ಸಾರಾಂಶ
ಡೆಂಘೀ ರೋಗ ಲಕ್ಷಣಗಳು ಕಂಡು ಬಂದಲ್ಲಿ ತಕ್ಷಣ ಸಮೀಪದ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತ ಪರೀಕ್ಷೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯಬೇಕು
ಕವಿತಾಳ: ಸಾರ್ವಜನಿಕರು ಡೆಂಘೀ ರೋಗ ಲಕ್ಷಣಗಳು ಕಂಡು ಬಂದಲ್ಲಿ ತಕ್ಷಣ ಸಮೀಪದ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತ ಪರೀಕ್ಷೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯಬೇಕು ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಧಿಕಾರಿ ಬಾಲಪ್ಪ ನಾಯಕ ಸಲಹೆ ನೀಡಿದರು.
ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಮುದಾಯ ಆರೋಗ್ಯ ಕೇಂದ್ರ ಹಾಗೂ ಪಪಂಯಿಂದ ಪಟ್ಟಣದಲ್ಲಿ ಡೆಂಘೀ ಮತ್ತು ಮಲೇರಿಯಾ ನಿಯಂತ್ರಣ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಈ ಸಂದರ್ಭದಲ್ಲಿ ಸಮುದಾಯ ಆರೋಗ್ಯ ಕೇಂದ್ರದ ಡಾ. ಪ್ರವೀಣ್ ಕುಮಾರ ಮತ್ತು ಎಎಸ್‌ಐ ರಮೇಶ ಕುಮಾರ ಮಾತನಾಡಿದರು.
ಪಂಚಾಯಿತಿ ಸಿಬ್ಬಂದಿ ರಾಘವೇಂದ್ರ ಮುತಾಲಿಕ್, ರಾಘವೇಂದ್ರ, ಪ್ರಶಾಂತ ಕುಮಾರ, ಪ್ರಾಥಮಿಕ ಆರೋಗ್ಯ ನಿರಕ್ಷಣಾಧಿಕಾರಿ ಪ್ರದೀಪ ಕುಮಾರ, ಪೊಲೀಸ್ ಸಿಬ್ಬಂದಿ ಮಲ್ಲಿಕಾರ್ಜುನ, ಪ್ರಾಥಮಿಕ ಆರೋಗ್ಯ ಸುರಕ್ಷ ಅಧಿಕಾರಿ ಅಂಜಿನಮ್ಮ, ಸುಮಿತ್ರ, ಪ. ಪಂ. ಮಾಜಿ ಸದಸ್ಯ ಮೌನೇಶ ಪೂಜಾರಿ, ಅಲ್ಲಮ ಪ್ರಭು, ಯಾಕೂಬ್, ವೆಂಕಟೇಶ, ರಾಮಲಿಂಗಪ್ಪ ಮತ್ತು ಆಶಾ ಕಾರ್ಯಕರ್ತರು ಹಾಗೂ ಅಂಗನವಾಡಿ ಕಾರ್ಯಕರ್ತರು ಉಪಸ್ಥಿತರಿದ್ದರು. ಆರೋಗ್ಯ ಇಲಾಖೆ, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಇಲ್ಲಿನ ಪ್ರಮುಖ ರಸ್ತೆಗಳಲ್ಲಿ ಜಾಗ್ರತಿ ಜಾಥಾ ನಡೆಸಿದರು.