ಸೌಲಭ್ಯ ಪಡೆದು ಶೈಕ್ಷಣಿಕವಾಗಿ ಮುಂದೆ ಬನ್ನಿ: ಬಿಇಒ

| Published : May 18 2025, 01:10 AM IST

ಸೌಲಭ್ಯ ಪಡೆದು ಶೈಕ್ಷಣಿಕವಾಗಿ ಮುಂದೆ ಬನ್ನಿ: ಬಿಇಒ
Share this Article
  • FB
  • TW
  • Linkdin
  • Email

ಸಾರಾಂಶ

ಸರ್ಕಾರಿ ಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿರುವ ಮಕ್ಕಳಿಗೆ ಸರ್ಕಾರ ಸಾಕಷ್ಟು ಸೌಲಭ್ಯಗಳನ್ನು ನೀಡುತ್ತಿದೆ. ಅದರ ಸದುಪಯೋಗ ಪಡೆದು ಶೈಕ್ಷಣಿಕವಾಗಿ ಮುಂದೆ ಬರಬೇಕು.

ನಮ್ಮ ಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮದಲ್ಲಿ ಲೇಪಾಕ್ಷಪ್ಪ ಕರೆ

ಕನ್ನಡಪ್ರಭ ವಾರ್ತೆ ಹರಪನಹಳ್ಳಿ

ಸರ್ಕಾರಿ ಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿರುವ ಮಕ್ಕಳಿಗೆ ಸರ್ಕಾರ ಸಾಕಷ್ಟು ಸೌಲಭ್ಯಗಳನ್ನು ನೀಡುತ್ತಿದೆ. ಅದರ ಸದುಪಯೋಗ ಪಡೆದು ಶೈಕ್ಷಣಿಕವಾಗಿ ಮುಂದೆ ಬರಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್. ಲೇಪಾಕ್ಷಪ್ಪ ಕರೆ ನೀಡಿದರು.

ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಬಾಲಕಿಯರ ಶಾಲೆಯಲ್ಲಿ ನಡೆದ ನಮ್ಮ ಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಕರಿದ್ದು, ಮಕ್ಕಳು ಅವರನ್ನು ಸರಿಯಾಗಿ ಬಳಸಿಕೊಳ್ಳಬೇಕು. ಕೆಲವು ದಶಕಗಳ ಹಿಂದೆ ಹಳೆಯ ಕಟ್ಟಡಗಳಲ್ಲಿಯೇ ಮಕ್ಕಳು ಕಲಿಕೆ ಮಾಡಬೇಕಿತ್ತು. ಆದರೆ ಇಂದಿನ ಮಕ್ಕಳಿಗೆ ಸುಸಜ್ಜಿತ ಕೊಠಡಿ, ಪ್ರಯೋಗಾಲಯ ಹಾಗೂ ಗ್ರಂಥಾಲಗಳಿದ್ದು, ಸ್ಪರ್ಧಾತ್ಮಕ ಪರೀಕ್ಷೆಗಳಿಗೂ ತಯಾರಿ ನಡೆಸಬಹುದು ಎಂದರು.

ಇಂದಿನ ಮಕ್ಕಳಿಗೆ ಸರ್ಕಾರ ಶಾಲೆಗಳಲ್ಲಿ ಉತ್ತಮ ಆಹಾರ ನೀಡುತ್ತಿದೆ. ಅದರ ಜತೆಗೆ ಕ್ಷೀರಭಾಗ್ಯ ಯೋಜನೆಯಡಿ ವಾರದಲ್ಲಿ ಐದು ದಿನಗಳ ಕಾಲ ಬಿಸಿ ಹಾಲು ಮತ್ತು ರಾಗಿ ಮಾಲ್ಟ್ ಒದಗಿಸಲಾಗುತ್ತದೆ, ಇದರಿಂದ ಮಕ್ಕಳು ಉತ್ತಮ ಆರೋಗ್ಯದಿಂದ ಶಿಕ್ಷಣ ಪಡೆಯಲು ಸಹಕಾರಿಯಾಗುತ್ತದೆ ಮತ್ತು ವಾರದ ಆರು ದಿನಗಳಲ್ಲಿ ಮೊಟ್ಟೆ, ಬಾಳೆಹಣ್ಣು ಒದಗಿಸಲಾಗುತ್ತಿದೆ ಎಂದರು. ಕ್ಷೇತ್ರ ಸಮನ್ವಯಾಧಿಕಾರಿ ಎಸ್. ಹೊನ್ನತ್ತೆಪ್ಪ ಮಾತನಾಡಿದರು.

ತಾಲೂಕು ಬಿಸಿಯೂಟ ಸಹಾಯಕ ನಿರ್ದೇಶಕ ನಾಗರಾಜ, ದೈಹಿಕ ಪರಿವೀಕ್ಷಕ ಕೆ. ಷಣ್ಮುಖಪ್ಪ, ಸಿಆರ್‌ಪಿ ಎಚ್.ಎಂ. ಶಿವಪ್ರಕಾಶ್, ಎಸ್‌ಡಿಎಂಸಿ ಅಧ್ಯಕ್ಷೆ ಜ್ಯೋತಿ ರತ್ನಕಟ್ಟಿ, ಮುಖ್ಯಶಿಕ್ಷಕ ಅರ್ಜುನ ಪರುಸಪ್ಪ, ಶಿಕ್ಷಕರಾದ ನಿರ್ಮಲ ಕುಮಾರಿ, ರೇಣುಕಾ, ಗೀತಾಬಾಯಿ, ಉಮಾದೇವಿ, ಸುರೇಶ, ಗೌರೀಶ್ವರಿ, ಬಸಮ್ಮ, ನಿಂಗಮ್ಮ, ಚಂದ್ರಶೇಖರ, ನಾಗರಾಜ, ಮಹಾಲಿಂಗ ಗಾವಡೆ, ಗಂಗಾಧರ, ಶೇಖರನಾಯ್ಕ ಇತರರಿದ್ದರು.