ಸಾರಾಂಶ
ಕನ್ನಡಪ್ರಭ ವಾರ್ತೆ ಅಥಣಿ
ಎಚ್ ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆ, ತಾಲೂಕು ಘಟಕದ ವತಿಯಿಂದ ಡಿ.7 ರಂದು ಬೆಳಗ್ಗೆ 11 ಗಂಟೆಗೆ ಪಟ್ಟಣದ ಶಿವಯೋಗಿ ಮುರುಘೇಂದ್ರ ಸ್ವಾಮೀಜಿ ಪದವಿ ಮಹಾವಿದ್ಯಾಲಯದ ಖೋತ ಸಭಾಂಗಣದಲ್ಲಿ ಗಡಿನಾಡು ಕನ್ನಡೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕರವೇ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಣ್ಣಾಸಾಹೇಬ ತೆಲಸಂಗ ಹೇಳಿದರು.ಪಟ್ಟಣದಲ್ಲಿ ಗುರುವಾರ ಗಡಿನಾಡು ಕನ್ನಡೋತ್ಸವ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರವೇ ಸಂಘಟನೆ ವತಿಯಿಂದ ಗಡಿನಾಡು ಕನ್ನಡ ಉತ್ಸವ ಕಾರ್ಯಕ್ರಮದ ನಿಮಿತ್ತ ಕನ್ನಡ ಸಾಧಕರಿಗೆ ಗಡಿನಾಡು ಕನ್ನಡ ರತ್ನ ಪ್ರಶಸ್ತಿ ಪ್ರದಾನ ಹಾಗೂ ಇತ್ತೀಚಿಗೆ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಶುದ್ಧ ಕನ್ನಡ ಭಾಷಣ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಲಾಗುವುದು. ಪಂ.ಪುಟ್ಟರಾಜ ಗವಾಯಿ ಕಲಾ ಬಳಗದಿಂದ ಕನ್ನಡ ರಸಮಂಜರಿ ಕಾರ್ಯಕ್ರಮ ಜರುಗಲಿದೆ ಎಂದು ತಿಳಿಸಿದರು.ಕರವೇ ತಾಲೂಕು ಅಧ್ಯಕ್ಷ ಉದಯ ಮಾಕಾಣಿ ಮಾತನಾಡಿ, ಶೆಟ್ಟರ ಮಠದ ಮರುಳಸಿದ್ದ ಸ್ವಾಮೀಜಿ, ಶೇಗುಣಸಿಯ ಡಾ.ಮಹಾಂತ ಪ್ರಭು ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಎಚ್.ಶಿವರಾಮೇಗೌಡ ಉದ್ಘಾಟಿಸಲಿದ್ದಾರೆ. ಹಿರಿಯ ಸಾಹಿತಿ ಹಾಗೂ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ.ಬಾಳಾಸಾಹೇಬ ಲೋಕಾಪುರ ಪ್ರಶಸ್ತಿ ಪ್ರದಾನ ಮಾಡುವರು. ಡಾ.ಮಲ್ಲಿಕಾರ್ಜುನ ಹಂಜಿ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸುವರು. ಬೆಳಗಾವಿ ಜಿಲ್ಲಾ ಕರವೇ ಅಧ್ಯಕ್ಷ ವಾಜಿದ್ ಹಿರೆಕೊಡಿ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಪುರಸಭೆ ಅಧ್ಯಕ್ಷ ಶಿವಲೀಲಾ ಸದಾಶಿವ ಬೂಟಾಳಿ, ಉಪಾಧ್ಯಕ್ಷ ಭುವನೇಶ್ವರಿ ಬೀರಪ್ಪ ಯಕ್ಕಂಚಿ, ಸಮಾಜ ಸೇವಕ ಮಹಾವೀರ ಪಡನಾಡ, ಪುರಸಭೆ ಸದಸ್ಯ ರಾವಸಾಬ ಐಹೊಳೆ, ಸಂತೋಷ ಸಾವಡಕರ, ಧರೆಪ್ಪ ಠಕ್ಕಣ್ಣವರ, ಅರುಣ ಯಲಗುದ್ರಿ, ಡಾ.ಅರ್ಚನಾ ಅಥಣಿ, ಎಸ್.ಕೆ.ಹೊಳೆಪ್ಪನವರ, ಡಾ.ಆರ್.ಎಸ್. ದೊಡ್ಡನಿಂಗಪ್ಪಗೋಳ, ಅರುಣ ಸೌದಾಗರ ಸೇರಿದಂತೆ ಅನೇಕ ಗಣ್ಯರು ಹಾಗೂ ಕನ್ನಡ ಅಭಿಮಾನಿಗಳು ಆಗಮಿಸಲಿದ್ದಾರೆ ಎಂದು ತಿಳಿಸಿದರು.ಜಗನ್ನಾಥ ಬಾಮನೆ, ಸಿದ್ದು ಹಂಡಗಿ, ರಾಜು ವಾಘಮಾರೆ, ವಿನಯ ಪಾಟೀಲ, ಸುಕುಮಾರ ಮಾದರ, ಅನಿಲ ಒಡೆಯರ, ಸತೀಶ ಯಲ್ಲಟ್ಟಿ, ಅನಿಲ ಪಾಟೀಲ, ವಿಜುಗೌಡ ನೇಮಗೌಡ, ವಿಜಯ ಹುದ್ದಾರ, ವಿಲಾಸರಾವ್ ಕುಲಕರ್ಣಿ, ಪರಶುರಾಮ ಕಾಂಬಳೆ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.ಕರವೇ ಸಂಘಟನೆ ವತಿಯಿಂದ ಗಡಿನಾಡು ಕನ್ನಡ ಉತ್ಸವ ಕಾರ್ಯಕ್ರಮದ ನಿಮಿತ್ತ ಕನ್ನಡ ಸಾಧಕರಿಗೆ ಗಡಿನಾಡು ಕನ್ನಡ ರತ್ನ ಪ್ರಶಸ್ತಿ ಪ್ರದಾನ ಹಾಗೂ ಇತ್ತೀಚಿಗೆ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಶುದ್ಧ ಕನ್ನಡ ಭಾಷಣ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಲಾಗುವುದು. ಪಂ.ಪುಟ್ಟರಾಜ ಗವಾಯಿ ಕಲಾ ಬಳಗದಿಂದ ಕನ್ನಡ ರಸಮಂಜರಿ ಕಾರ್ಯಕ್ರಮ ಜರುಗಲಿದೆ.
-ಅಣ್ಣಾಸಾಹೇಬ ತೆಲಸಂಗ, ಕರವೇ ಜಿಲ್ಲಾ ಪ್ರಧಾನ ಕಾರ್ಯದರ್ಶಿ.