ಸಾರಾಂಶ
ಕನ್ನಡಪ್ರಭ ವಾರ್ತೆ ವಿಜಯಪುರ ಎಲ್ಲ ವರ್ಗಗಳಿಗೆ ಇಂದು ಸರ್ಕಾರಿ ನೌಕರಿ ಸಿಗುತ್ತಿರುವುದು ನಮ್ಮ ದೇಶದ ಸಂವಿಧಾನದ ಕೊಡುಗೆಯಾಗಿದೆ ಎಂದು ನಿವೃತ್ತ ಡಿವೈಎಸ್ಪಿ ಸುಹೇಲ್ ಅಹ್ಮದ್ ಹೇಳಿದರು. ನಗರದ ಕಂದಗಲ್ ಹಣಮಂತರಾಯ ರಂಗ ಮಂದಿರದಲ್ಲಿ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಹಾಗೂ ದಲಿತ ವಿದ್ಯಾರ್ಥಿ ಪರಿಷತ್ ಸಂಯುಕ್ತ ಆಶ್ರಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ ಹೇಗೆ ಎಂಬ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ಕನ್ನಡಪ್ರಭ ವಾರ್ತೆ ವಿಜಯಪುರ
ಎಲ್ಲ ವರ್ಗಗಳಿಗೆ ಇಂದು ಸರ್ಕಾರಿ ನೌಕರಿ ಸಿಗುತ್ತಿರುವುದು ನಮ್ಮ ದೇಶದ ಸಂವಿಧಾನದ ಕೊಡುಗೆಯಾಗಿದೆ ಎಂದು ಮಾಜಿ ಡಿವೈಎಸ್ಪಿ ಸುಹೇಲ್ ಅಹ್ಮದ್ ಹೇಳಿದರು.ನಗರದ ಕಂದಗಲ್ ಹಣಮಂತರಾಯ ರಂಗ ಮಂದಿರದಲ್ಲಿ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಹಾಗೂ ದಲಿತ ವಿದ್ಯಾರ್ಥಿ ಪರಿಷತ್ ಸಂಯುಕ್ತ ಆಶ್ರಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ ಹೇಗೆ ಎಂಬ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಹಾಗೂ ಯುವಜನರು ಎಲ್ಲ ರೀತಿಯ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಬೇಕು. ತಮ್ಮ ಬದುಕನ್ನು ಅರ್ಥಪೂರ್ಣವಾಗಿ ಕಟ್ಟಿಕೊಳ್ಳುವ ಜೊತೆಗೆ ದೇಶವನ್ನು ಅಭಿವೃದ್ಧಿ ಪಡಿಸಲು ಮತ್ತು ದೇಶ ಸೇವೆ ಮಾಡುವ ಏಕೈಕ ಉದ್ದೇಶದಿಂದ ಸರ್ಕಾರಿ ನೌಕರರಾಗಬೇಕು ಹೊರತು, ತಮ್ಮ ಹೊಟ್ಟೆಪಾಡಿಗಲ್ಲ ಎಂದು ಹೇಳಿದರು.
ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ರಾಹುಲ್ ಕುಮಾರ್ ಭಾವಿದೊಡ್ಡಿ ಮಾತನಾಡಿ, ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವ ತಯಾರಿ ಯಾವ ರೀತಿ ನಡೆಸಬೇಕು ಎಂಬುದರ ಬಗ್ಗೆ ಮಾಹಿತಿ ನೀಡಿದರು.ಇದೇ ವೇಳೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಮಂಜುಳಾ ಪಾಟೀಲ, ಬಿ.ಜೆ.ಇಂಡಿ ಅವರು ಇಲಾಖೆಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ ಇರುವ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.
ದಲಿತ ವಿದ್ಯಾರ್ಥಿ ಪರಿಷತ್‌ನ ಸಂಸ್ಥಾಪಕ ಅಧ್ಯಕ್ಷ ಶ್ರೀನಾಥ ಪೂಜಾರಿ, ಪರಿಷತ್‌ನ ರಾಜ್ಯ ಸಂಚಾಲಕ ಬಾಲಾಜಿ ಎಂ.ಕಾಂಬಳೆ, ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಮುಂತಾದವರು ಉಪಸ್ಥಿತರಿದ್ದರು.