ಷ ಅಮರೇಗೌಡ ಬಯ್ಯಾಪುರ ಹೇಳಿದರು.ಪಟ್ಟಣದ ಬಸವ ಭವನದಲ್ಲಿ ನಡೆದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಸದಸ್ಯತ್ವ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ನಮ್ಮ ಕುಷ್ಟಗಿ ತಾಲೂಕಿನಲ್ಲಿ ವೀರಶೈವ ಸಮಾಜದವರು ಬಹಳಷ್ಟು ಜನರು ಇದ್ದು, ಪ್ರತಿಯೊಬ್ಬರು ಸಂಘಟನೆಯ ಸದಸ್ಯತ್ವ ಪಡೆದುಕೊಂಡು ಸದುಪಯೋಗ ಪಡೆದುಕೊಳ್ಳಬೇಕು ಎಂದರು
ಸಮಾಜವು ಸದಸ್ಯತ್ವ ಪಡೆಯುವ ಮೂಲಕ ಸಂಘಟನೆಯಾಗುವುದರೊಂದಿಗೆ ಶೈಕ್ಷಣಿಕ, ರಾಜಕೀಯ, ಆರ್ಥಿಕವಾಗಿ ಮುಂದೆ ಬರಬೇಕು. ಸಂಘಟನೆಯ ಪ್ರತಿಯೊಬ್ಬ ಪದಾಧಿಕಾರಿಗಳು ತಾಲೂಕಿನಾದ್ಯಾಂತ ಸಂಚಾರ ಮಾಡಿ ವೀರಶೈವ ಸಮಾಜದವರನ್ನು ಗುರುತಿಸುವ ಮೂಲಕ ಸದಸ್ಯತ್ವ ಮಾಡಿಸಲು ಮುಂದಾಗಬೇಕು ಎಂದರು.ತಾಲೂಕಾಧ್ಯಕ್ಷ ಉಮಾಪತಿ ಅಕ್ಕಿ ಮಾತನಾಡಿ, ತಾಲೂಕಿನಾದ್ಯಂತ ಸುಮಾರು 10000 ಸದಸ್ಯತ್ವವನ್ನ ಮಾಡಿಸುವ ಗುರಿ ಹೊಂದಲಾಗಿದೆ ಎಂದರು.
ಅಖಿಲ ಭಾರತ ವೀರಶೈವ ಮಹಾಸಭಾದ ಗೌರವಾಧ್ಯಕ್ಷ ಕರಿಬಸವಶಿವಾಚಾರ್ಯರು ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದರು. ಈ ಸಂದರ್ಭ ಕುಷ್ಟಗಿ ತಾಲೂಕಿನ ವೀರಶೈವ ಲಿಂಗಾಯತ ಸಮಾಜದ ಒಳ ಪಂಗಡಗಳ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಹಾಗೂ ಕಾರ್ಯದರ್ಶಿಗಳು ಹಾಗೂ ಕುಷ್ಟಗಿ ತಾಲೂಕಿನ ಮಹಾಸಭಾದ ಪದಾಧಿಕಾರಿಗಳು ಕಾರ್ಯಕಾರಿಣಿ ಸದಸ್ಯರು ಹಾಗೂ ಕುಷ್ಟಗಿ ತಾಲೂಕಿನ ಜಿಲ್ಲಾ ಕಾರ್ಯಕಾರಿಣಿ ಸದಸ್ಯರು ಭಾಗವಹಿಸಿದ್ದರು.