ಕರಾವಳಿ ಪ್ರದೇಶಗಳ ಅಭಿವೃದ್ಧಿಗೆ ಸಂಬಂಧಿಸಿದ ಎಲ್ಲ ಕಾಮಗಾರಿಗಳನ್ನು ಆದ್ಯತೆಯೊಂದಿಗೆ ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು ಎಂದು ಸಂಬಂಧಿತ ಅಧಿಕಾರಿಗಳಿಗೆ ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ. ಗಫೂರ್ ನಿರ್ದೇಶನ ನೀಡಿದರು.

ಮಂಗಳೂರು: ಕರಾವಳಿ ಪ್ರದೇಶಗಳ ಅಭಿವೃದ್ಧಿಗೆ ಸಂಬಂಧಿಸಿದ ಎಲ್ಲ ಕಾಮಗಾರಿಗಳನ್ನು ಆದ್ಯತೆಯೊಂದಿಗೆ ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು ಎಂದು ಸಂಬಂಧಿತ ಅಧಿಕಾರಿಗಳಿಗೆ ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ. ಗಫೂರ್ ನಿರ್ದೇಶನ ನೀಡಿದರು. ಕರಾವಳಿ ಅಭಿವೃದ್ಧಿ ಮಂಡಳಿಯ ವತಿಯಿಂದ ಮಂಗಳೂರಿನಲ್ಲಿ ಶುಕ್ರವಾರ ನಡೆದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ವಿವಿಧ ಅನುಷ್ಠಾನ ಸಂಸ್ಥೆಗಳ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪ್ರಗತಿಯಲ್ಲಿರುವ ವಿವಿಧ ಕಾಮಗಾರಿಗಳ ಸ್ಥಳ ಪರಿಶೀಲನೆಯನ್ನು ಮುಂದಿನ ದಿನಗಳಲ್ಲಿ ಕೈಗೊಳ್ಳುವುದಾಗಿ ಅವರು ತಿಳಿಸಿದರು.ಕರಾವಳಿ ಅಭಿವೃದ್ಧಿ ಮಂಡಳಿಯಿಂದ ವಿವಿಧ ಅನುಷ್ಠಾನ ಸಂಸ್ಥೆಗಳ ಮೂಲಕ ಕೈಗೆತ್ತಿಕೊಳ್ಳಲಾಗಿರುವ ಕಾಮಗಾರಿಗಳ ಪ್ರಗತಿಯನ್ನು ಸಮಗ್ರವಾಗಿ ಪರಿಶೀಲಿಸಲಾಯಿತು.

ಕರಾವಳಿ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ಪ್ರದೀಪ್ ಡಿಸೋಜಾ, ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಮಂಜುನಾಥ್ ಆರ್.ಶೆಟ್ಟಿ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಶ್ರೀಧರ್, ಲೆಕ್ಕಪರಿಶೋಧನಾಧಿಕಾರಿ ಮೊಹಮ್ಮದ್ ತೌಸೀಫ್, ಮಂಡಳಿಯ ವಲಯಾಧಿಕಾರಿಗಳು, ಸಿಬ್ಬಂದಿ ಹಾಗೂ ಮೂರು ಕರಾವಳಿ ಜಿಲ್ಲೆಗಳ ವಿವಿಧ ಅನುಷ್ಠಾನ ಸಂಸ್ಥೆಗಳ ಅಧಿಕಾರಿಗಳು ಇದ್ದರು.