ಸಾರಾಂಶ
ಚಿತ್ರದುರ್ಗ: ಮುಂಬರುವ ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳ ಗೆಲ್ಲಿಸುವ ಸಂಬಂಧ ತಯಾರಿ ನಡೆಸಬೇಕು ಎಂದು ಮಾಜಿ ಶಾಸಕ ಜಿ.ಎಚ್. ತಿಪ್ಪಾರೆಡ್ಡಿ ಹೇಳಿದರು.
ಚಿತ್ರದುರ್ಗ: ಮುಂಬರುವ ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳ ಗೆಲ್ಲಿಸುವ ಸಂಬಂಧ ತಯಾರಿ ನಡೆಸಬೇಕು ಎಂದು ಮಾಜಿ ಶಾಸಕ ಜಿ.ಎಚ್. ತಿಪ್ಪಾರೆಡ್ಡಿ ಹೇಳಿದರು.
ಚಿತ್ರದುರ್ಗ ನಗರದ ಬಿಜೆಪಿ ಕಚೇರಿಯಲ್ಲಿ ಭಾನುವಾರ ಬಿಜೆಪಿ ಸದಸ್ಯತ್ವ ಅಭಿಯಾನದ ಅಂಗವಾಗಿ ನಡೆದ ಸಕ್ರಿಯ ಸದಸ್ಯರ ಅಭಿಯಾನದಲ್ಲಿ ಅರ್ಜಿ ತುಂಬುವುದರ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಭಾರತೀಯ ಜನತಾ ಪಾರ್ಟಿ ದೇಶದಲ್ಲಿ 11 ಕೋಟಿ, ಕರ್ನಾಟಕ ರಾಜ್ಯದಲ್ಲಿ 60 ಲಕ್ಷ ಸದಸ್ಯರನ್ನು ಹೊಂದಿದೆ. ಸದಸ್ಯತ್ವ ಮಾಡಲು ಇನ್ನು ಮೂರು ದಿನ ಕಾಲವಾಕಾಶ ಇರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷಕ್ಕೆ ಸದಸ್ಯರನ್ನಾಗಿ ಮಾಡುವಂತೆ ತಿಳಿಸಿದರು. ಚಿತ್ರದುರ್ಗ ನಗರದ ವಿಧಾನಸಭಾ ಕ್ಷೇತ್ರದ ಪ್ರತಿಯೊಂದು ಬೂತ್‌ನಲ್ಲಿಯೂ ಮೂರು ಜನ ಸಕ್ರಿಯ ಕಾರ್ಯಕರ್ತರು ಇರಬೇಕಿದೆ. ಯಾವ ಕಾರ್ಯಕರ್ತ ತನ್ನ ಬೂತ್‌ನಲ್ಲಿ 50 ಜನರನ್ನು ಪಕ್ಷದ ಸದಸ್ಯರನ್ನಾಗಿ ಮಾಡುತ್ತಾರೋ ಅಂತಹವರು ಪಕ್ಷದಲ್ಲಿ ಸಕ್ರಿಯ ಕಾರ್ಯಕರ್ತರಾಗುತ್ತಾರೆ. ಮುಂದಿನ ದಿನದಲ್ಲಿ ಪಕ್ಷದ ವಿವಿಧ ರೀತಿಯ ಹುದ್ದೆಗಳನ್ನು ಅಲಂಕರಿಸಲು ಇದು ಸಹಾಯವಾಗುತ್ತದೆ ಎಂದರು. ದೇಶದಲ್ಲಿ ಅತಿ ಹೆಚ್ಚು ಸದಸ್ಯರನ್ನು ಹೊಂದಿರುವ ಪಕ್ಷ ನಮ್ಮದಾಗಬೇಕಿದೆ. ಇದಕ್ಕಾಗಿ ಕಾರ್ಯಕರ್ತರು ಹೆಚ್ಚಿನ ಶ್ರಮ ಹಾಕುವುದರ ಮೂಲಕ ಸದಸ್ಯರನ್ನು ಮಾಡಬೇಕಿದೆ. ಇದು ಮುಂದಿನ ದಿನದಲ್ಲಿ ಬರುವ ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆಗೆ ಅನುಕೂಲವಾಗಲಿದೆ ಎಂದು ಹೇಳಿದರು.ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂಪತ್ ಕುಮಾರ್, ನಗರಾಧ್ಯಕ್ಷ ನವೀನ್ ಚಾಲುಕ್ಯ, ಗ್ರಾಮಾಂತರ ಅಧ್ಯಕ್ಷ ಕಲ್ಲೇಶಯ್ಯ, ವಕ್ತಾರ ನಾಗರಾಜ್ ಬೇದ್ರೇ, ಯುವ ಮೋರ್ಚಾದ ಅಧ್ಯಕ್ಷ ರಾಮು, ಬಸಮ್ಮ, ಶಾಂತಮ್ಮ, ಕಿರಣ, ನಾಗರಾಜ್ ಸೇರಿದಂತೆ ಇತರರು ಭಾಗವಹಿಸಿದ್ದರು.