ಕುಷ್ಠರೋಗ ಲಕ್ಷಣಗಳು ಕಂಡುಬಂದಲ್ಲಿ ಚಿಕಿತ್ಸೆ ಪಡೆದುಕೊಳ್ಳಿ: ಸುರೇಶ ವರ್ಮಾ

| Published : Feb 03 2024, 01:47 AM IST

ಕುಷ್ಠರೋಗ ಲಕ್ಷಣಗಳು ಕಂಡುಬಂದಲ್ಲಿ ಚಿಕಿತ್ಸೆ ಪಡೆದುಕೊಳ್ಳಿ: ಸುರೇಶ ವರ್ಮಾ
Share this Article
  • FB
  • TW
  • Linkdin
  • Email

ಸಾರಾಂಶ

ರಾಯಚೂರು ನಗರದ ತಹಸೀಲ್ದಾರ್‌ ಕಚೇರಿಯಲ್ಲಿ ಸ್ಪರ್ಶ ಕುಷ್ಠರೋಗ ಅರಿವು ಆಂದೋಲನ ಪಾಕ್ಷಿಕ ಕಾರ್ಯಕ್ರಮ ನಡೆಯಿತು.

ಕನ್ನಡಪ್ರಭ ವಾರ್ತೆ ರಾಯಚೂರು

ಕುಷ್ಠರೋಗ ಲಕ್ಷಣಗಳು ಕಂಡು ಬಂದ ಕೂಡಲೇ ಚಿಕಿತ್ಸೆ ಪಡೆದುಕೊಂಡಾಗ ರೋಗ ಸಂಪೂರ್ಣ ಗುಣಪಡಿಸಬಹುದಾಗಿದ್ದು, ಜನರು ಭಯಪಡೆದೇ ಚಿಕಿತ್ಸೆಗೆ ಮುಂದಾಗಬೇಕು ಎಂದು ತಹಸೀಲ್ದಾರ್‌ ಸುರೇಶ ವರ್ಮಾ ಹೇಳಿದರು.

ನಗರದ ತಹಸೀಲ್ದಾರ್‌ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಸ್ಪರ್ಶ ಕುಷ್ಠರೋಗ ಅರಿವು ಆಂದೋಲನ ಪಾಕ್ಷಿಕ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.

ಕುಷ್ಠರೋಗ ಬರುವದಕ್ಕಿಂತ ಮುಂಚೆಯೇ ಪತ್ತೆ ಹಚ್ಚಿ ಅದನ್ನು ಗುಣಪಡಿಸಬೇಕು. ಇದಕ್ಕೆ ಎಲ್ಲ ಇಲಾಖೆಯವರು ಆರೋಗ್ಯ ಇಲಾಖೆಯವರಿಗೆ ಸಹಕಾರ ನೀಡಬೇಕು ಎಂದು ತಿಳಿಸಿದರು.

ಈ ಅಭಿಯಾನ ಶಾಲೆಯಲ್ಲಿ ಮತ್ತು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನಡೆಯುವದರಿಂದ ಎಲ್ಲರೂ ಮುಚ್ಚು ಮರೆ ಇಲ್ಲದೇ ತಪಾಸಣೆ ಮಾಡಿಸಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಅಲಕ್ಷತನವಹಿಸಬಾರದು ಎಂದು ಹೇಳಿದರು.

ತಾಲೂಕು ಆರೋಗ್ಯಾಧಿಕಾರಿ ಡಾ.ಪ್ರಜ್ವಲ ಕುಮಾರ ಮಾತನಾಡಿ, ಕುಷ್ಠರೋಗವು ಮುಖ್ಯವಾಗಿ ಚರ್ಮ ಹಾಗೂ ನರಗಳಿಗೆ ಸಂಬಂಧಿಸಿದ್ದಾಗಿದ್ದು, ಪ್ರಾರಂಭದಲ್ಲೇ ಕಂಡು ಹಿಡಿದು ಚಿಕಿತ್ಸೆಗೊಳಪಡಿಸಿದರೆ ಅಂಗವಿಕಲತೆ ಆಗುವುದಿಲ್ಲ. ಗುಣಮುಖ ಹೊಂದಿದ ಅಂಗವಿಕಲ ಕುಷ್ಠರೋಗಿಗಳನ್ನು ಆರ್.ಸಿ.ಎಸ್. ಶಸ್ತ್ರ ಚಿಕಿತ್ಸೆಯಿಂದ ಸರಿಪಡಿಸಲಾಗುವುದು ಎಂದರು.

ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಪವಾರ ಮಾತನಾಡಿದರು. ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ರಂಗರಾವ್ ಕುಲಕರ್ಣಿ ಐಕೂರ ಅವರು ಸ್ಪರ್ಶ ಕುಷ್ಠರೋಗ ಕಾರ್ಯಕ್ರಮದ ಕುರಿತು ಪ್ರತಿಜ್ಞಾವಿಧಿ ಬೋಧಿಸಿದರು.

ಶಿಕ್ಷಣ ಇಲಾಖೆ, ನಗರ ಸಭೆ, ಆರ್, ಬಿ,ಎಸ್.ಕೆ ವೈದ್ಯರು ಜಿಲ್ಲಾ ಕುಷ್ಠರೋಗ ಕಚೇರಿ ಸಿಬ್ಬಂದಿ ಹಾಜರಿದ್ದರು. ಕೊನೆಯಲ್ಲಿ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಸರೋಜ.ಕೆ ವಂದಿಸಿದರು.