ಘಾಟಿ ಸುಬ್ರಹ್ಮಣ್ಯ: 53 ಲಕ್ಷ ಕಾಣಿಕೆ ಸಂಗ್ರಹ

| Published : Mar 29 2024, 12:47 AM IST

ಸಾರಾಂಶ

ದೊಡ್ಡಬಳ್ಳಾಪುರ: ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಾಸಿಕ ಹುಂಡಿ ಹಣ ಎಣಿಕೆ ಕಾರ್ಯನಡೆಯಿತು. ಈ ಬಾರಿ ಹುಂಡಿಯಲ್ಲಿಒಟ್ಟು 53,54,401 ರುಪಾಯಿ ಕಾಣಿಕೆ ಹಣ ಸಂಗ್ರಹವಾಗಿದೆ.

ದೊಡ್ಡಬಳ್ಳಾಪುರ: ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಾಸಿಕ ಹುಂಡಿ ಹಣ ಎಣಿಕೆ ಕಾರ್ಯನಡೆಯಿತು. ಈ ಬಾರಿ ಹುಂಡಿಯಲ್ಲಿಒಟ್ಟು 53,54,401 ರುಪಾಯಿ ಕಾಣಿಕೆ ಹಣ ಸಂಗ್ರಹವಾಗಿದೆ. ಅಲ್ಲದೆ 1.3 ಗ್ರಾಂ ಚಿನ್ನ, 1.54 ಕೆ.ಜಿ ಬೆಳ್ಳಿ ಆಭರಣಗಳು ಸಂಗ್ರಹವಾಗಿವೆ ಎಂದು ದೇವಾಲಯ ಆಡಳಿತ ಮಂಡಳಿ ತಿಳಿಸಿದೆ. ಹುಂಡಿ ಹಣ ಎಣಿಕೆ ಕಾರ್ಯದಲ್ಲಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ನಾಗರಾಜು, ಮುಜರಾಯಿ ಇಲಾಖೆ ತಹಶೀಲ್ದಾರ್ ಜೆ.ಜೆ.ಹೇಮಾವತಿ, ಪ್ರಧಾನ ಅರ್ಚಕ ನಾಗೇಂದ್ರ ಶರ್ಮ, ಕೆನರಾ ಬ್ಯಾಂಕ್ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ ಹಾಗೂ ದೇವಾಲಯದ ಸಿಬ್ಬಂದಿ ಭಾಗವಹಿಸಿದ್ದರು.