ಸಾರಾಂಶ
ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸೂಚನೆ
ಕನ್ನಡಪ್ರಭ ವಾರ್ತೆ ಕೊಪ್ಪಳ
ಜಿಲ್ಲಾಡಳಿತ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಜಿಲ್ಲಾ ಕೇಂದ್ರದಲ್ಲಿ ಅ. 23ರಂದು ಆಚರಿಸಲಾಗುವ ಕಿತ್ತೂರು ರಾಣಿ ಚೆನ್ನಮ್ಮ ಜಯಂತ್ಯುತ್ಸವ ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಹೇಳಿದರು.ಜಿಲ್ಲಾಡಳಿತ ಭವನದ ಕೆಸ್ವಾನ್ ವಿಡಿಯೋ ಕಾನ್ಫರೆನ್ಸ್ ಹಾಲ್ ನಲ್ಲಿ ನಡೆದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲಾ ಕೇಂದ್ರದಲ್ಲಿ ಅ. 23ರಂದು ಜಯಂತಿ ಕಾರ್ಯಕ್ರಮ ಆಚರಣೆಯ ಹಿನ್ನೆಲೆಯಲ್ಲಿ ಶಿಷ್ಠಾಚಾರದಂತೆ ಆಮಂತ್ರಣ ಪತ್ರಿಕೆ ಮುದ್ರಿಸಿ ಎಲ್ಲ ಗಣ್ಯರಿಗೆ ಆಹ್ವಾನ ನೀಡಬೇಕು. ಕೆಲಸ ಹಂಚಿಕೆ ಮಾಡಿದಂತೆ ಆಯಾ ಇಲಾಖೆಗಳ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಸಿದ್ದತೆ ಮಾಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.ನಗರದ ಪ್ರಮುಖ ವೃತ್ತಗಳಲ್ಲಿ ಅಂದು ನಗರಸಭೆಯಿಂದ ದೀಪಾಲಂಕಾರವಾಗಬೇಕು. ಮೆರವಣಿಗೆ ಸಾಗುವ ಮಾರ್ಗದಲ್ಲಿ ಶುಚಿತ್ವ ಕಾರ್ಯವಾಗಬೇಕು. ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಸ್ವಚ್ಛತೆ, ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಎಂದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕೊಟ್ರೇಶ್ ಮರಬನಹಳ್ಳಿ ಮಾತನಾಡಿ, ಅ. 23ರಂದು ಬೆಳಗ್ಗೆ 9 ಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ಅವರ ಭಾವಚಿತ್ರದ ಮೆರವಣಿಗೆಯು ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಿಂದ ಪ್ರಾರಂಭವಾಗಿ ಅಂಬೇಡ್ಕರ್ ಸರ್ಕಲ್, ಶಾರದಾ ಟಾಕೀಸ್, ಗಡಿಯಾರ ಕಂಬ ಮಾರ್ಗವಾಗಿ ಸಾಹಿತ್ಯ ಭವನದವರೆಗೆ ನಡೆಯಲಿದೆ. ಬೆಳಗ್ಗೆ 11ಕ್ಕೆ ಸಾಹಿತ್ಯ ಭವನದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ ಎಂದು ಮಾಹಿತಿ ನೀಡಿದರು.ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಅಧೀಕ್ಷಕಿ ನಾಗವ್ವ ಎಚ್., ತಾಲೂಕು ಅಭಿವೃದ್ಧಿ ಅಧಿಕಾರಿ ಸುರೇಶ ಬಿ.ಕೆ., ಜಿಲ್ಲಾ ಆಯುಷ್ ಇಲಾಖೆಯ ಸಹಾಯಕ ಆಡಳಿತ ಅಧಿಕಾರಿ ಸೀತಾ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧಿಕಾರಿ ಸತ್ಯನಾರಾಯಣ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಡಿ. ನಾಗರಾಜ, ರೇಷ್ಮೆ ಇಲಾಖೆಯ ನಿರ್ದೇಶಕ ಅಕ್ಕಮಹಾದೇವಿ ಬಡಿಗೇರ, ಪ್ರಮುಖರಾದ ಎಂ. ರಮೇಶ್, ಸುಧಾಕರ್ ಮಾನೆ, ಮಂಜುನಾಥ ಬಿಲ್ಲದ್, ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗದ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು, ಚೆನ್ನಮ್ಮ ಸಮಾಜದ ಅಧ್ಯಕ್ಷ ಕರಿಯಪ್ಪ ಮೇಟಿ ಹಾಗೂ ಮುಖಂಡರಾದ ಗಿರಿಜಾ ಪೊಲೀಸ್ ಪಾಟೀಲ್, ಸುಮಂಗಲಾ ಹಂಚಿನಾಳ, ಸುಜಾತಾ ಎಸ್. ಪಟ್ಟಣಶೆಟ್ಟಿ, ಮಹಾಂತೇಶ ಮಲ್ಲನಗೌಡರ, ಎಸ್.ಟಿ. ಹಂಚಿನಾಳ, ರಾಣಿ ಸುರಟೂರು ಸೇರಿದಂತೆ ಇತರರು ಇದ್ದರು.