ಸಾರಾಂಶ
ದಿ. ಡಿ.ದೇವರಾಜ ಅರಸು ಅವರ 109ನೇ ಜನ್ಮದಿನಾರಣೆಯನ್ನು ಆ 20ರಂದು ಆಚರಿಸಲಿದ್ದು, ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಯೋಜಿಸಲು ಸಂಬಂಧಿಸಿದ ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಆರ್.ಚಂದ್ರಯ್ಯ ಸೂಚಿಸಿದರು. ರಾಮನಗರದಲ್ಲಿ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದರು.
- ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಸೂಚನೆ
ರಾಮನಗರ: ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ದಿ. ಡಿ.ದೇವರಾಜ ಅರಸು ಅವರ 109ನೇ ಜನ್ಮದಿನಾರಣೆಯನ್ನು ಆ 20ರಂದು ಆಚರಿಸಲಿದ್ದು, ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಯೋಜಿಸಲು ಸಂಬಂಧಿಸಿದ ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಆರ್.ಚಂದ್ರಯ್ಯ ಸೂಚಿಸಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಡಿ.ದೇವರಾಜ ಅರಸು ಅವರ ಜನ್ಮದಿನಾಚರಣೆ ಕಾರ್ಯಕ್ರಮದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಡಿ.ದೇವರಾಜ ಅರಸು ಅವರ ಜನ್ಮದಿನಾಚರಣೆ ಪ್ರಯುಕ್ತ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ವೇದಿಕೆ ಕಾರ್ಯಕ್ರಮ ಆಯೋಜಿಸಬೇಕು. ಅಂದು ಬೆಳಿಗ್ಗೆ ಜೂನಿಯರ್ ಕಾಲೇಜು ಮೈದಾನದಿಂದ ಡಾ.ಬಿ.ಆರ್.ಅಂಬೇಡ್ಕರ್ ಭವನದವರೆಗೆ ಡಿ.ದೇವರಾಜ ಅರಸು ಭಾವಚಿತ್ರದೊಂದಿಗೆ ಬೆಳ್ಳಿರಥದಲ್ಲಿ ವಿವಿಧ ಕಲಾ ತಂಡಗಳೊಂದಿಗೆ ಮೆರವಣಿಗೆ ಆಯೋಜಿಸಬೇಕು ಎಂದು ತಿಳಿಸಿದರು.
ವೇದಿಕೆ ಸಿದ್ಧತೆ, ಶಾಮಿಯಾನ, ಆಸನಗಳ ವ್ಯವಸ್ಥೆ, ಕರಪತ್ರಗಳ ಮುದ್ರಣ, ಉಪನ್ಯಾಸ, ಆಹ್ವಾನ ಪತ್ರಿಕೆ ಮುದ್ರಣ ಹಾಗೂ ವಿತರಣೆ ಸೇರಿದಂತೆ ಅಗತ್ಯ ಸಿದ್ಧತೆಗಳು ಅಚ್ಚುಕಟ್ಟಾಗಿ ಆಗಬೇಕು. ವಿವಿಧ ಇಲಾಖೆಗಳಿಗೆ ವಹಿಸಿಕೊಟ್ಟ ವಿವಿಧ ಕಾರ್ಯಕ್ರಮಗಳ ಜವಾಬ್ದಾರಿಗಳನ್ನು ವ್ಯವಸ್ಥಿತವಾಗಿ ನಿರ್ವಹಿಸಬೇಕು, ಒಟ್ಟಾರೆ ಕಾರ್ಯಕ್ರಮ ಯಾವುದೇ ಲೋಪಗಳಿಗೆ ಆಸ್ಪದವಾಗದಂತೆ ಯಶಸ್ವಿಯಾಗಿ ನೆರವೇರಿಸಬೇಕು ಎಂದರು.ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಬಿಲಾಲ್, ಜಿಲ್ಲಾ ಮಟ್ಟದ ಅಧಿಕಾರಿಗಳು, ಹಿಂದುಳಿದ ವರ್ಗಗಳ ಮುಖಂಡರುಗಳಾದ ಜಿ.ನಾಗರಾಜು (ರೈಡ್), ಉಮೇಶ್ ಚಾರ್, ಆರ್.ರಂಗಪ್ಪ, ಸೀತಾರಾಮ್ ಮಾಗಡಿ, ಬಿ.ರಂಗಸ್ವಾಮಿ, ಮಾರಣ್ಣ ಮಾಗಡಿ, ಚಂದ್ರಶೇಖರ್, ರಂಗನಾಥ ಇತರರು ಉಪಸ್ಥಿತರಿದ್ದರು.