ಸಾರಾಂಶ
ಮಹಾಮಾರಿ ಕೊರೋನಾ ಹೆಮ್ಮಾರಿ ಎದುರಿಸಲು ಸನ್ನದ್ಧರಾಗಿ ಎಂದು ಶಾಸಕ ಗಣೇಶ ಹುಕ್ಕೇರಿ ಅವರು, ತಾಲೂಕು ಕಚೇರಿಯಲ್ಲಿ ಗುರುವಾರ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಕಳೆದೆರಡು ವರ್ಷಗಳಿಂದ ದೂರವಾಗಿದ್ದ ಮತ್ತೆ ಕೋವಿಡ್-19 ಜೆಎನ್1 ರೂಪಾಂತರಿಯಾಗಿ ಪತ್ತೆಯಾದ ಹಿನ್ನೆಲೆಯಲ್ಲಿ ತಾಲೂಕು ಮಟ್ಟದ ಪೂರ್ವಭಾವಿ ಸಭೆಯನ್ನುದ್ದೇಶಿಸಿ ಮಾತನಾಡಿ,
ಕನ್ನಡಪ್ರಭ ವಾರ್ತೆ ಚಿಕ್ಕೋಡಿ
ಮಹಾಮಾರಿ ಕೊರೋನಾ ಹೆಮ್ಮಾರಿ ಎದುರಿಸಲು ಸನ್ನದ್ಧರಾಗಿ ಎಂದು ಶಾಸಕ ಗಣೇಶ ಹುಕ್ಕೇರಿ ಅಧಿಕಾರಿಗಳಿಗೆ ಹೇಳಿದರು.ತಾಲೂಕು ಕಚೇರಿಯಲ್ಲಿ ಗುರುವಾರ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಕಳೆದೆರಡು ವರ್ಷಗಳಿಂದ ದೂರವಾಗಿದ್ದ ಮತ್ತೆ ಕೋವಿಡ್-19 ಜೆಎನ್1 ರೂಪಾಂತರಿಯಾಗಿ ಪತ್ತೆಯಾದ ಹಿನ್ನೆಲೆಯಲ್ಲಿ ತಾಲೂಕು ಮಟ್ಟದ ಪೂರ್ವಭಾವಿ ಸಭೆಯನ್ನುದ್ದೇಶಿಸಿ ಮಾತನಾಡಿ, ಚಿಕ್ಕೋಡಿ ತಾಲೂಕು ಗಡಿ ಭಾಗಕ್ಕೆ ಹೊಂದಿಕೊಂಡಿರುವ ಕಾರಣ ಅಗತ್ಯ ಸಂಖ್ಯೆಯ ಪರೀಕ್ಷೆ ನಡೆಸಿ ವರದಿ ಸಲ್ಲಿಸುವಂತೆ ಹಾಗೂ ಔಷಧ, ಆಕ್ಸಿಜನ್, ಬೆಡ್ ವ್ಯವಸ್ಥೆ ಮಾಡಿಕೊಳ್ಳಲು ಸಹ ಸೂಚನೆ ನೀಡಿದರು. ಅಲ್ಲದೇ ಕೊವಿಡ್ ಟೆಸ್ಟ್ ಹೆಚ್ಚಿಸಲು ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಸೂಚನೆ ನೀಡಿದರು.
ಪ್ರಮುಖವಾಗಿ 60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಧರಿಸಲು ಮಾರ್ಗಸೂಚಿಯಲ್ಲಿ ಸಲಹೆ ನೀಡಿದ್ದು, ದೇವಸ್ಥಾನಗಳಿಗೆ ಬರುವ ಭಕ್ತರು, ಬಸ್, ಮೆಟ್ರೋ ಸೇರಿದಂತೆ ಸಾರ್ವಜನಿಕ ಸಾರಿಗೆ ಸಂಪರ್ಕ ಸಾಧನಗಳನ್ನು ಬಳಸುವ ಪ್ರಯಾಣಿಕರು ಮಾಸ್ಕ್ ಧರಿಸುವುದು ಒಳಿತು. ರೋಗ ಲಕ್ಷಣ ಇದ್ದವರು ತಮ್ಮ ಹಾಗೂ ಸುತ್ತ-ಮುತ್ತಲು ಇರುವವರ ಆರೋಗ್ಯದ ದೃಷ್ಟಿಯಿಂದ ಕಾಳಜಿ ವಹಿಸಬೇಕು. ಯಾರಿಗೂ ತೊಂದರೆ ಆಗಬಾರದು. ದೇವಸ್ಥಾನಗಳಲ್ಲೂ ಜನಜಂಗುಳಿ ಇರುವುದರಿಂದ ಎಚ್ಚರಿಕೆ ವಹಿಸಬೇಕು ಎಂದು ಮನವಿ ಮಾಡಿದರು.ಚಿಕ್ಕೋಡಿ ಉಪವಿಭಾಗ ಅಧಿಕಾರಿ ಸುಭಾಷ ಸಂಪಗಾಂವೆ, ತಹಸೀಲ್ದಾರ್ ಸಿ.ಎಸ್.ಕುಲಕರ್ಣಿ, ತಾಲೂಕು ಅಧಿಕಾರಿಗಳು, ಆರೋಗ್ಯ ಇಲಾಖೆ ಅಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.